ಮುಂಬೈ/ರಾಂಚಿ: ಮಹಾರಾಷ್ಟ್ರ ಮತ್ತು ಜಾರ್ಖಂಡ್ ವಿಧಾನಸಭೆಗೆ ಬುಧವಾರ ಮತದಾನ ನಡೆಯಲಿದ್ದು, 288 ಕ್ಷೇತ್ರಗಳ ಮಹಾರಾಷ್ಟ್ರದಲ್ಲಿ 4136 ಹಾಗೂ 2ನೇ ಹಂತದಲ್ಲಿ ಚುನಾವಣೆ ನಡೆಯುತ್ತಿರುವ ಜಾರ್ಖಂಡ್‌ನ 38 ಕ್ಷೇತ್ರಗಳಲ್ಲಿ 526 ಮಂದಿ ತಮ್ಮ ಅದೃಷ್ಟವನ್ನು ಪಣಕ್ಕೊಡ್ಡಿದ್ದಾರೆ.
ಮಹಾರಾಷ್ಟ್ರದಲ್ಲಿ ಅಧಿಕಾರದಲ್ಲಿರುವ ಮಹಾ ಯುತಿ ಮೈತ್ರಿಕೂಟ ಅಧಿಕಾರ ಉಳಿಸಿಕೊಳ್ಳಲು ಯೋಜನೆ ರೂಪಿಸಿದ್ದರೆ, ಮಹಾಘಟಬಂಧನ್ ಕೂಟ ಅಧಿಕಾರಕ್ಕೇರಲು ತಂತ್ರ ರೂಪಿಸಿದೆ. ಕಳೆದ ಚುನಾವಣೆಗೆ ಹೋಲಿಸಿದರೆ ರಾಜ್ಯದಲ್ಲಿ ಸ್ಪರ್ಧಿಗಳ ಸಂಖ್ಯೆಯಲ್ಲಿ ಶೇ.28ರಷ್ಟು ಏರಿಕೆಯಾಗಿದ್ದು, ಮತದಾರ ಯಾರ ಕೈಹಿಡಿಯಲಿದ್ದಾನೆ ಎಂಬ ಕುತೂಹಲ ಮೂಡಿದೆ.
ಮಹಾರಾಷ್ಟ್ರದಲ್ಲಿ ಬರೋಬ್ಬರಿ 2086 ಮಂದಿ ಪಕ್ಷೇ ತರರು ಕಣದಲ್ಲಿದ್ದು, ಇವರು ಚುನಾವಣೆಯ ಫಲಿ ತಾಂಶವನ್ನು ಬುಡಮೇಲು ಮಾಡುವ ತಾಕತ್ತು ಹೊಂದಿ ದ್ದಾರೆ ಎಂಬ ವಿಶ್ಲೇಷಣೆಗಳು ಕೇಳಿಬಂದಿವೆ. 9.7 ಕೋಟಿ ಮಂದಿ ತಮ್ಮ ಹಕ್ಕು ಚಲಾವಣೆ ಮಾಡಲಿದ್ದು, 1 ಲಕ್ಷಕ್ಕೂ ಅಧಿಕ ಮತಗಟ್ಟೆಗಳನ್ನು ಸ್ಥಾಪನೆ ಮಾಡಲಾಗಿದೆ.
ಜಾರ್ಖಂಡಲ್ಲಿ 2ನೇ ಹಂತದ ಮತದಾನ: ಜಾರ್ಖಂಡ್ ವಿಧಾನಸಭೆಯ 38 ಸ್ಥಾನಗಳಿಗೆ ಬುಧವಾರ ಮತದಾನ ನಡೆಯಲಿದೆ. ರಾಜ್ಯದಲ್ಲಿ ಒಟ್ಟು 14,218 ಮತಗಟ್ಟೆಗಳನ್ನು ಸ್ಥಾಪನೆ ಮಾಡಲಾಗಿದ್ದು, 1.23 ಕೋಟಿ ಮಂದಿ ಮತ ಚಲಾಯಿಸಲಿದ್ದಾರೆ. ಒಟ್ಟಾರೆ 528 ಮಂದಿ ಕಣದಲ್ಲಿದ್ದು, ಇದರಲ್ಲಿ 472 ಮಂದಿ ಪುರುಷರು ಹಾಗೂ 55 ಮಂದಿ ಮಹಿಳೆಯರಾಗಿದ್ದಾರೆ.
ಜಾರ್ಖಂಡ್‌ನಲ್ಲಿ ಅಧಿಕಾರ ಉಳಿಸಿಕೊಳ್ಳಲು ಇಂಡಿಯಾ ಮೈತ್ರಿಕೂಟದ ಕಾಂಗ್ರೆಸ್ ಜೆಎಂಎಂಗಳು ಸಕಲ ಸಿದ್ಧತೆ ನಡೆಸಿವೆ. ರಾಜ್ಯದಲ್ಲಿ ಭ್ರಷ್ಟಾಚಾರ ಹೆಚ್ಚಾಗುತ್ತಿದೆ ಎಂಬ ಆರೋಪ ಮಾಡುತ್ತಿರುವ ಬಿಜೆಪಿ ಬುಡಕಟ್ಟು ರಾಜ್ಯದಲ್ಲಿ ಮತ ಸೆಳೆಯಲು ಮುಂದಾಗಿದೆ.
4 ರಾಜ್ಯಗಳ 15 ಕ್ಷೇತ್ರಗಳಿಗೆ ಇಂದು ಉಪಚುನಾವಣೆ
ಮಹಾರಾಷ್ಟ್ರ, ಜಾರ್ಖಂಡ್ ವಿಧಾನಸಭೆ ಚುನಾವಣೆಯ ಜೊತೆಗೆ ಉತ್ತರ ಪ್ರದೇಶ, ಪಂಜಾಬ್, ಕೇರಳ ಮತ್ತು ಉತ್ತರಾಖಂಡ ರಾಜ್ಯಗಳ 15 ವಿಧಾನಸಭಾ ಕ್ಷೇತ್ರಗಳಿಗೂ ಬುಧ ವಾರ ಉಪಚುನಾವಣೆ ನಡೆಯಲಿದೆ. ಉತ್ತರ ಪ್ರದೇಶದ 9, ಪಂಜಾಬ್‌ನ 4 ಮತ್ತು ಕೇರಳದ 1 ಸ್ಥಾನಕ್ಕೆ ಉಪಚುನಾವಣೆ ನಡೆಯ ಲಿದೆ. ಎಲ್ಲಾ ವಿಧಾನಸಭೆ ಉಪಚುನಾವಣೆಗಳ ಫಲಿತಾಂಶ ನ.23ರಂದು ಪ್ರಕಟವಾಗಲಿದೆ.