Advertisement
ಮಹಾರಾಷ್ಟ್ರದಲ್ಲಿ ಅಧಿಕಾರ ಉಳಿಸಿಕೊಳ್ಳಲು ಬಿಜೆಪಿ, ಏಕನಾಥ ಶಿಂಧೆ ನೇತೃತ್ವದ ಶಿವಸೇನೆ, ಅಜಿತ್ ಪವಾರ್ ಬಣದ ಎನ್ಸಿಪಿ ಹಲವು ಜನಪ್ರಿಯ ಯೋಜನೆಗಳನ್ನು ಘೋಷಣೆ ಮಾಡಿದೆ. ಚುನಾವಣೆಯ ಹೊಸ್ತಿಲಲ್ಲಿ ಪ್ರಧಾನಿ ಮೋದಿ ಹಾಗೂ ಯೋಗಿ ನೀಡಿರುವ ಘೋಷಣೆಗಳು ಚುನಾವಣೆಯ ಮೇಲೆ ಪ್ರಭಾವ ಬೀರುವ ಸಾಧ್ಯತೆಗಳು ದಟ್ಟವಾಗಿವೆ.
ಜಾರ್ಖಂಡ್ನಲ್ಲಿ 2ನೇ ಹಾಗೂ ಕೊನೇ ಹಂತದ ಮತದಾನ ನಡೆಯುತ್ತಿದ್ದು, ಈಗಾಗಲೇ 43 ಕ್ಷೇತ್ರಗಳಲ್ಲಿ ಚುನಾವಣೆ ಮುಕ್ತಾಯವಾಗಿದೆ. 2ನೇ ಹಂತದಲ್ಲಿ ಮತದಾನ ಮಾಡಲು 1.23 ಕೋಟಿ ಮತದಾರರು ಸಿದ್ಧವಾಗಿದ್ದು, 528 ಅಭ್ಯರ್ಥಿಗಳ ಭವಿಷ್ಯ ನಿರ್ಧರಿಸಲಿದ್ದಾರೆ. ಬಹಿರಂಗ ಪ್ರಚಾರ ಅಂತ್ಯಗೊಂಡಿರುವ ಹಿನ್ನೆಲೆಯಲ್ಲಿ ಮಂಗಳವಾರ ಮನೆ ಮನೆ ಪ್ರಚಾರ ಕೈಗೊಳ್ಳುವ ಮೂಲಕ ಅಭ್ಯರ್ಥಿಗಳು ಮತಯಾಚನೆ ಮಾಡಲಿದ್ದಾರೆ. ಇಂಡಿಯಾ ಮೈತ್ರಿಕೂಟಕ್ಕೆ ಇದು ಮಹತ್ವದ ಚುನಾವಣೆಯಾಗಿದ್ದು, ಮತ್ತೂಮ್ಮೆ ಅಧಿಕಾರ ಹಿಡಿಯಲು ಎನ್ಡಿಎ ಮೈತ್ರಿಕೂಟ ಸಹ ಸಕಲ ಸಿದ್ಧತೆಯನ್ನು ನಡೆಸಿದೆ.
Related Articles
1000 ಕೋಟಿ ರೂ.ಗೆ ಏರಿಕೆ
ನವದೆಹಲಿ: ಪ್ರಸ್ತುತ ನಡೆಯುತ್ತಿರುವ ವಿಧಾನಸಭೆ ಚುನಾವಣೆ, ಉಪಚುನಾವಣೆಗಳ ಸಮಯದಲ್ಲಿ ವಶಪಡಿಸಿಕೊಳ್ಳಲಾದ ಅಕ್ರಮ ಹಣ ಮತ್ತು ವಸ್ತುಗಳ ಸಂಖ್ಯೆ 1,082 ಕೋಟಿ ರೂ.ಗೆ ಏರಿದೆ ಎಂದು ಚುನಾವಣಾ ಆಯೋಗ ತಿಳಿಸಿದೆ. ಮಹಾರಾಷ್ಟ್ರ ಮತ್ತು ಜಾರ್ಖಂಡ್ ಚುನಾವಣೆಯಲ್ಲಿ 858 ಕೋಟಿ ರೂ. ಜಪ್ತಿ ಮಾಡಲಾಗಿದೆ. ಇದರಲ್ಲಿ ನಗದು, ಮದ್ಯ, ಮಾದಕವಸ್ತು, ಉಡುಗೊರೆಗಳು ಸೇರಿವೆ ಎಂದು ಚುನಾವಣಾ ಆಯೋಗ ಹೇಳಿದೆ.
Advertisement