Advertisement

Election: ಮಹಾರಾಷ್ಟ್ರ, ಜಾರ್ಖಂಡ್‌ ಚುನಾವಣೆ ಪ್ರಚಾರಕ್ಕೆ ತೆರೆ: ನಾಳೆ ಮತದಾನ

11:07 PM Nov 18, 2024 | Team Udayavani |

ಮುಂಬೈ/ ರಾಂಚಿ: ಮಹಾರಾಷ್ಟ್ರದ ಎಲ್ಲಾ 288 ಕ್ಷೇತ್ರಗಳಿಗೆ ಹಾಗೂ ಜಾರ್ಖಂಡ್‌ನ‌ 38 ಕ್ಷೇತ್ರಗಳಿಗೆ ಬುಧವಾರ ಮತದಾನ ನಡೆಯಲಿದ್ದು, ಸೋಮವಾರ ಉಭಯ ರಾಜ್ಯಗಳಲ್ಲಿ ಬಹಿರಂಗ ಪ್ರಚಾರಕ್ಕೆ ತೆರೆ ಬಿದ್ದಿದೆ. ಉಭಯ ರಾಜ್ಯಗಳಲ್ಲಿ ಪ್ರಧಾನಿ ನರೇಂದ್ರ ಮೋದಿ, ಅಮಿತ್‌ ಶಾ, ರಾಹುಲ್‌ ಗಾಂಧಿ, ಪ್ರಿಯಾಂಕಾ ಗಾಂಧಿ ಅವರಂತಹ ಘಟಾನುಘಟಿಗಳು ಪ್ರಚಾರ ನಡೆಸಿದ್ದು, ಫ‌ಲಿತಾಂಶ ಭಾರಿ ಕುತೂಹಲ ಮೂಡಿಸಿದೆ.

Advertisement

ಮಹಾರಾಷ್ಟ್ರದಲ್ಲಿ ಅಧಿಕಾರ ಉಳಿಸಿಕೊಳ್ಳಲು ಬಿಜೆಪಿ, ಏಕನಾಥ ಶಿಂಧೆ ನೇತೃತ್ವದ ಶಿವಸೇನೆ, ಅಜಿತ್‌ ಪವಾರ್‌ ಬಣದ ಎನ್‌ಸಿಪಿ ಹಲವು ಜನಪ್ರಿಯ ಯೋಜನೆಗಳನ್ನು ಘೋಷಣೆ ಮಾಡಿದೆ. ಚುನಾವಣೆಯ ಹೊಸ್ತಿಲಲ್ಲಿ ಪ್ರಧಾನಿ ಮೋದಿ ಹಾಗೂ ಯೋಗಿ ನೀಡಿರುವ ಘೋಷಣೆಗಳು ಚುನಾವಣೆಯ ಮೇಲೆ ಪ್ರಭಾವ ಬೀರುವ ಸಾಧ್ಯತೆಗಳು ದಟ್ಟವಾಗಿವೆ.

ಮತದಾರರನ್ನು ಸೆಳೆಯಲು ಮಹಾವಿಕಾಸ ಅಘಾಡಿ ಸಹ ಪ್ರಯತ್ನ ಆರಂಭಿಸಿದೆ. ಬಿಜೆಪಿ 149, ಶಿವಸೇನೆ (ಶಿಂಧೆ) 81, ಎನ್‌ಸಿಪಿ (ಅಜಿತ್‌) 59 ಕ್ಷೇತ್ರಗಳಲ್ಲಿ ಸ್ಪರ್ಧಿಸಿವೆ. ಕಾಂಗ್ರೆಸ್‌ 101, ಶಿವಸೇನೆ (ಉದ್ಧವ್‌) 95 ಮತ್ತು ಎನ್‌ಸಿಪಿ (ಎಸ್‌ಪಿ) 86 ಕ್ಷೇತ್ರಗಳಲ್ಲಿ ಸ್ಪರ್ಧಿಸಿವೆ.

ಜಾರ್ಖಂಡ್‌ನ‌ಲ್ಲಿ ಕೊನೇ ಹಂತ:
ಜಾರ್ಖಂಡ್‌ನ‌ಲ್ಲಿ 2ನೇ ಹಾಗೂ ಕೊನೇ ಹಂತದ ಮತದಾನ ನಡೆಯುತ್ತಿದ್ದು, ಈಗಾಗಲೇ 43 ಕ್ಷೇತ್ರಗಳಲ್ಲಿ ಚುನಾವಣೆ ಮುಕ್ತಾಯವಾಗಿದೆ. 2ನೇ ಹಂತದಲ್ಲಿ ಮತದಾನ ಮಾಡಲು 1.23 ಕೋಟಿ ಮತದಾರರು ಸಿದ್ಧವಾಗಿದ್ದು, 528 ಅಭ್ಯರ್ಥಿಗಳ ಭವಿಷ್ಯ ನಿರ್ಧರಿಸಲಿದ್ದಾರೆ. ಬಹಿರಂಗ ಪ್ರಚಾರ ಅಂತ್ಯಗೊಂಡಿರುವ ಹಿನ್ನೆಲೆಯಲ್ಲಿ ಮಂಗಳವಾರ ಮನೆ ಮನೆ ಪ್ರಚಾರ ಕೈಗೊಳ್ಳುವ ಮೂಲಕ ಅಭ್ಯರ್ಥಿಗಳು ಮತಯಾಚನೆ ಮಾಡಲಿದ್ದಾರೆ. ಇಂಡಿಯಾ ಮೈತ್ರಿಕೂಟಕ್ಕೆ ಇದು ಮಹತ್ವದ ಚುನಾವಣೆಯಾಗಿದ್ದು, ಮತ್ತೂಮ್ಮೆ ಅಧಿಕಾರ ಹಿಡಿಯಲು ಎನ್‌ಡಿಎ ಮೈತ್ರಿಕೂಟ ಸಹ ಸಕಲ ಸಿದ್ಧತೆಯನ್ನು ನಡೆಸಿದೆ.

ಅಕ್ರಮ ನಗದು, ವಸ್ತು ವಶ
1000 ಕೋಟಿ ರೂ.ಗೆ ಏರಿಕೆ
ನವದೆಹಲಿ: ಪ್ರಸ್ತುತ ನಡೆಯುತ್ತಿರುವ ವಿಧಾನಸಭೆ ಚುನಾವಣೆ, ಉಪಚುನಾವಣೆಗಳ ಸಮಯದಲ್ಲಿ ವಶಪಡಿಸಿಕೊಳ್ಳಲಾದ ಅಕ್ರಮ ಹಣ ಮತ್ತು ವಸ್ತುಗಳ ಸಂಖ್ಯೆ 1,082 ಕೋಟಿ ರೂ.ಗೆ ಏರಿದೆ ಎಂದು ಚುನಾವಣಾ ಆಯೋಗ ತಿಳಿಸಿದೆ. ಮಹಾರಾಷ್ಟ್ರ ಮತ್ತು ಜಾರ್ಖಂಡ್‌ ಚುನಾವಣೆಯಲ್ಲಿ 858 ಕೋಟಿ ರೂ. ಜಪ್ತಿ ಮಾಡಲಾಗಿದೆ. ಇದರಲ್ಲಿ ನಗದು, ಮದ್ಯ, ಮಾದಕವಸ್ತು, ಉಡುಗೊರೆಗಳು ಸೇರಿವೆ ಎಂದು ಚುನಾವಣಾ ಆಯೋಗ ಹೇಳಿದೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next