Advertisement

Election Date: ಮಹಾರಾಷ್ಟ್ರ, ಜಾರ್ಖಂಡ್ ರಾಜ್ಯಗಳಿಗೆ ಇಂದು ಚುನಾವಣೆ ದಿನಾಂಕ ಘೋಷಣೆ!

09:50 AM Oct 15, 2024 | Team Udayavani |

ನವದೆಹಲಿ: ಮಹಾರಾಷ್ಟ್ರ ಮತ್ತು ಜಾರ್ಖಂಡ್‌ನ ವಿಧಾನಸಭಾ ಚುನಾವಣೆಯ ವೇಳಾಪಟ್ಟಿಯನ್ನು ಇಂದು(ಅ.15) ಪ್ರಕಟಿಸಲಿದೆ ಎಂದು ಚುನಾವಣಾ ಆಯೋಗ ತಿಳಿಸಿದೆ.

Advertisement

ಅಕ್ಟೋಬರ್ 15 ರ ಮಂಗಳವಾರ ಮಧ್ಯಾಹ್ನ 3.30 ಕ್ಕೆ ಪತ್ರಿಕಾಗೋಷ್ಠಿ ನಡೆಸಿ ಮಹಾರಾಷ್ಟ್ರ ಮತ್ತು ಜಾರ್ಖಂಡ್ ವಿಧಾನಸಭಾ ಚುನಾವಣೆಗಳ ವೇಳಾಪಟ್ಟಿಯನ್ನು ಭಾರತೀಯ ಚುನಾವಣಾ ಆಯೋಗ (ಇಸಿಐ) ಪ್ರಕಟಿಸಲಿದೆ.

288 ಸದಸ್ಯ ಬಲದ ಮಹಾರಾಷ್ಟ್ರ ವಿಧಾನಸಭೆಯ ಅವಧಿ ನವೆಂಬರ್ 26ಕ್ಕೆ ಕೊನೆಗೊಳ್ಳಲಿದ್ದು, 81 ಸ್ಥಾನಗಳನ್ನು ಹೊಂದಿರುವ ಜಾರ್ಖಂಡ್ ವಿಧಾನಸಭೆಯು 2025ರ ಜನವರಿ 5ರಂದು ತನ್ನ ಅವಧಿಯನ್ನು ಪೂರ್ಣಗೊಳಿಸಲಿದೆ.

ಮಹಾರಾಷ್ಟ್ರದಲ್ಲಿ ಬಿಜೆಪಿ, ಶಿವಸೇನೆ ಮತ್ತು ನ್ಯಾಶನಲಿಸ್ಟ್ ಕಾಂಗ್ರೆಸ್ ಪಕ್ಷದಿಂದ ಕೂಡಿದ ಆಡಳಿತಾರೂಢ ಮಹಾಯುತಿ ಒಕ್ಕೂಟವು ಕಾಂಗ್ರೆಸ್, ಶರದ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆಯನ್ನು ಒಳಗೊಂಡಿರುವ ಮಹಾ ವಿಕಾಸ್ ಅಘಾಡಿ ವಿರುದ್ಧ ಸ್ಪರ್ಧಿಸಲಿದೆ. (ಯುಬಿಟಿ).

 

Advertisement

ಜಾರ್ಖಂಡ್‌ನಲ್ಲಿ, ಇಂಡಿಯಾ ಮೈತ್ರಿ ಕೂಟದ ಭಾಗವಾಗಿರುವ ಆಡಳಿತಾರೂಢ ಜಾರ್ಖಂಡ್ ಮುಕ್ತಿ ಮೋರ್ಚಾ (ಜೆಎಂಎಂ), ಆಲ್ ಜಾರ್ಖಂಡ್ ವಿದ್ಯಾರ್ಥಿ ಒಕ್ಕೂಟ (ಎಜೆಎಸ್‌ಯು), ಜನತಾ ದಳ (ಯುನೈಟೆಡ್) ಮತ್ತು ಬಿಜೆಪಿಯನ್ನು ಒಳಗೊಂಡಿರುವ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟ (ಎನ್‌ಡಿಎ) ವಿರುದ್ಧ ಸ್ಪರ್ಧಿಸಲಿದೆ.

ಇದನ್ನೂ ಓದಿ:Security: ಬಾಬಾ ಸಿದ್ದಿಕಿ ಹತ್ಯೆ ಬೆನ್ನಲ್ಲೇ ಸಲ್ಮಾನ್ ಖಾನ್ ಗೆ ಹೆಚ್ಚುವರಿ ಭದ್ರತೆ 

Advertisement

Udayavani is now on Telegram. Click here to join our channel and stay updated with the latest news.

Next