ಮುಂಬಯಿ: ಕನ್ನಡಿಗ ಪತ್ರಕರ್ತರ ಸಂಘ ಮಹಾರಾಷ್ಟ್ರ ಇದರ ದಶಮಾನೋತ್ಸವ ಸಂಭ್ರಮವು ಆ. 22ರಂದು ಕುರ್ಲಾ ಪೂರ್ವದ ಬಂಟರ ಭವನದ ಶ್ರೀಮತಿ ರಾಧಾಬಾಯಿ ಟಿ. ಭಂಡಾರಿ ಸಭಾಗೃಹದಲ್ಲಿ ವೈವಿಧ್ಯಮಯ ಕಾರ್ಯಕ್ರಮಗಳೊಂದಿಗೆ ನಡೆಯಿತು.
ಸಂಸ್ಥೆಯ ಅಧ್ಯಕ್ಷ ಚಂದ್ರಶೇಖರ ಪಾಲೆತ್ತಾಡಿ ಅವರ ಅಧ್ಯಕ್ಷತೆಯಲ್ಲಿ ನಡೆದ ಸಮಾರಂಭದಲ್ಲಿ ಹಿರಿಯ ಪತ್ರಕರ್ತರುಗಳಾದ ಬಂಟರ ವಾಣಿಯ ಮಾಜಿ ಸಂಪಾದಕ ರತ್ನಾಕರ ಶೆಟ್ಟಿ ಮತ್ತು ವಸಂತ ಕಲಕೋಟಿ ಅವರನ್ನು ಗಣ್ಯರ ಸಮ್ಮುಖದಲ್ಲಿ ಶಾಲು ಹೊದೆಸಿ, ಫಲಪುಷ್ಪ, ಸ್ಮರಣಿಕೆ, ಸಮ್ಮಾನ ಪತ್ರವನ್ನಿತ್ತು ಸಮ್ಮಾನಿಸಲಾಯಿತು.
ಬೊರಿವಲಿ ಕ್ಷೇತ್ರದ ಸಂಸದ ಗೋಪಾಲ್ ಶೆಟ್ಟಿ, ಸಮಾಜ ಸೇವಕ ಭವಾನಿ ಶಿಪ್ಪಿಂಗ್ ಸರ್ವಿಸಸ್ ಇಂಡಿಯಾ ಪ್ರೈವೇಟ್ ಲಿಮಿಟೆಡ್ ಇದರ ಕಾರ್ಯಾಧ್ಯಕ್ಷ ಕೆ. ಡಿ. ಶೆಟ್ಟಿ, ವಿ. ಕೆ. ಗ್ರೂಪ್ ಆಫ್ ಕಂಪೆನೀಸ್ ಇದರ ಕಾರ್ಯಾಧ್ಯಕ್ಷ ಕೆ. ಎಂ. ಶೆಟ್ಟಿ, ಬಿಲ್ಲವರ ಅಸೋಸಿಯೇಶನ್ ಮುಂಬಯಿ ಅಧ್ಯಕ್ಷ ಚಂದ್ರಶೇಖರ್ ಎಸ್. ಪೂಜಾರಿ, ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ ನಾಯಕ್, ಸಮಾಜ ಸೇವಕ ಕಡಂದಲೆ ಸುರೇಶ್ ಭಂಡಾರಿ, ಬಂಟರ ಸಂಘ ಮುಂಬಯಿ ಉಪಾಧ್ಯಕ್ಷ ಚಂದ್ರಹಾಸ ಶೆಟ್ಟಿ, ಆರ್ಥಿಕ ತಜ್ಞ ಡಾ| ಆರ್. ಕೆ. ಶೆಟ್ಟಿ, ಮುಂಬಯಿ ವಿವಿ ಕನ್ನಡ ವಿಭಾಗದ ಮುಖ್ಯಸ್ಥ ಡಾ| ಜಿ. ಎನ್. ಉಪಾಧ್ಯ, ಬಂಟರ ಸಂಘ ಮಹಿಳಾ ವಿಭಾಗದ ಉಪಕಾರ್ಯಾಧ್ಯಕ್ಷೆ ಉಮಾಕೃಷ್ಣ ಶೆಟ್ಟಿ, ಕನ್ನಡಿಗ ಪತ್ರಕರ್ತರ ಸಂಘ ಮಹಾರಾಷ್ಟ್ರ ಇದರ ಮುಖ್ಯ ಸಲಹೆಗಾರ ಸಿಎ ಐ. ಆರ್. ಶೆಟ್ಟಿ, ಬಂಟರ ಸಂಘ ಮಹಿಳಾ ವಿಭಾಗದ ಕಾರ್ಯಾಧ್ಯಕ್ಷೆ ರಂಜನಿ ಎಸ್. ಹೆಗ್ಡೆ, ಮಾತೃಭೂಮಿ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯ ಕಾರ್ಯಾಧ್ಯಕ್ಷ ರತ್ನಾಕರ ಶೆಟ್ಟಿ, ಬಂಟರ ಸಂಘ ಜ್ಞಾನ ಮಂದಿರದ ಕಾರ್ಯಾಧ್ಯಕ್ಷ ರವೀಂದ್ರನಾಥ ಎಂ. ಭಂಡಾರಿ ಮೊದಲಾದವರು ಉಪಸ್ಥಿತರಿದ್ದರು.
ಗೌರವ ಕಾರ್ಯದರ್ಶಿ ರೋನ್ಸ್ ಬಂಟ್ವಾಳ್ ಸಂಸ್ಥೆಯ ಸಾಧನೆಗಳನ್ನು ವಿವರಿಸಿದರು. ಕಲಾಸೌರಭದ ಪದ್ಮನಾಭ ಸಸಿಹಿತ್ಲು ಪ್ರಾರ್ಥನೆಗೈದರು. ಗೌರವ ಕೋಶಾಧಿಕಾರಿ ಪ್ರೇಮನಾಥ್ ಶೆಟ್ಟಿ ವಂದಿಸಿದರು. ಸಾಂಸ್ಕೃತಿಕ ಕಾರ್ಯಕ್ರಮವನ್ನು ಅಶೋಕ ಪಕ್ಕಳ, ವಿಚಾರ ಮಂಡನೆಯನ್ನು ದಯಾಸಾಗರ್ ಚೌಟ, ಸಭಾ ಕಾರ್ಯಕ್ರಮವನ್ನು ಹರೀಶ್ ಹೆಜ್ಮಾಡಿ ನಿರೂಪಿಸಿದರು. ವೇದಿಕೆಯಲ್ಲಿ ಉದ್ಯಮಿ ರಘುರಾಮ ಶೆಟ್ಟಿ, ಕ್ರೀಡಾ ಸಮಿತಿಯ ಕಾರ್ಯಾಧ್ಯಕ್ಷ ಜಯಾ ಪೂಜಾರಿ, ಆಹ್ವಾನಿತ ಸದಸ್ಯ ಸುರೇಶ್ ಶೆಟ್ಟಿ ಯೆಯ್ನಾಡಿ, ಕಟ್ಟಡ ಸಮಿತಿಯ ಕಾರ್ಯಾಧ್ಯಕ್ಷ ಡಾ| ಶಿವ ಮೂಡಿಗೆರೆ ಮತ್ತಿತರರು ಉಪಸ್ಥಿತರಿದ್ದರು.
ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಅಜೆಕಾರು ಬಾಲಕೃಷ್ಣ ಶೆಟ್ಟಿ ಅವರ ನಿರ್ದೇಶನದಲ್ಲಿ ಪತ್ರಕರ್ತರಿಂದ ಮಹಿಷಾಸುರ ಮರ್ದಿನಿ ಯಕ್ಷಗಾನ ಪ್ರದರ್ಶನಗೊಂಡಿತು.