ನವ ದೆಹಲಿ : ದೇಶದಲ್ಲಿ ಕಳೆದ ವಾರ ದಾಖಲಾದ ಒಟ್ಟು ಕೋವಿಡ್ ಪ್ರಕರಣಗಳಲ್ಲಿ ಶೇಕಡಾ 53 ರಷ್ಟು ಕೇರಳ ಹಾಗೂ ಮಹಾರಾಷ್ಟ್ರದಲ್ಲಿ ದೃಢಪಟ್ಟಿವೆ ಎಂದು ಇಂದು (ಶುಕ್ರವಾರ, ಜುಲೈ 9) ಕೇಂದ್ರ ಸರ್ಕಾರ ಮಾಹಿತಿ ನೀಡಿದೆ.
ದೇಶದಲ್ಲಿ ಕೋವಿಡ್ ಸೋಂಕಿನ ಎರಡನೇ ಅಲೆ ಇನ್ನೂ ಮುಗಿದಿಲ್ಲ. ಎರಡನೇ ಅಲೆ ವಿರುದ್ಧ ದೇಶದ ಹೋರಾಟ ಮುಗಿದಿಲ್ಲ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಹೇಳಿದೆ.
ಇದನ್ನೂ ಓದಿ : ಅಸಂಘಟಿತ ಕಾರ್ಮಿಕರ ಭದ್ರತಾ ಮಂಡಳಿಯ ಜೊತೆ ಕಾರ್ಮಿಕ ಸಚಿವ ಹೆಬ್ಬಾರ್ ಸಭೆ
ಆರೋಗ್ಯ ಸಚಿವಾಲಯದ ಜಂಟಿ ಕಾರ್ಯದರ್ಶಿ ಲವ ಅಗರ್‌ವಾಲ್ ಅವರು ರಷ್ಯಾ ಮತ್ತು ಬ್ರಿಟನ್ ನಲ್ಲಿ ಇತ್ತೀಚೆಗೆ ಕೋವಿಡ್ ಪ್ರಕರಣಗಳು ಹೆಚ್ಚಾಗಿರುವುದನ್ನು ಉಲ್ಲೇಖಿಸಿದ್ದು, ಜನತೆ ಎಚ್ಚರಿಕೆಯಿಂದ ಇರಬೇಕು ಎಂದು ಸೂಚಿಸಿದ್ದಾರೆ.
ಇನ್ನು, ಕಳೆದ ವಾರ ದೇಶದಲ್ಲಿ ಪತ್ತೆಯಾದ ಒಟ್ಟು ಪ್ರಕರಣಗಳ ಪೈಕಿ ಶೇ 21 ಮಹಾರಾಷ್ಟ್ರದಲ್ಲಿ ಮತ್ತು ಶೇ 32ರಷ್ಟು ಕೇರಳದಲ್ಲಿ ವರದಿಯಾಗಿದೆ ಎಂದೂ ಅವರು ತಿಳಿಸಿದ್ದಾರೆ.
ದೇಶದ ಒಟ್ಟು ಪ್ರಕರಣಗಳ ಶೇ 80ರಷ್ಟು 15 ರಾಜ್ಯ, ಕೇಂದ್ರಾಡಳಿತ ಪ್ರದೇಶಗಳ 90 ಜಿಲ್ಲೆಗಳಲ್ಲಿ ಪತ್ತೆಯಾಗಿದೆ. ಕೋವಿಡ್ ಸೋಂಕಿನ ಪ್ರಕರಣಗಳು ಹೆಚ್ಚಾಗಿ ದಾಖಲಾಗುತ್ತಿರುವ ಕಡೆಗಳಲ್ಲಿ ಹೆಚ್ಚು ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಬೇಕಾಗಿದೆ ಎಂದಿದ್ದಾರೆ.
ಇದನ್ನೂ ಓದಿ : ಕೋವಿಡ್ ಸೋಂಕಿನ ಎರಡನೇ ಅಲೆ ಇನ್ನೂ ಮುಗಿದಿಲ್ಲ : ಆರೋಗ್ಯ ಸಚಿವಾಲಯ