ಬೆಂಗಳೂರು: “ಮಹಾರಾಷ್ಟ್ರದ ನಾಯಕರು ಬಾಯಿ ಮುಚ್ಚಿಕೊಂಡು ಕುಳಿತರೆ ನಾವೆಲ್ಲರೂ ಶಾಂತಿಯಿಂದ ಬದುಕಲು ಸಾಧ್ಯವಾಗುತ್ತದೆ’ ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ತೀಕ್ಷ್ಣವಾಗಿ ಹೇಳಿದರು.
Advertisement
ವಿಧಾನಸೌಧದಲ್ಲಿ ಶುಕ್ರವಾರ ಬೆಳಗಾವಿ ಗಡಿ ವಿಚಾರಕ್ಕೆ ಸಂಬಂಧಿಸಿದಂತೆ ಸುದ್ದಿಗಾರರು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, “ದೇಶದ ಎಲ್ಲ ರಾಜ್ಯಗಳ ಗಡಿ ವಿಚಾರ ಮುಗಿದ ಅಧ್ಯಾಯ.
ಗಡಿ ವಿವಾದವನ್ನು ಮತ್ತೆ ಮತ್ತೆ ಕೆದಕಿ ರಾಜಕೀಯ ಬೇಳೆ ಬೇಯಿಸಿಕೊಳ್ಳಬಹುದು ಹಾಗೂ ಸಮಾಜದಲ್ಲಿ ಅಶಾಂತಿ ಸೃಷ್ಟಿಸಬಹುದು. ಭಾಷೆ, ಜನರು ಹಾಗೂ ರಾಜ್ಯಗಳ ನಡುವೆ ಗೊಂದಲ ಸೃಷ್ಟಿ ಮಾಡಬಹುದು ಹೊರತು ಬೇರೆ ಲಾಭ ಇಲ್ಲ’ ಎಂದರು.