Advertisement
ಕರ್ನಾಟಕದ ಹಲವು ನಾಯಕರನ್ನು ವಿವಿಧ ವಿಧಾನಸಭಾ ಕ್ಷೇತ್ರಗಳಿಗೆ ಉಸ್ತುವಾರಿಗಳಾಗಿ ನೇಮಕ ಮಾಡಲಾಗಿದೆ. ಆಯಾ ಕ್ಷೇತ್ರಗಳ ಹಳ್ಳಿ ಹಳ್ಳಿಗಳಿಗೆ ಹೋಗಿ ಮರಾಠಿ ಭಾಷೆಯಲ್ಲಿಯೇ ಪ್ರಚಾರ ನಡೆಸಿ ರಣತಂತ್ರ ಹೆಣೆಯುತ್ತಿದ್ದಾರೆ. ಪುಣೆ ಜಿಲ್ಲೆಗೆ ಮಾಜಿ ಸಚಿವ ಸಿ.ಟಿ. ರವಿ, ಸಾತಾರಾ ಜಿಲ್ಲೆಗೆ ಮಾಜಿ ಸಂಸದ ಭಗವಂತ ಖೂಬಾ, ಬೆಳಗಾವಿಯ ಬಿಜೆಪಿ ಮುಖಂಡ ಧನಂಜಯ ಜಾಧವ, ಕೊಲ್ಲಾಪುರ ಜಿಲ್ಲೆಗೆ ಮಾಜಿ ಶಾಸಕ ಸಂಜಯ ಪಾಟೀಲ, ಸಾಂಗಲಿ ಜಿಲ್ಲೆಗೆ ಬೆಳಗಾವಿ ದಕ್ಷಿಣ ಕ್ಷೇತ್ರದ ಶಾಸಕ ಅಭಯ ಪಾಟೀಲ, ಮಾಜಿ ಶಾಸಕ ಅನಿಲ್ ಬೆನಕೆ, ಸೊಲ್ಲಾಪುರ ಜಿಲ್ಲೆಗೆ ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ ಹಾಗೂ ಮಾಜಿ ಸಂಸದ ಅಣ್ಣಾಸಾಹೇಬ ಜೊಲ್ಲೆ ಅವರನ್ನು ಉಸ್ತುವಾರಿಯನ್ನಾಗಿ ಮಾಡಲಾಗಿದೆ.
Related Articles
ಕರ್ನಾಟಕದಲ್ಲಿ ರೈತರ ಪಹಣಿಯಲ್ಲಿ ವಕ್ಫ್ ಹೆಸರು ನಮೂದು ಆಗಿರುವುದನ್ನೇ ಅಸ್ತ್ರವನ್ನಾಗಿಟ್ಟುಕೊಂಡಿರುವ ಬಿಜೆಪಿ ನಾಯಕರು ಮಹಾರಾಷ್ಟ್ರದಲ್ಲಿಯೂ ಇದರ ವಿರುದ್ಧ ದೊಡ್ಡ ಪ್ರಮಾಣದಲ್ಲಿ ಪ್ರಚಾರ ನಡೆಸುತ್ತಿದ್ದಾರೆ. ರಾಜ್ಯದ ಸಾವಿರಾರು ಎಕರೆ ಜಮೀನುಗಳ ಪಹಣಿಯಲ್ಲಿ ವಕ್ಫ್ ಹೆಸರು ಸೇರಿದ್ದರಿಂದ ರೈತರು ಆತಂಕಗೊಂಡಿದ್ದಾರೆ. ಮಹಾರಾಷ್ಟ್ರದಲ್ಲಿಯೂ ಇದು ಮುಂದುವರಿಯುವ ಸಾಧ್ಯತೆ ಇದೆ. ಹೀಗಾಗಿ ಕಾಂಗ್ರೆಸ್ಸನ್ನು ಸೋಲಿಸಿ ಬಿಜೆಪಿಯನ್ನು ಗೆಲ್ಲಿಸುವಂತೆ ಮನವಿ ಮಾಡುತ್ತಿದ್ದಾರೆ. ಇದಕ್ಕೆ ಪ್ರತಿಯಾಗಿ ಕೈ ನಾಯಕರೂ ಗ್ಯಾರಂಟಿ ಯೋಜನೆಗಳ ಬಗ್ಗೆ ಹೇಳಿ ಮತಬೇಟೆ ನಡೆಸಿದ್ದಾರೆ.
Advertisement
ಯಾಕೆ ರಾಜ್ಯ ನಾಯಕರ ಪ್ರಚಾರ?– ಮಹಾರಾಷ್ಟ್ರ ಚುನಾವಣೆಗೆ ಗಡಿಯ ಮತದಾರರನ್ನು ಸೆಳೆಯಲು ರಾಜ್ಯ ನಾಯಕರ ಬಳಕೆ
-ನೆರೆ ರಾಜ್ಯದ ವಿವಿಧ ವಿಧಾನಸಭೆ ಕ್ಷೇತ್ರಗಳಿಗೆ ಕಾಂಗ್ರೆಸ್, ಬಿಜೆಪಿ ನಾಯಕರ ಉಸ್ತುವಾರಿ
-ಪಕ್ಷ ಸಂಘಟನೆ, ಮತದಾರರನ್ನು ಸೆಳೆಯುವ ವಿವಿಧ ತಂತ್ರಗಳನ್ನು ಹೆಣೆಯುತ್ತಿರುವ ನಾಯಕರು
-ಕರ್ನಾಟಕದ 3 ಕ್ಷೇತ್ರದ ಉಪಚುನಾವಣೆ ಮುಗಿಯುತ್ತಿದ್ದಂತೆ ಮಹಾರಾಷ್ಟ್ರಕ್ಕೆ ನಾಯಕರ ಲಗ್ಗೆ ಉಪಚುನಾವಣೆ ಬಳಿಕ ಕಾಂಗ್ರೆಸ್ ಸಕ್ರಿಯ
ಕರ್ನಾಟಕದಲ್ಲಿ 3 ಕ್ಷೇತ್ರಗಳ ಉಪಚುನಾವಣೆಯ ಪ್ರಚಾರ ಅಂತ್ಯಗೊಳ್ಳುತ್ತಿದ್ದಂತೆ, ಕಾಂಗ್ರೆಸ್ ನಾಯಕರು ಮಹಾರಾಷ್ಟ್ರದತ್ತ ಮುಖ ಮಾಡಲಿದ್ದಾರೆ. ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ. ಶಿವಕುಮಾರ್, ಸಚಿವರಾದ ಸತೀಶ್ ಜಾರಕಿಹೊಳಿ, ಲಕ್ಷ್ಮೀ ಹೆಬ್ಬಾಳ್ಕರ್ ಸೇರಿ ಅನೇಕ ನಾಯಕರು ಪ್ರಚಾರಕ್ಕೆ ತೆರಳಲಿದ್ದಾರೆ. ನ. 20ರಂದು ಚುನಾವಣೆ ಹಿನ್ನೆಲೆಯಲ್ಲಿ ಐದಾರು ದಿನಗಳ ಕಾಲ ಮಹಾ ಚುನಾವಣೆಯ ಪ್ರಚಾರದಲ್ಲಿ ತೊಡಗಿಕೊಳ್ಳಲಿದ್ದಾರೆ.