ಪಾಲ್ಘರ್: ಜಿಮ್ ನಲ್ಲಿ ವರ್ಕೌಟ್ ಮಾಡುತ್ತಿರುವಾಗ ವ್ಯಕ್ತಿಯೊಬ್ಬರು ನಿಧನರಾದ ಘಟನೆ ಮಹಾರಾಷ್ಟ್ರದ ಪಾಲ್ಘರ್ ಜಿಲ್ಲೆಯ ವಸಾಯ್ ನಲ್ಲಿ ಬುಧವಾರ ನಡೆದಿದೆ.
67 ವರ್ಷದ ಪ್ರಹ್ಲಾದ್ ನಿಕಮ್ ಅವರೇ ಮೃತಪಟ್ಟ ವ್ಯಕ್ತಿ. ಅವರು ರಾತ್ರಿ 7.30 ರ ಸುಮಾರಿಗೆ ಜಿಮ್ ನಲ್ಲಿ ತಮ್ಮ ದೈನಂದಿನ ವ್ಯಾಯಾಮವನ್ನು ಮಾಡುತ್ತಿದ್ದಾಗ ಕುಸಿದು ಬಿದ್ದಿದ್ದಾರೆ ಎಂದು ಪೊಲೀಸರು ಹೇಳಿದರು.
ಇದನ್ನೂ ಓದಿ:ರಾಹುಲ್ ಗಾಂಧಿ ಪಪ್ಪು ಅಲ್ಲ, ಆತ ಬುದ್ದಿವಂತ: ಮಾಜಿ ಗವರ್ನರ್ ರಘುರಾಮ್ ರಾಜನ್
“ಅವರನ್ನು ಹತ್ತಿರದ ಆಸ್ಪತ್ರೆಗೆ ಸಾಗಿಸಲಾಯಿತು, ಆದರೆ ಅಲ್ಲಿ ಅವರು ನಿಧನರಾಗಿದ್ದಾರೆಂದು ಎಂದು ಘೋಷಿಸಲಾಯಿತು” ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
Related Articles
ಅವರ ದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಸರ್ಕಾರಿ ಆಸ್ಪತ್ರೆಗೆ ಕಳುಹಿಸಲಾಗಿದೆ ಎಂದು ಅವರು ಹೇಳಿದರು.