Advertisement

Maharashtra: ಶಾಲೆಯಲ್ಲಿ ಬಿಸ್ಕೆಟ್‌ ಸೇವಿಸಿ 80ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥ

05:48 PM Aug 18, 2024 | Team Udayavani |

ಛತ್ರಪತಿ ಸಂಭಾಜಿನಗರ (ಮಹಾರಾಷ್ಟ್ರ): ಪೌಷ್ಟಿಕ ಆಹಾರ ಕಾರ್ಯಕ್ರಮದ ಭಾಗವಾಗಿ ವಿದ್ಯಾರ್ಥಿಗಳಿಗೆ ನೀಡಲಾಗಿದ್ದ  ಬಿಸ್ಕಟ್‌ಗಳನ್ನು ಸೇವಿಸಿದ ನಂತರ ಸುಮಾರು 80 ವಿದ್ಯಾರ್ಥಿಗಳು ಅಸ್ವಸ್ಥರಾಗಿ ಆಸ್ಪತ್ರೆಗೆ ದಾಖಲಾಗಿರುವ ಘಟನೆ ನಡೆದಿದೆ.

Advertisement

ಮಹಾರಾಷ್ಟ್ರದ ಛತ್ರಪತಿ ಸಂಭಾಜಿನಗರ ಜಿಲ್ಲೆಯ ಕೇಕೇಟ್ ಜಲಗಾಂವ್ ಗ್ರಾಮದ ಶಾಲೆಯಲ್ಲಿ ಶನಿವಾರ ಬೆಳಿಗ್ಗೆ 8.30 ರ ಸುಮಾರಿಗೆ ಬಿಸ್ಕೆಟ್‌ ಸೇವಿಸಿದ ನಂತರ ಮಕ್ಕಳಲ್ಲಿ ವಾಂತಿ ಕಾಣಿಸಿಕೊಂಡಿತ್ತು ಎಂದು ಸ್ಥಳೀಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.  ಈ ವಿಷಯ ತಿಳಿದ ಗ್ರಾಮದ ಮುಖಂಡರು ಹಾಗೂ ಅಧಿಕಾರಿಗಳು ಕೂಡಲೇ ಶಾಲೆಗೆ ಆಗಮಿಸಿ ಅಸ್ವಸ್ಥರಾದವರ  ಆಸ್ಪತ್ರೆಗೆ ಸಾಗಿಸುವ ವ್ಯವಸ್ಥೆ ಮಾಡಿದರು. ವಿದ್ಯಾರ್ಥಿಗಳ ಗ್ರಾಮಾಂತರ ಆಸ್ಪತ್ರೆಗೆ ಕರೆದೊಯ್ಯಲಾಗಿದ್ದು, ಅವರ ಆರೋಗ್ಯ ಸ್ಥಿತಿ ಸ್ಥಿರವಾಗಿದೆ ಎಂದು ತಿಳಿದು ಬಂದಿದೆ.

ಆಸ್ಪತ್ರೆಯ ವೈದ್ಯಾಧಿಕಾರಿ ಡಾ.ಬಾಬಾ ಸಾಹೇಬ್ ಘುಘೆ ಮಾತನಾಡಿ, ಶನಿವಾರ ಬೆಳಗ್ಗೆ 8.30ರ ಸಮಯಕ್ಕೆ ಬಿಸ್ಕತ್ತು ಸೇವಿಸಿದ 257 ವಿದ್ಯಾರ್ಥಿಗಳಲ್ಲಿ ವಿಷಾಹಾರದ ಲಕ್ಷಣ ಕಂಡು ಬಂದಿದ್ದು, 153 ಮಂದಿಯನ್ನು ಆಸ್ಪತ್ರೆಗೆ ಕರೆತರಲಾಗಿದ್ದು, ಕೆಲವರಿಗೆ ಚಿಕಿತ್ಸೆ ನೀಡಲಾಗಿದೆ ಹಾಗೂ ಇನ್ನು ಕೆಲವರ ಮನೆಗೆ ಕಳುಹಿಸಲಾಗಿದೆ ಎಂದಿದ್ದಾರೆ.

ತೀವ್ರ ರೋಗಲಕ್ಷಣಗಳ ಹೊಂದಿದ್ದ  ಏಳು ವಿದ್ಯಾರ್ಥಿಗಳ ಹೆಚ್ಚಿನ ಚಿಕಿತ್ಸೆಗಾಗಿ ಛತ್ರಪತಿ ಸಂಭಾಜಿನಗರ ಸಿವಿಲ್ ಆಸ್ಪತ್ರೆಗೆ ವರ್ಗಾಯಿಸಲಾಗಿದೆ ಎಂದು ಘುಘೆ ಹೇಳಿದ್ದಾರೆ. ಶಾಲೆಯಲ್ಲಿ 296 ವಿದ್ಯಾರ್ಥಿಗಳಿದ್ದು, ಮಕ್ಕಳಿಗೆ ನೀಡಲಾಗಿದ್ದ ಬಿಸ್ಕತ್ತಿನ ಬಗ್ಗೆ ತನಿಖೆ ನಡೆಯುತ್ತಿದೆ.

Advertisement

Udayavani is now on Telegram. Click here to join our channel and stay updated with the latest news.

Next