Advertisement

ಮಹಾರಾಷ್ಟ್ರದಲ್ಲಿ ನೆರೆಯ ಅವಾಂತರ, ಅಪಾಯದಂಚಿನ ಪ್ರದೇಶಗಳಿಂದ ಜನರ ಸ್ಥಳಾಂತರ

11:25 AM Jul 23, 2021 | Team Udayavani |

ಮುಂಬೈ : ಮಹಾರಾಷ್ಟ್ರದಲ್ಲಿ ಸುರಿಯುತ್ತಿರುವ ಮಳೆಯ ಕಾರಣದಿಂದಾಗಿ ಕೆಲವೆಡೆ ನೆರೆ ಸೃಷ್ಟಿಯಾಗಿದ್ದು, ಮುಳಗಡೆಯಾಗುತ್ತಿರುವ ಪ್ರದೇಶಗಳಿಂದ ಜನರನ್ನು ಸುರಕ್ಷಿತ ಪ್ರದೇಶಗಳಿಗೆ ಸ್ಥಳಾಂತರ ಮಾಡಲಾಗುತ್ತಿದೆ ಎಂದು ವರದಿ ತಿಳಿಸಿದೆ.

Advertisement

ಕೋಲ್ಹಾಪುರ್ ಜಿಲ್ಲೆಯ ಕೆಲವಡೆ ಭಾರಿ ನೆರೆ ಸೃಷ್ಟಿಯಾಗಿದ್ದು, ಜನರ ರಕ್ಷಣಾ ಕಾರ್ಯದಲ್ಲಿ ಎನ್ ಡಿ ಆರ್ ಎಫ್ ತಂಡ ನಿರತವಾಗಿದೆ ಎಂದು ರಾಷ್ಟ್ರೀಯ ಸುದ್ದಿ ಮೂಲಗಳು ತಿಳಿಸಿವೆ.

ಇದನ್ನೂ ಓದಿ : ಜುಲೈ 25ಕ್ಕೆ ಬರುವ ಸೂಚನೆಯನ್ನು 26ಕ್ಕೆ ಪಾಲಿಸುವುದಾಗಿ ಸಿಎಂ ಹೇಳಿದ್ದಾರೆ : ಈಶ್ವರಪ್ಪ

ಕಳೆದ ಒಂದೆರಡು ದಿನಗಳಿಂದ ಸುರಿಯುತ್ತಿರುವ ಭಾರಿ ಮಳೆಯಿಂದಾಗಿ ಸತಾರ ಜಿಲ್ಲೆಯಲ್ಲಿರುವ ಕೊಯ್ನಾ ನದಿಯ ಒಳ ಹರಿವು ಹೆಚ್ಚಳವಾಗಿದ್ದು, ಅಲ್ಲಿನ ಸುತ್ತ ಮುತ್ತ ಪ್ರದೇಶಗಳಲ್ಲಿ ನೆರೆ ಸೃಷ್ಟಿಯಾಗಿದೆ.

ಏತನ್ಮಧ್ಯೆ, ಮಹಾರಾಷ್ಟ್ರದ ರಾಯ್ ಗಡ್ ಜಿಲ್ಲೆಯಲ್ಲಿ ಮಳೆಯ ಕಾರಣದಿಂದ ಗುಡ್ಡ ಕುಸಿತ ಸಂಭವಿಸಿದ್ದು, ಕಳೆದ 24 ಗಂಟೆಗಳಲ್ಲಿ ಐದು ಮಂದಿ ಮೃತ ಪಟ್ಟಿದ್ದಾರೆ ಎನ್ನಲಾಗಿದೆ.

Advertisement

ಈ ಬಗ್ಗೆ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ರಾಯ್ ಗಡ್ ಜಿಲ್ಲಾಧಿಕಾರಿ ನಿಧಿ ಚೌಧರಿ, ಮಳೆ ಹಾಗೂ ಗಡ್ಡ ಕುಸಿತದ ಕಾರಣದಿಂದಾಗಿ ಅಂದಾಜು ಈವರೆಗೆ ಐವರು ಮಂದಿ ಮೃತ ಪಟ್ಟಿದ್ದಾರೆ. ಅಪಾಯ ಪೀಡಿತ ಪ್ರದೇಶಗಳಿಂದ ಜನರನ್ನು ಸುರಕ್ಷಿತ ಪ್ರದೇಶಗಳಿಗೆ ಸ್ಥಳಾಂತರ ಕಾರ್ಯ ನಡೆಸಲಾಗುತ್ತಿದೆ. ಎನ್ ಡಿ ಆರ್ ಎಫ್ ತಂಡ ರಕ್ಷಣಾ ಕಾರ್ಯದಲ್ಲಿ ತೊಡಗಿದೆ ಎಂದು ಹೇಳಿದ್ದಾರೆ.

ಇನ್ನು, ಗುಡ್ಡ ಕುಸಿತದಲ್ಲಿ ಸಿಲಿಕಿದ ಸುಮಾರು 15 ಮಂದಿಯನ್ನು ಸುರಕ್ಷಿತವಾಗಿ ರಕ್ಷಿಸಲಾಗಿದೆ. ಸುಮಾರು 30 ಮಂದಿ ಇನ್ನೂ ಕೂಡ ಮಣ್ಣಿನಡಿಯಲ್ಲಿ ಸಿಲುಕಿಕೊಂಡಿದ್ದಾರೆ ಎಂದು ಅಂದಾಜಿಸಲಾಗಿದೆ. ಅವರ ಪತ್ತೆ ಕಾರ್ಯ ಮಾಡಲಾಗುತ್ತಿದೆ ಎಂದು ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ : ಧಾರಾಕಾರ ಮಳೆ: ನಿಪ್ಪಾಣಿ ಬಳಿ ಪುಣೆ-ಬೆಂಗಳೂರು ಹೈವೇ ಬಂದ್: ಪರ್ಯಾಯ ರಸ್ತೆ ಬಳಕೆಗೆ ಸೂಚನೆ

Advertisement

Udayavani is now on Telegram. Click here to join our channel and stay updated with the latest news.

Next