Advertisement

Seat Deal: ಲೋಕ ಸಮರಕ್ಕೆ ‘ಮಹಾ’ ಒಮ್ಮತ… ಯಾರು ಎಷ್ಟು ಕ್ಷೇತ್ರದಲ್ಲಿ ಸ್ಪರ್ಧೆ?

12:17 PM Mar 01, 2024 | Team Udayavani |

ಮುಂಬೈ: ಮಹಾರಾಷ್ಟ್ರದಲ್ಲಿ ಲೋಕಸಭೆ ಚುನಾವಣೆಗೆ ಸೀಟು ಹಂಚಿಕೆಗೆ ಸಂಬಂಧಿಸಿದಂತೆ ಮಹಾ ವಿಕಾಸ್ ಅಘಾಡಿ (ಎಂವಿಎ)ಯಲ್ಲಿ ಪರಸ್ಪರ ಒಮ್ಮತ ಮೂಡಿದೆ.

Advertisement

ಸೀಟು ಹಂಚಿಕೆಗೆ ಸಂಬಂಧಿಸಿದಂತೆ ಶರದ್ ಪವಾರ್ ಅವರ ಮನೆಯಲ್ಲಿ ವಿಪಕ್ಷ ಮಹಾ ವಿಕಾಸ್ ಅಘಾಡಿ (ಎಂವಿಎ) ನಾಯಕರ ಸಭೆ ನಡೆಯಿತು. ಈ ಸಭೆಯಲ್ಲಿ ಎಲ್ಲ 48 ಲೋಕಸಭಾ ಸ್ಥಾನಗಳ ಹಂಚಿಕೆ ಕುರಿತು ಚರ್ಚೆ ನಡೆಸಲಾಯಿತು. ಶರದ್ ಪವಾರ್ ಅವರ ನಿವಾಸದಲ್ಲಿ ನಡೆದ ಸಭೆಯಲ್ಲಿ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ), ಕಾಂಗ್ರೆಸ್ ಮತ್ತು ಶರದ್ ಪವಾರ್ ನೇತೃತ್ವದ ನ್ಯಾಷನಲಿಸ್ಟ್ ಕಾಂಗ್ರೆಸ್ ಪಕ್ಷದ (ಎನ್‌ಸಿಪಿ) ಉನ್ನತ ನಾಯಕರು ಭಾಗವಹಿಸಿದ್ದರು.

ಮಹಾರಾಷ್ಟ್ರದಲ್ಲಿ ವಿರೋಧ ಪಕ್ಷದ ಮೈತ್ರಿಕೂಟ ಮಹಾ ವಿಕಾಸ್ ಅಘಾಡಿ (ಎಂವಿಎ) ಮುಂಬರುವ ಲೋಕಸಭೆ ಚುನಾವಣೆಗೆ ಸೀಟು ಹಂಚಿಕೆ ಒಪ್ಪಂದವನ್ನು ಮಾಡಿಕೊಂಡಿದೆ ಎಂದು ಹೇಳಿದ್ದು ಅದರಂತೆ ಶಿವಸೇನೆ 21 ಸ್ಥಾನಗಳಲ್ಲಿ ಸ್ಪರ್ಧಿಸುವ ಸಾಧ್ಯತೆಯಿದೆ, ಕಾಂಗ್ರೆಸ್ 15 ಸ್ಥಾನಗಳಲ್ಲಿ ಸ್ಪರ್ಧಿಸಬಹುದು ಮತ್ತು ಎನ್‌ಸಿಪಿಯ ಶರದ್ ಪವಾರ್ ಬಣ ಒಂಬತ್ತು ಸ್ಥಾನಗಳಲ್ಲಿ ಸ್ಪರ್ಧೆ ಮಾಡಿದರೆ, ಪ್ರಕಾಶ್ ಅಂಬೇಡ್ಕರ್ ನೇತೃತ್ವದ ಪಕ್ಷ ವಂಚಿತ್ ಬಹುಜನ ಅಘಾಡಿ (ವಿಬಿಎ) ಎರಡು ಸ್ಥಾನಗಳಲ್ಲಿ ಮತ್ತು ರಾಜು ಶೆಟ್ಟಿ ಅವರ ಸ್ವಾಭಿಮಾನಿ ಪಕ್ಷಕ್ಕೆ ಒಂದು ಸ್ಥಾನ ಸಿಗಬಹುದು ಎಂದು ಮೂಲಗಳು ತಿಳಿಸಿವೆ.

ಇದನ್ನೂ ಓದಿ: LPG Price Hike: 19 ಕೆಜಿ ವಾಣಿಜ್ಯ ಬಳಕೆಯ ಎಲ್‌ ಪಿಜಿ ಸಿಲಿಂಡರ್‌ ಬೆಲೆ ಮತ್ತೆ ಏರಿಕೆ

Advertisement

Udayavani is now on Telegram. Click here to join our channel and stay updated with the latest news.

Next