ಮುಂಬೈ/ ಹೊಸದಿಲ್ಲಿ: ಮಹಾರಾಷ್ಟ್ರದಲ್ಲಿ ದೇವೆಂದ್ರ ಫಡ್ನವೀಸ್ ಮತ್ತು ಅಜಿತ್ ಪವಾರ್ ಗೆ ಸರಕಾರ ರಚಿಸಲು ಅವಕಾಶ ಮಾಡಿಕೊಟ್ಟ ರಾಜ್ಯಪಾಲ ಭಗತ್ ಸಿಂಗ್ ಕೋಶ್ಯಾರಿ ಅವರ ಕ್ರಮವನ್ನು ಪ್ರಶ್ನಿಸಿ ಶಿವಸೇನೆ- ಎನ್ ಸಿಪಿ ಮತ್ತು ಕಾಂಗ್ರೆಸ್ ಪಕ್ಷಗಳು ಸುಪ್ರೀಂ ಕೋರ್ಟ್ ನಲ್ಲಿ ಅರ್ಜಿ ಸಲ್ಲಿಸಿವೆ. ಇಂದು 11.30ಕ್ಕೆ ಈ ಅರ್ಜಿ ವಿಚಾರಣೆ ನಡೆಯಲಿದ್ದು, ದೇಶದಾದ್ಯಂತ ಈ ವಿಚಾರಣೆಯನ್ನು ಎದುರು ನೋಡುತ್ತಿದ್ದಾರೆ.
ದೇವೆಂದ್ರ ಫಡ್ನವೀಸ್ ಸರಕಾರ ರವಿವಾರವೇ ಬಹುಮತ ಸಾಬೀತುಪಡಿಸಬೇಕೆಂದು ಕೋರಿ ಮೂರು ಪಕ್ಷಗಳು ಕೋರ್ಟ್ ಗೆ ಅರ್ಜಿ ಸಲ್ಲಿಸಿವೆ.
ಅರ್ಜಿದಾರರ ಪರವಾಗಿ ಹಿರಿಯ ಕಾಂಗ್ರೆಸ್ ನಾಯಕ, ವಕೀಲ ಕಪಿಲ್ ಸಿಬಲ್ ಅವರು ಸರ್ವೋಚ್ಛ ನ್ಯಾಯಾಲಯದಲ್ಲಿ ವಾದ ಮಂಡಿಸಲಿದ್ಧಾರೆ.
ಒಂದು ತಿಂಗಳ ರಾಜಕೀಯ ಬಿಕ್ಕಟ್ಟಿನ ನಂತರ ಶನಿವಾರ ಮುಂಜಾನೆ ಅನಿರೀಕ್ಷಿತವಾಗಿ ಬಿಜೆಪಿ ಜೊತೆ ಕೈಜೋಡಿಸಿದ ಅಜಿತ್ ಪವಾರ್ ಅವರ ಎನ್ ಸಿಪಿ ಶಾಸಕರು ಸರಕಾರ ರಚಿಸುವಲ್ಲಿ ಸಫಲರಾಗಿದ್ದರು. ಫಡ್ನವೀಸ್ ಮುಖ್ಯಮಂತ್ರಿಯಾಗಿ, ಅಜಿತ್ ಪವಾರ್ ಉಪಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ.