Advertisement

Maharashtra Politics; ಈ ಆಟವನ್ನು ಜನ ಹೆಚ್ಚು ಕಾಲ ಸಹಿಸುವುದಿಲ್ಲ: ಸಂಜಯ್ ರಾವುತ್

03:32 PM Jul 02, 2023 | Team Udayavani |

ಮುಂಬಯಿ: ಒಂಬತ್ತು ಶಾಸಕರ ಬೆಂಬಲದೊಂದಿಗೆ ಎನ್‌ಸಿಪಿ ನಾಯಕ ಅಜಿತ್ ಪವಾರ್ ಮಹಾರಾಷ್ಟ್ರದ ಎನ್ ಡಿಎ ಸರ್ಕಾರಕ್ಕೆ ಸೇರ್ಪಡೆಗೊಂಡ ನಂತರ ಶಿವಸೇನಾ (ಯುಬಿಟಿ) ನಾಯಕ ಸಂಜಯ್ ರಾವುತ್ ಟ್ವೀಟ್ ಮಾಡಿ ಆಕ್ರೋಶ ಹೊರ ಹಾಕಿದ್ದಾರೆ. “ಈ ಆಟವನ್ನು ಜನರು ಹೆಚ್ಚು ಕಾಲ ಸಹಿಸುವುದಿಲ್ಲ” ಎಂದು ಟ್ವೀಟ್ ಮಾಡಿದ್ದಾರೆ.

Advertisement

”ಕೆಲವರು ಮಹಾರಾಷ್ಟ್ರ ರಾಜಕೀಯವನ್ನು ಸ್ವಚ್ಛಗೊಳಿಸುವ ಕೆಲಸಕ್ಕೆ ಕೈ ಹಾಕಿದ್ದಾರೆ.ಅವರಿಗೆ ಅವರವರ ದಾರಿ ಬಿಡಿ. ನಾನು ಶರದ್ ಪವಾರ್ ಅವರೊಂದಿಗೆ ಮಾತುಕತೆ ನಡೆಸಿದ್ದೇನೆ. ಅವರು “ನಾನು ಬಲಶಾಲಿ. ನಮಗೆ ಜನರ ಬೆಂಬಲವಿದೆ. ನಾವು ಉದ್ಧವ್ ಠಾಕ್ರೆ ಅವರೊಂದಿಗೆ ಮತ್ತೆ ಎಲ್ಲವನ್ನೂ ಮರುನಿರ್ಮಾಣ ಮಾಡುತ್ತೇವೆ” ಎಂದು ಹೇಳಿದ್ದಾರೆ. ಹೌದು, ಜನರು ಈ ಆಟವನ್ನು ಹೆಚ್ಚು ಕಾಲ ಸಹಿಸುವುದಿಲ್ಲ.” ಎಂದು ಟ್ವೀಟ್ ಮಾಡಿದ್ದಾರೆ.

ಇನ್ನೊಂದೆಡೆ ಮಾಹಾರಾಷ್ಟ್ರದಲ್ಲಿ ಶಿವಸೇನೆ ಮತ್ತು ರಾಷ್ಟ್ರವಾದಿ ಕಾಂಗ್ರೆಸ್ ಪಾರ್ಟಿ(ಎನ್ ಸಿಪಿ) ಯನ್ನು ಮುಗಿಸಿದ್ದಕ್ಕಾಗೂ ರಾವುತ್ ಅವರಿಗೆ ಧನ್ಯವಾದಗಳು ಎಂದು ಟ್ರೋಲ್ ಮಾಡಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next