Advertisement

Maharashtra polls; ಫಲಿತಾಂಶದ ಬಳಿಕವೇ ಸಿಎಂ ಯಾರೆಂದು ನಿರ್ಧಾರ: ಕಾಂಗ್ರೆಸ್

08:25 PM Nov 04, 2024 | Team Udayavani |

ಮುಂಬಯಿ: ಮಹಾರಾಷ್ಟ್ರ ವಿಧಾನಸಭಾ ಚುನಾವಣೆ “ಕೌನ್ ಬನೇಗಾ ಮುಖ್ಯಮಂತ್ರಿ” ಸ್ಪರ್ಧೆಯಲ್ಲ, ಫಲಿತಾಂಶದ ನಂತರ ಮಾಹಾ ವಿಕಾಸ್ ಅಘಾಡಿ ಮೈತ್ರಿಕೂಟದ ಮುಖ್ಯಮಂತ್ರಿ ಆಯ್ಕೆಯನ್ನು ಸುಗಮ ರೀತಿಯಲ್ಲಿ ನಿರ್ಧರಿಸಲಾಗುವುದು ಎಂದು ಕಾಂಗ್ರೆಸ್ ನಾಯಕ ಜೈರಾಮ್ ರಮೇಶ್ ಸೋಮವಾರ ಹೇಳಿದ್ದಾರೆ.

Advertisement

ಪಿಟಿಐಗೆ ನೀಡಿದ ಸಂದರ್ಶನದಲ್ಲಿ ಮಾತನಾಡಿದ ಜೈರಾಮ್ ರಮೇಶ್ ‘ ಜಾರ್ಖಂಡ್ ಮತ್ತು ಮಹಾರಾಷ್ಟ್ರದಲ್ಲಿ ನಿರ್ಣಾಯಕ ಜನಾದೇಶವನ್ನು ಪಡೆಯುವ ವಿಶ್ವಾಸವನ್ನು ಕಾಂಗ್ರೆಸ್ ಹೊಂದಿದೆ. ಬಿಜೆಪಿ ಮತ್ತು ಸ್ಥಳೀಯ ಆಡಳಿತದಿಂದ ಹರಿಯಾಣದಲ್ಲಿ ಆದಂತಹ ಕೊನೆಯ ಕ್ಷಣದ ಕಿಡಿಗೇಡಿತನ ಪುನರಾವರ್ತನೆಯಾಗದಂತೆ ಹೆಚ್ಚು ಜಾಗರೂಕವಾಗಿದೆ ಎಂದು ಹೇಳಿದರು.

ಕಾಂಗ್ರೆಸ್ ಮಟ್ಟಿಗೆ ಹರ್ಯಾಣದಲ್ಲಿ ಫಲಿತಾಂಶ ಅನಿರೀಕ್ಷಿತವಾಗಿರುವುದು ನಿಜ. ನಾವು ಬಲವಾದ ಮೈತ್ರಿ ಹೊಂದಿರುವ ಮಹಾರಾಷ್ಟ್ರದಲ್ಲಿ ಬಹಳಷ್ಟು ವಿಶ್ವಾಸ ಹೊಂದಿದ್ದೇವೆ. ಜಾರ್ಖಂಡ್‌ನಲ್ಲಿ ನಾವು ಮೈತ್ರಿಯಲ್ಲಿ ಹೋರಾಡುತ್ತಿದ್ದೇವೆ ಎಂದು ನಮಗೆ ವಿಶ್ವಾಸವಿದೆ ಎಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಸಂವಹನದ ಉಸ್ತುವಾರಿ ಹೇಳಿದರು.

Advertisement

Udayavani is now on Telegram. Click here to join our channel and stay updated with the latest news.

Next