Advertisement
ಮೊದಲ ಬಾರಿಗೆ ಲೋಕಸಭೆಗೆ ಆಯ್ಕೆಯಾಗಿರುವ ಪಿಯೂಷ್ ಗೋಯಲ್, ನಿತಿನ್ ಗಡ್ಕರಿ ಮತ್ತು ನಾರಾಯಣ ರಾಣೆ ಸಚಿವರಾಗುವುದು ಬಹುತೇಕ ಪಕ್ಕಾ ಆಗಿದೆ. ಜತೆಗೆ ಶಿಂಧೆ ಶಿವಸೇನೆಯ ಇಬ್ಬರು ಸಂಸದರಿಗೆ ಸಚಿವ ಸ್ಥಾನ ದೊರೆಬಹುದು. ಮರಾಠರನ್ನು ಸೆಳೆಯುವುದಕ್ಕಾಗಿ ಬಿಜೆಪಿಯು ಮರಾಠ ನಾಯಕರೊಬ್ಬರಿಗೆ ಸಚಿವ ಸ್ಥಾನ ನೀಡುವ ಸಾಧ್ಯತೆಗಳಿವೆ.
ಲೋಕಸಭೆ ಚುನಾವಣೆಯಲ್ಲಿ ಸೋಲು ಅನುಭವಿಸಿದ ಬಳಿಕ ಮಹಾರಾಷ್ಟ್ರ ಡಿಸಿಎಂ ಅಜಿತ್ ಪವಾರ್ ಬಣದ ಎನ್‌ಸಿಪಿ ಶಾಸಕರಿಗೆ ಇಕ್ಕಟ್ಟಿನ ಸ್ಥಿತಿ ಉಂಟಾಗಿದೆ. ಈ ಹಿನ್ನೆಲೆಯಲ್ಲಿ 10-15 ಮಂದಿ ಶಾಸಕರು ಈಗ ಮತ್ತೆ ಎನ್‌ಸಿಪಿ ಸಂಸ್ಥಾಪಕ ಶರದ್ ಪವಾರ್ ಬಣಕ್ಕೆ ವಾಪಸಾಗಲು ಚಿಂತನೆ ನಡೆಸುತ್ತಿದ್ದಾರೆ. ಈ ಬಗ್ಗೆ ಶರದ್ ಬಣದ ಎನ್‌ಸಿಪಿಯ ಅಧ್ಯಕ್ಷ ಜಯಂತ್ ಪಾಟೀಲ್ ಮಾಹಿತಿ ನೀಡಿದ್ದಾರೆ. ಜೂ.9ರಂದು ಪಕ್ಷದ ಸಂಸ್ಥಾಪನಾ ದಿನ. ಕೆಲವೊಂದು ನಾಯಕರು ನಮ್ಮನ್ನು ಭೇಟಿಯಾಗಲು ಮುಂದಾಗಿದ್ದಾರೆ ಎಂದಿದ್ದಾರೆ. ಆದರೆ, ಇದನ್ನು ಅಜಿತ್ ಬಣ ತಿರಸ್ಕರಿಸಿದೆ. ಅಜಿತ್ ಪವಾರ್ ಮುಂಬಯಿನಲ್ಲಿ ಸೋಲಿನ ಬಗ್ಗೆ ಪರಾಮರ್ಶೆ ನಡೆಸುವ ನಿಟ್ಟಿನಲ್ಲಿ ಸಭೆ ನಡೆಸಿದ್ದಾರೆ.