ಮುಂಬೈ: ಮಹಾರಾಷ್ಟ್ರದಲ್ಲಿ ಕೋವಿಡ್ ಸೋಂಕಿತರ ಸಂಖ್ಯೆ ಮತ್ತೆ ಏರಿಕೆಯಾಗುತ್ತಿದ್ದು, ಸತತ ಎರಡನೇ ದಿನ 25 ಸಾವಿರಕ್ಕೂ ಹೆಚ್ಚು ಜನರಿಗೆ ಕೋವಿಡ್ ಸೋಂಕು ತಾಗಿರುವುದು ದೃಢವಾಗಿದೆ.
ಶುಕ್ರವಾರ ಮಹಾರಾಷ್ಟ್ರದಲ್ಲಿ 25,681 ಹೊಸ ಸೋಂಕು ಪ್ರಕರಣಗಳು ಪತ್ತೆಯಾಗಿದ್ದವು. ಗುರುವಾರ 25,853 ಸೋಂಕು ಪ್ರಕರಣಗಳು ದೃಢವಾಗಿದ್ದವು.
ಇದನ್ನೂ ಓದಿ:ಲಸಿಕೆ ಅಭಿಯಾನದಲ್ಲಿ ಸಮುದಾಯಗಳೂ ಭಾಗಿಯಾಗಿ
25 ಸಾವಿರಕ್ಕೂ ಹೆಚ್ಚು ಹೊಸ ಕೋವಿಡ್ ಪ್ರಕರಣಗಳಲ್ಲದೆ 24 ಗಂಟೆಯ ಅವಧಿಯಲ್ಲಿ 70 ಮಂದಿ ಕೋವಿಡ್ ಸೋಂಕಿತರು ಮೃತಪಟ್ಟಿದ್ದಾರೆ.
ಮಹಾರಾಷ್ಟ್ರದಲ್ಲಿ ಇದುವರೆಗೆ 1,80,83,977 ಕೋವಿಡ್ ಪರೀಕ್ಷೆ ನಡೆಸಲಾಗಿದೆ. ಇವರಲ್ಲಿ 24,22,021 ಸ್ಯಾಂಪಲ್ ಗಳಲ್ಲಿ ಕೋವಿಡ್ ಸೋಂಕು ದೃಢವಾಗಿದೆ ಎಂದು ಮಹಾರಾಷ್ಟ್ರದ ರಾಜ್ಯ ಸರ್ಕಾರ ಮಾಹಿತಿ ನೀಡಿದೆ.
ಇದನ್ನೂ ಓದಿ: ತಲಪಾಡಿಯಲ್ಲಿ ಕೋವಿಡ್ ನಿಗಾ ಘಟಕ ಸ್ಥಾಪನೆ; ಪ್ರಯಾಣಿಕರ ತಪಾಸಣೆ ಆರಂಭ
ಸದ್ಯ ಮಹಾರಾಷ್ಟ್ರದಲ್ಲಿ 8,67,333 ಮಂದಿ ಹೋಮ್ ಕ್ವಾರಂಟೈನ್ ನಲ್ಲಿದ್ದು, 7,848 ಜನರು ಸಾಂಸ್ಥಿಕ ಕ್ವಾರಂಟೈನ್ ನಲ್ಲಿದ್ದಾರೆ.