Advertisement

ಮಹಾರಾಷ್ಟ್ರದಲ್ಲಿ ಕೋವಿಡ್ ಸೋಂಕಿತರ ಸಂಖ್ಯೆ 3 ಸಾವಿರಕ್ಕೆ ಏರಿಕೆ, ಸಾವಿನ ಸಂಖ್ಯೆ 187

09:05 AM Apr 17, 2020 | Nagendra Trasi |

ಮುಂಬೈ: ಮಾರಣಾಂತಿಕ ಕೋವಿಡ್ 19 ವೈರಸ್ ಸೋಂಕಿತರ ಸಂಖ್ಯೆ 3000ಕ್ಕೆ ತಲುಪುವ ಮೂಲಕ ಮಹಾರಾಷ್ಟ್ರ ಅತೀ ಹೆಚ್ಚು ಕೋವಿಡ್ ಸೋಂಕಿತರನ್ನು ಹೊಂದಿರುವ ಮೊದಲ ರಾಜ್ಯವಾಗಿದೆ. ಮಹಾರಾಷ್ಟ್ರದಲ್ಲಿ 3081 ಕೋವಿಡ್ ಪ್ರಕರಣ ದೃಢಪಟ್ಟಿದ್ದು, ಗುರುವಾರ 165 ಹೊಸ ಪ್ರಕರಣಗಳು ಪತ್ತೆಯಾಗಿರುವುದಾಗಿ ವರದಿ ತಿಳಿಸಿದೆ.

Advertisement

ಗುರುವಾರ 165 ಕೋವಿಡ್ 19 ಪ್ರಕರಣಗಳು ಪತ್ತೆಯಾಗಿದೆ. ಇದರಲ್ಲಿ 107 ಪ್ರಕರಣ ಮುಂಬೈನಲ್ಲಿ ದಾಖಲಾಗಿದೆ. ಅದರಂತೆ ಪುಣೆಯಲ್ಲಿ 19, ನಾಗ್ಪುರ್ ನಲ್ಲಿ 10 ಕೋವಿಡ್ ಪ್ರಕರಣ ವರದಿಯಾಗಿದೆ ಎಂದು ಮಹಾರಾಷ್ಟ್ರ ಆರೋಗ್ಯ ಇಲಾಖೆ ಹೇಳಿದೆ.

ಮಹಾರಾಷ್ಟ್ರದಲ್ಲಿ ಮಾರಣಾಂತಿಕ ಕೋವಿಡ್ 19 ವೈರಸ್ ಗೆ ಒಟ್ಟು 187 ಮಂದಿ ಸಾವನ್ನಪ್ಪಿದ್ದಾರೆ. ಈವರೆಗೆ 295 ಜನರು ಗುಣಮುಖರಾಗಿ ಡಿಸ್ ಚಾರ್ಜ್ ಆಗಿದ್ದಾರೆ. ಬುಧವಾರ 117 ಕೋವಿಡ್ ಪ್ರಕರಣ ಪತ್ತೆಯಾಗಿತ್ತು. ಇದರಲ್ಲಿ ಮುಂಬೈನ 66 , ಪುಣೆಯ 44, ಮೀರಾ ಭಯಾಂದರ್ ಮತ್ತು ಥಾಣೆಯಲ್ಲಿ ತಲಾ ಎರಡು ಪ್ರಕರಣಗಳು ಸೇರಿವೆ.

ಭಾರತದಲ್ಲಿ ಕೋವಿಡ್ 19 ಸೋಂಕಿಗೆ ಒಳಗಾದವರ ಸಂಖ್ಯೆ 12,380ಕ್ಕೆ ಏರಿದ್ದು, ಸಾವಿನ ಸಂಖ್ಯೆ 414ಕ್ಕೆ ತಲುಪಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ತಿಳಿಸಿದೆ.

Advertisement

Udayavani is now on Telegram. Click here to join our channel and stay updated with the latest news.

Next