ಮುಂಬಯಿ: ಶಿವಸೇನೆ ಉದ್ಧವ್ ಠಾಕ್ರೆ ಬಣದ ನಾಯಕ ಮತ್ತು ಸಂಸದ ಸಂಜಯ್ ರಾವುತ್ ಅವರಿಗೆ ಜೀವ ಬೆದರಿಕೆ ಸಂದೇಶ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರನ್ನು ಬಂಧಿಸಲಾಗಿದೆ ಎಂದು ಮುಂಬೈ ಪೊಲೀಸರು ಶುಕ್ರವಾರ ತಿಳಿಸಿದ್ದಾರೆ.
ಉದ್ಧವ್ ಠಾಕ್ರೆ ಬಣದ ಶಾಸಕ ಸುನೀಲ್ ರಾವುತ್ ಅವರು ಸಂಜಯ್ ರಾವತ್ ಮತ್ತು ನನಗೆ ನಿನ್ನೆಯಿಂದ ಕೊಲೆ ಬೆದರಿಕೆ ಕರೆಗಳು ಬಂದಿದ್ದು, ಘಟನೆಗೆ ಸಂಬಂಧಿಸಿದಂತೆ ಮುಂಬೈ ಪೊಲೀಸ್ ಕಮಿಷನರ್ ಮತ್ತು ರಾಜ್ಯ ಗೃಹ ಸಚಿವರಿಗೆ ಮಾಹಿತಿ ನೀಡಲಾಗಿದೆ ಎಂದು ಹೇಳಿದ್ದರು.
ಇದನ್ನೂ ಓದಿ: Sharad Pawar ಅವರಿಗೆ ಬೆದರಿಕೆ; ಗಂಭೀರವಾಗಿ ಪರಿಗಣಿಸಿದ್ದೇವೆ: ಸಿಎಂ ಶಿಂಧೆ
ಏತನ್ಮಧ್ಯೆ, ಎನ್‌ಸಿಪಿ ಮುಖ್ಯಸ್ಥ ಶರದ್ ಪವಾರ್‌ಗೆ ಬೆದರಿಕೆ ಕರೆಗೆ ಸಂಬಂಧಿಸಿದಂತೆ ಮುಂಬೈ ಪೊಲೀಸರು ಇಬ್ಬರ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.ಪೊಲೀಸರು ಐಪಿಸಿಯ ಸೆಕ್ಷನ್ 153A, 504, 506 (2) ಅಡಿಯಲ್ಲಿ ಪ್ರಕರಣವನ್ನು ದಾಖಲಿಸಿದ್ದಾರೆ, ಕ್ರೈಂ ಬ್ರಾಂಚ್ ಕೂಡ ಈ ವಿಷಯವನ್ನು ತನಿಖೆ ನಡೆಸುತ್ತಿದೆ” ಎಂದು ಮುಂಬೈ ಪೊಲೀಸರು ಸೇರಿಸಿದ್ದಾರೆ.
Related Articles
ಎನ್‌ಸಿಪಿ ಸಂಸದೆ ಸುಪ್ರಿಯಾ ಸುಳೆ, ತನ್ನ ತಂದೆ ಶರದ್ ಪವಾರ್‌ಗೆ ತನ್ನ ವಾಟ್ಸಾಪ್‌ನಲ್ಲಿ ಬೆದರಿಕೆ ಸಂದೇಶ ಬಂದಿತ್ತು ಮತ್ತು ಮುಂಬೈ ಪೊಲೀಸ್ ಕಮಿಷನರ್ ಅವರನ್ನು ಭೇಟಿ ಮಾಡಿದ್ದೇನೆ ಎಂದು ಹೇಳಿದ್ದರು.