Advertisement

ಮಹಾರಾಷ್ಟ್ರದ ರಾಸಾಯನಿಕ ಕಾರ್ಖಾನೆಯಲ್ಲಿ ಸ್ಫೋಟ! ಇಬ್ಬರು ಸಾವು

07:46 PM Nov 05, 2020 | sudhir |

ಮುಂಬೈ: ಮಹಾರಾಷ್ಟ್ರದ ರಾಯಗಡ ಜಿಲ್ಲೆಯಲ್ಲಿರುವ ರಾಸಾಯನಿಕ ಕಾರ್ಖಾನೆಯಲ್ಲಿ ಸ್ಫೋಟ ಸಂಭವಿಸಿ ಇಬ್ಬರು ಅಸುನೀಗಿ, ಆರು ಮಂದಿ ಗಾಯಗೊಂಡಿದ್ದಾರೆ.

Advertisement

ಗುರುವಾರ ಜಿಲ್ಲೆಯ ಕೈಗಾರಿಕಾ ಪಟ್ಟಣ ಖೊಪೊಲಿ ಎಂಬಲ್ಲಿ ಬೆಳಗ್ಗೆ 2.30ರ ಸುಮಾರಿಗೆ ಈ ದುರ್ಘ‌ಟನೆ ಸಂಭವಿಸಿದೆ. ಸ್ಫೋಟದ ಬಳಿಕ ಕಾರ್ಖಾನೆಯ ಸುತ್ತ ಬೆಂಕಿ ವ್ಯಾಪಿಸಿಕೊಂಡಿತು. ಈ ದುರ್ಘ‌ಟನೆಯಲ್ಲಿ ಮಹಿಳೆ ಸೇರಿದಂತೆ ಇಬ್ಬರು ಅಸುನೀಗಿದ್ದಾರೆ.

ಸುದ್ದಿ ತಿಳಿದ ತಕ್ಷಣ ಪೊಲೀಸರು ಮತ್ತು ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ರಕ್ಷಣೆ ಮತ್ತು ಪರಿಹಾರ ಕಾರ್ಯಾಚರಣೆಯಲ್ಲಿ ತೊಡಗಿಸಿಕೊಂಡರು. ಗಾಯಗೊಂಡವರನ್ನು ಖೊಪೊಲಿಯ ಆಸ್ಪತ್ರೆಗೆ ದಾಖಲಿಸಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next