Advertisement

Maharashtra: ಆಟೋ ರಿಕ್ಷಾಕ್ಕೆ ಬೆಂಕಿ ಹೊತ್ತಿಕೊಂಡು ಮಹಿಳೆ ಸಜೀವ ದಹನ

02:43 PM May 03, 2023 | Team Udayavani |

ಮಹಾರಾಷ್ಟ್ರ: ಆಟೋ ರಿಕ್ಷಾಕ್ಕೆ ಬೆಂಕಿ ಹೊತ್ತಿಕೊಂಡ ಪರಿಣಾಮ ಆಟೋದಲ್ಲೇ ಮಹಿಳೆಯೊಬ್ಬರು ಸಜೀವ ದಹನವಾಗಿರುವ ಘಟನೆ ಮಹಾರಾಷ್ಟ್ರದ ಥಾಣೆ ನಗರದಲ್ಲಿ ಬುಧವಾರ (ಮೇ 3 ರಂದು) ನಡೆದಿರುವುದು ವರದಿಯಾಗಿದೆ.

Advertisement

ಆಟೋ ರಿಕ್ಷಾದಲ್ಲಿ ಪ್ರಯಾಣಿಸುತ್ತಿದ್ದ ವೇಳೆ ಚಾಲಕನ ನಿಯಂತ್ರಣ ತಪ್ಪಿ ಆಟೋ ರಸ್ತೆಯ ವಿಭಜಕಕ್ಕೆ ಹೋಗಿ ಢಿಕ್ಕಿ ಹೊಡೆದಿದೆ. ಪರಿಣಾಮ ಆಟೋ ರಿಕ್ಷಾಕ್ಕೆ ಬೆಂಕಿ ಹೊತ್ತಿಕೊಂಡಿದೆ. ಮಹಿಳೆ ಆಟೋದಲ್ಲೇ ಇದ್ದ ಕಾರಣ ಸಜೀವ ದಹನವಾಗಿದ್ದಾರೆ.

ಸಂಪೂರ್ಣ ಸುಟ್ಟು ಹೋದ ಕಾರಣ ಮಹಿಳೆಯ ಗುರುತು ಇದುವರೆಗೆ ಸಿಕ್ಕಿಲ್ಲ. ಘಟನೆಯಲ್ಲಿ ಆಟೋ ಚಾಲಕ ರಾಜೇಶ್‌ ಕುಮಾರ್‌ (45) ಅವರಿಗೆ ಸುಟ್ಟ ಗಾಯವಾಗಿದ್ದು, ಸದ್ಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ವರದಿ ತಿಳಿಸಿದೆ.

ಆಟೋ-ರಿಕ್ಷಾ ಥಾಣೆ ನಗರದಿಂದ ಭಾಯಂದರ್ ಕಡೆಗೆ ಸಾಗುತ್ತಿದ್ದಾಗ ಅದರ ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್‌ ಗೆ ಆಟೋ ಢಿಕ್ಕಿ ಹೊಡೆದು ಬೆಂಕಿ ಕಾಣಿಸಿಕೊಂಡಿದೆ. ಸ್ಥಳೀಯ ಅಗ್ನಿಶಾಮಕ ಸಿಬ್ಬಂದಿ ಬೆಂಕಿಯನ್ನು ನಂದಿಸಿದ್ದಾರೆ. ಈ ಬಗ್ಗೆ ಪೊಲೀಸರು ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ ಎಂದು ಥಾಣೆ ಮುನ್ಸಿಪಲ್ ಕಾರ್ಪೊರೇಶನ್‌ನ ಪ್ರಾದೇಶಿಕ ವಿಪತ್ತು ನಿರ್ವಹಣಾ ಕೋಶ (RDMC) ಮುಖ್ಯಸ್ಥ ಅವಿನಾಶ್ ಸಾವಂತ್ ಪಿಟಿಐಗೆ ತಿಳಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next