Advertisement

Maharashtra Politics; ಎನ್‌ಸಿಪಿ ನಾಯಕ ಅಜಿತ್ ಪವಾರ್ ಡಿಸಿಎಂ ಆಗಿ ಪ್ರಮಾಣ ವಚನ

05:22 PM Jul 02, 2023 | Vishnudas Patil |

ಮುಂಬಯಿ : ಮಹತ್ವದ ರಾಜಕೀಯದ ವಿದ್ಯಮಾನದಲ್ಲಿ ಬಿಜೆಪಿ ಮತ್ತು ಶಿವಸೇನೆ ಶಿಂಧೆ ಬಣದ ಮೈತ್ರಿಕೂಟಕ್ಕೆ ಹೊಸ ಬಲ ಎಂಬಂತೆ ಎನ್‌ಸಿಪಿ ನಾಯಕ ಅಜಿತ್ ಪವಾರ್ ಭಾನುವಾರ ಮಹಾರಾಷ್ಟ್ರ ಡಿಸಿಎಂ ಪ್ರಮಾಣ ವಚನ ಸ್ವೀಕರಿಸಿದ್ದಾರೆ.

Advertisement

ಮಹಾರಾಷ್ಟ್ರ ಸಿಎಂ ಏಕನಾಥ್ ಶಿಂಧೆ ಮತ್ತು ಉಪ ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ಸಮ್ಮುಖದಲ್ಲಿ ರಾಜಭವನದಲ್ಲಿ ಬೆಂಬಲಿಗರ ಸಮ್ಮುಖದಲ್ಲಿ ಅಜಿತ್ ಪವಾರ್ ಪ್ರಮಾಣವಚನ ಸ್ವೀಕರಿಸಿದ್ದಾರೆ.

ಅಜಿತ್ ಅವರೊಂದಿಗೆ ಮಹಾರಾಷ್ಟ್ರದ ಮಾಜಿ ಗೃಹ ಸಚಿವ ಮತ್ತು ಎನ್‌ಸಿಪಿ ನಾಯಕ ದಿಲೀಪ್ ವಾಲ್ಸೆ ಪಾಟೀಲ್, ಎನ್‌ಸಿಪಿ ನಾಯಕ ಛಗನ್ ಭುಜಬಲ್ ಮಹಾರಾಷ್ಟ್ರ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ.

ವಿಧಾನಸಭೆಯಲ್ಲಿ ವಿರೋಧ ಪಕ್ಷದ ನಾಯಕರಾಗಿದ್ದ ಅಜಿತ್ ಪವಾರ್ ಅವರೊಂದಿಗೆ 53 ಎನ್‌ಸಿಪಿ ಶಾಸಕರ ಪೈಕಿ 30 ಶಾಸಕರು ರಾಜ್ಯ ಇದ್ದಾರೆ ಎಂದು ಹೇಳಲಾಗಿದೆ.

ಮಹಾರಾಷ್ಟ್ರ ಸಚಿವ ಸುಧೀರ್ ಮುಂಗಂತಿವಾರ್ ಪ್ರತಿಕ್ರಿಯಿಸಿ “40 ಕ್ಕೂ ಹೆಚ್ಚು ಶಾಸಕರು ಸರ್ಕಾರಕ್ಕೆ ಬೆಂಬಲ ನೀಡುತ್ತಿದ್ದಾರೆ, ಬಹುತೇಕ ಸಂಪೂರ್ಣ ಎನ್‌ಸಿಪಿ ಎನ್ ಡಿಎ ಸೇರಲಿದೆ ಎಂದು ಹೇಳಿದ್ದಾರೆ.

Advertisement

ಮಹಾರಾಷ್ಟ್ರ ಬಿಜೆಪಿ ಅಧ್ಯಕ್ಷ ಚಂದ್ರಶೇಖರ ಬಾವಂಕುಲೆ ಪ್ರತಿಕ್ರಿಯಿಸಿ “ಅಜಿತ್ ಪವಾರ್ ಮತ್ತು ಇತರ ಎನ್‌ಸಿಪಿ ಶಾಸಕರು ಇಲ್ಲಿಗೆ ಬಂದಿದ್ದಾರೆ. ಪ್ರಧಾನಿ ಮೋದಿ ನೇತೃತ್ವದಲ್ಲಿ ಮಹಾರಾಷ್ಟ್ರ ಪ್ರಗತಿ ಸಾಧಿಸಲಿದೆ” ಎಂದಿದ್ದಾರೆ.

2019 ರಲ್ಲೂ ಅಜಿತ್ ಪವಾರ್ ಅವರು ಬಿಜೆಪಿಯೊಂದಿಗೆ ಹೊಂದಾಣಿಕೆ ಮಾಡಿಕೊಳ್ಳಲು ವಿಫಲ ಪ್ರಯತ್ನವನ್ನು ಮಾಡಿದ್ದರು. ಇಂದು ಉಪಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ಅಜಿತ್ ಪವಾರ್, ಎನ್‌ಸಿಪಿಯಲ್ಲಿ ಕ್ಷೀಣಿಸುತ್ತಿದ್ದ ತನ್ನ ಸ್ಥಾನಮಾನವನ್ನು ಪುನರುತ್ಥಾನಗೊಳಿಸಲು ಮುಂದಾಗಿ ಈ ನಿರ್ಧಾರ ಕೈಗೊಂಡಿದ್ದಾರೆ ಎನ್ನಲಾಗಿದೆ.

ಪಕ್ಷದ ಯಾವುದೇ ಹುದ್ದೆಯನ್ನು ಹೊಂದಿಲ್ಲದಿದ್ದರೂ, ಸುಪ್ರಿಯಾ ಸುಳೆ ಮತ್ತು ಪಕ್ಷದ ನಾಯಕ ಪ್ರಫುಲ್ ಪಟೇಲ್ ಅವರನ್ನು ಜೂನ್ 10 ರಂದು ಎನ್‌ಸಿಪಿ ಕಾರ್ಯಾಧ್ಯಕ್ಷರನ್ನಾಗಿ ನೇಮಕ ಮಾಡಲಾಗಿತ್ತು.

Advertisement

Udayavani is now on Telegram. Click here to join our channel and stay updated with the latest news.

Next