ನವದೆಹಲಿ: ಮಹಾರಾಷ್ಟ್ರ ಮತ್ತು ಜಾರ್ಖಂಡ್‌ನ ವಿಧಾನಸಭಾ ಚುನಾವಣೆಯ ವೇಳಾಪಟ್ಟಿಯನ್ನು ಚುನಾವಣಾ ಆಯೋಗ ಘೋಷಣೆ ಮಾಡಿದೆ.
ಮಂಗಳವಾರ ಮಧ್ಯಾಹ್ನ ಪತ್ರಿಕಾಗೋಷ್ಠಿ ನಡೆಸಿದ ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ಎರಡೂ ರಾಜ್ಯಗಳ ಚುನಾವಣಾ ದಿನಾಂಕವನ್ನು ಘೋಷಣೆ ಮಾಡಿದ್ದಾರೆ.
ಮಹಾರಾಷ್ಟ್ರ:
ಒಂದೇ ಹಂತದಲ್ಲಿ : ನ. 20
ಮತ ಎಣಿಕೆ: ನ.23
ಅ.29ರಂದು ನಾಮಪತ್ರ ಸಲ್ಲಿಕೆಗೆ ಕೊನೆಯ ದಿನವಾಗಿದ್ದರೆ, ನ.4 ರಂದು ನಾಮಪತ್ರ ಹಿಂಪಡೆಯಲು ಕೊನೆಯ ದಿನವಾಗಿದೆ. ನವೆಂಬರ್ 20 ರಂದು ಮತದಾನ ನಡೆಯಲಿದೆ. ನ .23ರಂದು ಮತ ಎಣಿಕೆ ನಡೆಯಲಿದೆ.
ಜಾರ್ಖಂಡ್ :
ಮೊದಲ ಹಂತದ ಮತದಾನ: ನ.13
ಎರಡನೇ ಹಂತದ ಮತದಾನ: ನ.20
ಮತ ಎಣಿಕೆ: ನ. 23
ಎರಡು ಹಂತದಲ್ಲಿ ಚುನಾವಣೆ ನಡೆಯಲಿದ್ದು ಮೊದಲ ಹಂತದ ಚುನಾವಣೆಗೆ ಅ.24 ರಂದು ನಾಮಪತ್ರ ಸಲ್ಲಿಕೆಗೆ ಕೊನೆಯ ದಿನವಾಗಿದ್ದರೆ, ಅ.30 ರಂದು ನಾಮಪತ್ರ ಹಿಂಪಡೆಯಲು ಕೊನೆಯ ದಿನವಾಗಿದೆ. ಅದೇ ರೀತಿ ಎರಡನೇ ಹಂತದ ಚುನಾವಣೆಗೆ ಅ.30 ರಂದು ನಾಮಪತ್ರ ಸಲ್ಲಿಕೆಗೆ ಕೊನೆಯ ದಿನವಾಗಿದ್ದರೆ, ನ.01 ರಂದು ನಾಮಪತ್ರ ಹಿಂಪಡೆಯಲು ಕೊನೆಯ ದಿನವಾಗಿದೆ. ಮೊದಲ ಹಂತದ ಮತದಾನ ನವೆಂಬರ್ 13 ರಂದು ನಡೆಯಲಿದ್ದು ಎರಡನೇ ಹಂತದ ಮತದಾನ ನ .20 ರಂದು ನಡೆಯಲಿದೆ. ಮತ ಎಣಿಕೆ ನ. 23ಕ್ಕೆ ನಡೆಯಲಿದೆ.
288 ಸದಸ್ಯ ಬಲದ ಮಹಾರಾಷ್ಟ್ರ ವಿಧಾನಸಭೆಯ ಅವಧಿ ನವೆಂಬರ್ 26ಕ್ಕೆ ಕೊನೆಗೊಳ್ಳಲಿದ್ದು, 81 ಸ್ಥಾನಗಳನ್ನು ಹೊಂದಿರುವ ಜಾರ್ಖಂಡ್ ವಿಧಾನಸಭೆಯು 2025ರ ಜನವರಿ 5ರಂದು ತನ್ನ ಅವಧಿಯನ್ನು ಪೂರ್ಣಗೊಳಿಸಲಿದೆ.