Advertisement

ಮಹರ್ಷಿ ವಾಲ್ಮೀಕಿ ಕೊಡುಗೆ ಅಪಾರ

04:03 PM Oct 06, 2017 | Team Udayavani |

ಯಾದಗಿರಿ: ಮಹಾಕಾವ್ಯ ರಾಮಾಯಣ ಗ್ರಂಥ ರಚಿಸಿದ ಮಹರ್ಷಿ ವಾಲ್ಮೀಕಿ ಅವರು ಜಗತ್ತಿಗೆ ಬಹುದೊಡ್ಡ ಕೊಡುಗೆ ನೀಡಿದ್ದಾರೆ ಎಂದು ಜಿಪಂ ಅಧ್ಯಕ್ಷ ಬಸರೆಡ್ಡಿಗೌಡ ಮಾಲಿ ಪಾಟೀಲ ಅನಪುರ ಹೇಳಿದರು.

Advertisement

ನಗರದ ವಾಲ್ಮೀಕಿ ಭವನದಲ್ಲಿ ಗುರುವಾರ ಜಿಲ್ಲಾಡಳಿತ, ಜಿಪಂ, ಸಮಾಜ ಕಲ್ಯಾಣ ಇಲಾಖೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ನಗರಸಭೆ ಹಾಗೂ ಶ್ರೀ ಮಹರ್ಷಿ ವಾಲ್ಮೀಕಿ ಜಯಂತ್ಯುತ್ಸವ ಸಮಿತಿ ಆಶ್ರಯದಲ್ಲಿ ಹಮ್ಮಿಕೊಂಡ ಶ್ರೀಮಹರ್ಷಿ ವಾಲ್ಮೀಕಿ ಜಯಂತ್ಯುತ್ಸವ ಸಮಾರಂಭ ಉದ್ಘಾಟಿಸಿ ಅವರು ಮಾತನಾಡಿದರು. ಸಂತ ಕವಿ ಮಹರ್ಷಿ ಅವರ ತತ್ವಾದರ್ಶಗಳು ಹಾಗೂ ಸಂದೇಶ ಪ್ರತಿಯೊಬ್ಬರೂ ಜೀವನದಲ್ಲಿ ಅಳವಡಿಸಿಕೊಂಡಾಗ ಮಾತ್ರ ಸಮಾಜ ಬದಲಾವಣೆ ಆಗಲು ಸಾಧ್ಯವಿದೆ. ಸರಕಾರ ಪರಿಶಿಷ್ಟ ಪಂಗಡ ಜನರಿಗಾಗಿ ಅನೇಕ ಸೌಲಭ್ಯಗಳನ್ನು ನೀಡುತ್ತಾ ಬರುತ್ತಿದೆ. ಅಲ್ಲದೆ ಸಾಕಷ್ಟು ಅನುದಾನ ವ್ಯಯಿಸಿ ಪರಿಶಿಷ್ಟರ ಅಭಿವೃದ್ಧಿಗಾಗಿ ಶ್ರಮಿಸುತ್ತಿದೆ. ಸರಕಾರಿ ಯೋಜನೆಗಳ ಸದುಪಯೋಗ ಪಡಿಸಿಕೊಂಡು ಸಮಾಜದ ಮುಖ್ಯವಾಹಿನಿಗೆ ಬರಬೇಕೆಂದು ಅವರು ಕರೆ ನೀಡಿದರು.

ಜಿಲ್ಲಾಧಿಕಾರಿ ಮಂಜುನಾಥ ಜೆ ಮಾತನಾಡಿ, ಶ್ರೀ ಮಹರ್ಷಿ ವಾಲ್ಮೀಕಿ ಅವರು ಮರೆಯಲಾಗದ ಮಹಾನ ಗ್ರಂಥವನ್ನು ನೀಡಿದ್ದಾರೆ. ನಾರದ ಋಷಿಗಳ ಆಜ್ಞೆಯಂತೆ ತಪ್ಪಸು ಮಾಡಿ, ಶ್ರೀರಾಮಚಂದ್ರನ ದರ್ಶನ ಪಡೆದ ಮಹಾನ ಸಂತ ಎಂದು ಹೇಳಿದರು. 

ಶ್ರೀ ಮಹರ್ಷಿ ವಾಲ್ಮೀಕಿ ಅವರ ಆದರ್ಶ ಗುಣಗಳನ್ನು ಮೈಗೂಡಿಸಿಕೊಂಡು ಮಕ್ಕಳಿಗೆ ಉತ್ತಮ ಶಿಕ್ಷಣ ನೀಡಿದಾಗ ಸಮುದಾಯ ಅಭಿವೃದ್ಧಿ ಹೊಂದಲು ಸಾಧ್ಯ. ಈ ನಿಟ್ಟಿನಲ್ಲಿ ಪ್ರತಿಯೊಬ್ಬರೂ ಶಿಕ್ಷಣಕ್ಕೆ ಹೆಚ್ಚಿನ ಆದ್ಯತೆ ನೀಡಬೇಕೆಂದು ಅವರು ತಿಳಿಸಿದರು.

ಜಿಲ್ಲಾಡಳಿತದಿಂದ ವಾಲ್ಮೀಕಿ ಸಮುದಾಯದ ಸಾಂಸ್ಕೃತಿಕ ಹಾಗೂ ಸಾಮಾಜಿಕ ಕಾರ್ಯಕ್ರಮಗಳ ನಿರ್ವಹಣೆಗಾಗಿ 1 ಕೋಟಿ ವೆಚ್ಚದಲ್ಲಿ ಸುಂದರವಾಗಿ ವಾಲ್ಮೀಕಿ ಭವನ ನಿರ್ಮಿಸಲಾಗಿದೆ. ಇದನ್ನು ಸಮರ್ಥವಾಗಿ ಬಳಸಿಕೊಳ್ಳಲು ಅವರು ಸಲಹೆ ನೀಡಿದರು. ಈ ಸಂದರ್ಭ ನಗರಸಭೆ ಅಧ್ಯಕ್ಷೆ ಲಲಿತ ಮೌಲಾಲಿ ಅನಪುರ ಅವರು ಸಮಾರಂಭದ ಅಧ್ಯಕ್ಷತೆ
ವಹಿಸಿ ಮಾತನಾಡಿದರು. 

Advertisement

ಮೋಟ್ನಳ್ಳಿ ಮೊರಾರ್ಜಿ ದೇಸಾಯಿ ವಸತಿ ಶಾಲೆ ಪ್ರಾಚಾರ್ಯ ಡಾ| ಗಾಳೆಪ್ಪ ಪೂಜಾರಿ ಉಪನ್ಯಾಸ ನೀಡಿ, ಶ್ರೀ ಮಹರ್ಷಿ ವಾಲ್ಮೀಕಿ ಅವರು ಕೇವಲ ಒಂದೇ ಸಮುದಾಯಕ್ಕೆ ಸೀಮಿತವಾಗದೆ ಬಹುಸಮುದಾಯಕ್ಕೂ ಪೂರಕವಾದ ಗ್ರಂಥವನ್ನು ನೀಡಿದ ಮಹಾನ ಋಷಿ ಎಂದು ತಿಳಿಸಿದರು. ಇದೇ ಸಂದರ್ಭದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಸೇವೆ ಸಲ್ಲಿಸಿದ ಗಣ್ಯರಾದ ಬಸವರಾಜಪ್ಪ ಗೌಡಗೇರಾ, ಎಮ್‌. ಮಹಾದೇವಪ್ಪ ಮುಂಡರಗಿ, ಕೃಷ್ಣಪ್ಪಗೌಡ ಆಲ್ದಾಳ, ಶಾಂತಗೌಡ ಚೆನ್ನಪಟ್ನ, ರಾಮಲಿಂಗಪ್ಪ ಅರಳಳ್ಳಿ ಇವರನ್ನು ಸನ್ಮಾನಿಸಿ ಗೌರವಿಸಲಾಯಿತು. ನಂತರ ಎಸ್‌ಎಸ್‌ಎಲ್‌ಸಿ ಹಾಗೂ ಪಿಯುಸಿಯಲ್ಲಿ ಅತೀ ಹೆಚ್ಚು ಅಂಕಗಳಿಸಿದ ವಿದ್ಯಾರ್ಥಿಗಳನ್ನು ಸನ್ಮಾನಿಸಿ ಗೌರವಿಸಲಾಯಿತು. 

ಸಮಾರಂಭದಲ್ಲಿ ತಾಪಂ ಅಧ್ಯಕ್ಷ ಬಾಷು ಎಸ್‌. ರಾಠೊಡ, ಜಿ.ಪಂ. ಸದಸ್ಯ ಶಿವಲಿಂಗಪ್ಪ ಪುಟಗಿ, ಜಿಪಂ ಸಿಇಒ ಡಾ| ಅವಿನಾಶ ಮೆನನ್‌ ರಾಜೇಂದ್ರನ್‌, ನಗರಸಭೆ ಪೌರಾಯು ಸಂಗಪ್ಪ ಉಪಾಸೆ, ಶ್ರೀ ಮಹರ್ಷಿ ವಾಲ್ಮೀಕಿ ಜಯಂತ್ಯುತ್ಸವ
ಸಮಿತಿ ಜಿಲ್ಲಾಧ್ಯಕ್ಷ ಮರೆಪ್ಪನಾಯಕ ಮಗ್ಧಂಪೂರು, ಮುಖಂಡಾರದ ಸಿದ್ದನಗೌಡ ಪಾಟೀಲ ಕರಿಭಾವಿ, ಶಾಂತಗೌಡ ಚೆನ್ನಪಟ್ನ ಸೇರಿದಂತೆ ಇತರರು ಇದ್ದರು. ಜೋತಿಲತಾ ತಡಬಿಡಿಮಠ ನಿರೂಪಿಸಿದರು.

ಸಮಾಜ ಕಲ್ಯಾಣ ಉಪನಿರ್ದೇಶಕ ಎಂ.ಎಸ್‌. ಅಲ್ಲಾ ಬಕಷ್‌ ಸ್ವಾಗತಿಸಿದರು. ಸಮಾಜ ಕಲ್ಯಾಣ ಸಹಾಯಕ ನಿರ್ದೇಶಕ ಗಣಪತಿ ಪೂಜಾರಿ ವಂದಿಸಿದರು. 

Advertisement

Udayavani is now on Telegram. Click here to join our channel and stay updated with the latest news.

Next