Advertisement

ದೇಶದಾದ್ಯಂತ ಮೊಳಗಿದ ಶಿವನ ನಾಮಸ್ಮರಣೆ: ಇಂದು ಅದ್ದೂರಿಯ ಮಹಾಶಿವರಾತ್ರಿ ಆಚರಣೆ

10:03 AM Feb 22, 2020 | Mithun PG |

ಬೆಂಗಳೂರು: ದೇಶದಾದ್ಯಂತ ಮಹಾಶಿವರಾತ್ರಿ ಹಬ್ಬವನ್ನು ಸಡಗರ ಮತ್ತು ಸಂಭ್ರಮದಿಂದ ಆಚರಿಸಲಾಗುತ್ತಿದೆ. ಶಿವನ ದೇಗುಲಗಳಲ್ಲಿ ವಿಶೇಷ ಪೂಜೆ, ವಿಭೂತಿ ಹಾಗೂ ರುದ್ರಾಕ್ಷಿ ಮಾಲೆ ಅರ್ಪಣೆ , ಶಿವನಿಗೆ ಪ್ರಿಯವಾದ  ಬಿಲ್ವ ಪತ್ರೆ ಅರ್ಪಣೆ, ಮಂಗಳಾರತಿ ನೆರವೇರಿಸಲಾಗುತ್ತಿದ್ದು ಭಕ್ತರಲ್ಲಿ ಸಂತಸ ಮನೆಮಾಡಿದೆ.

Advertisement

ದುಷ್ಟಸಂಹಾರ ಶಿವ ಈ ದಿನ ತನ್ನನ್ನು ಪೂಜಿಸುವ ಭಕ್ತರಿಗೆ ವಿಶೇಷ ಅನುಗ್ರಹ ನೀಡುತ್ತಾನೆ ಎಂಬ ನಂಬಿಕೆ ಚಾಲ್ತಿಯಲ್ಲಿದೆ. ಈ ರಾತ್ರಿ ಜಾಗರಣೆ ಮಾಡಿ, ಶಿವನನ್ನು ಭಕ್ತಿಯಿಮದ ಪೂಜಿಸಿದರೆ ಇಷ್ಟಾರ್ಥಗಳು ನೆರವೇರುತ್ತವೆ ಎಂದು ಹೇಳಲಾಗುತ್ತದೆ.

ಕರ್ನಾಟಕದ ಕಾಡು ಮಲ್ಲೆಶ್ವರ ಮಲ್ಲಿಕಾರ್ಜುನ ಸ್ವಾಮಿ ದೇವಾಲಯ, ಗವಿಪುರದ ಗವಿ ಗಂಗಾಧರೇಶ್ವರ ದೇವಾಲಯ, ಗುಟ್ಟಹಳ್ಳಿಯ ಪಂಚಲಿಂಗೆಶ್ವರ ಸ್ವಾಮಿ ದೇವಾಲಯ, ಹಲಸೂರಿನ ಸೋಮೇಶ್ವರ , ಸೇರಿದಂತೆ ವಿವಿಧ ದೇವಾಲಯಗಳಲ್ಲಿ ಶಿವನ ಸ್ಮರಣೆ ನಡೆಯುತ್ತಿದೆ.  ದಕ್ಷಿಣ ಕನ್ನಡದ ಧರ್ಮಸ್ಥಳದಲ್ಲಿ ಪ್ರತಿವರ್ಷದಂತೆ ವಿಶೇಷ ಆಚರಣೆ ಇದ್ದು =, ಮಂಜುನಾಥ ಸ್ವಾಮಿಯ ದರ್ಶನಕ್ಕಾಗಿ ರಾಜ್ಯ ಮತ್ತು ಹೊರ ರಾಜ್ಯಗಳಿಂದ ಭಕ್ತರು ಕಾಲ್ನಡಿಗೆಯಲ್ಲಿ ಧರ್ಮಸ್ಥಳಕ್ಕೆ ಆಗಮಿಸಿ ಅಹೋರಾತ್ರಿ ಭಜನೆ ಮಾಡುತ್ತಾ ಜಾಗರಣೆ ಮಾಡುತ್ತಾರೆ.

ಮಾತ್ರವಲ್ಲದೆ ಶಿವನ ಸಹಸ್ರ ನಾಮ ಪಠಣ, ವೇದಾಂತ ಉಪನ್ಯಾಸ, ಸಂಗೀತೋತ್ಸವ, ಅಹೋರಾತ್ರಿ ಶಿವನಾಮ ಜಪ ನಡೆಯುತ್ತಿದೆ. ದೇವಾಲಯಗಳಲ್ಲಿ ಹೆಚ್ಚು ಭಕ್ತರು ಆಗಮಿಸುವ ಹಿನ್ನಲೆಯಲ್ಲಿ ಎಲ್ಲಾ ದೇವಾಲಯಗಳ್ಲಿ ವಿಶೇಷ ವ್ಯವಸ್ಥೆಗಳನ್ನು ಕಲ್ಪಿಸಲಾಗುತ್ತಿದೆ.

 

Advertisement

Advertisement

Udayavani is now on Telegram. Click here to join our channel and stay updated with the latest news.

Next