ಭಾಲ್ಕಿ: ಸತ್ಯ, ಅಹಿಂಸೆಯನ್ನು ಬದುಕಿನಲ್ಲಿ ಅಳವಡಿಸಿಕೊಂಡ ಮಹಾತ್ಮ ಗಾಂಧಿಧೀಜಿ ಅವರ ತತ್ವ-ಸಿದ್ಧಾಂತಗಳ ಅಳವಡಿಕೆ ಇಂದಿನ ಕಾಲಕ್ಕೆ ಅಗತ್ಯವಾಗಿದೆ ಎಂದು ಶಾಸಕ ಈಶ್ವರ ಖಂಡ್ರೆ ಹೇಳಿದರು.
ಪಟ್ಟಣದ ತಾಲೂಕು ಕಾಂಗ್ರೆಸ್ ಕಚೇರಿಯಲ್ಲಿ ಆಯೋಜಿಸಿದ್ದ ಮಹಾತ್ಮ ಗಾಂಧಿಧೀಜಿ ಪುಣ್ಯಸ್ಮರಣೆ ನಿಮಿತ್ತ ಅವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ ಮಾತನಾಡಿದರು.
ಮಹಾತ್ಮ ಗಾಂಧೀಜಿ ಅವರ ವಿಚಾರಗಳು ಕೇವಲ ಭಾರತಕ್ಕೆ ಮಾತ್ರವಲ್ಲದೇ ಇಡೀ ವಿಶ್ವಕ್ಕೆ ಮಾದರಿಯಾಗಿವೆ. ಗಾಂಧೀಜಿಯವರು ಸತ್ಯ, ಅಹಿಂಸೆಯ ಮಾರ್ಗವನ್ನೇ ಸ್ವಾತಂತ್ರ್ಯ ಚಳವಳಿಗೆ ಅನುಸರಿಸಿದರು. ಪರಕೀಯರ ಮುಷ್ಟಿಯಲ್ಲಿದ್ದ ದೇಶಕ್ಕೆ ಸ್ವಾತಂತ್ರ್ಯ ಗಳಿಸುವುದು ಸುಲಭದ ಮಾತಾಗಿರಲಿಲ್ಲ. ಇಂತಹ ಕಠಿಣ ಪರಿಸ್ಥಿತಿಯಲ್ಲಿ ಸತ್ಯಾಗ್ರಹದ ಮೂಲಕ, ಅಹಿಂಸೆಯ ಮಾರ್ಗದಲ್ಲಿ ಹೋರಾಟ ನಡೆಸಿ ಗಾಂಧಿಧೀಜಿ ಅವರು ದೇಶಕ್ಕೆ ಸ್ವಾತಂತ್ರ್ಯ ತಂದು ಕೊಟ್ಟಿದ್ದಾರೆ. ಅವರ ಚಿಂತನೆ, ತತ್ವಗಳು ಪ್ರತಿಯೊಬ್ಬರು ಅನುಸರಿಸಬೇಕು ಎಂದರು.
ಈ ಸಂದರ್ಭದಲ್ಲಿ ತಾಲೂಕು ಕಾಂಗ್ರೆಸ್ ಅಧ್ಯಕ್ಷ ಹಣಮಂತರಾವ ಚವ್ಹಾಣ, ಪುರಸಭೆ ಅಧ್ಯಕ್ಷ ಬಸವರಾಜ ವಂಕೆ, ಜಿಪಂ ಮಾಜಿ ಸದಸ್ಯ ಅಂಬಾದಾಸ್ ಕೋರೆ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಮಲ್ಲಿಕಾರ್ಜುನ ಪಾಟೀಲ್ ಮುಗನೂರ್, ಯುವ ನಗರ ಘಟದ ಅಧ್ಯಕ್ಷ ಜೈಪಾಲ ಬೋರಾಳೆ, ಗ್ರಾಮೀಣ ಯುವ ಘಟಕದ ಅಧ್ಯಕ್ಷ ಟಿಂಕು ರಾಜಭವನ್, ದಲಿತ ಸಮುದಾಯದ ಮುಖಂಡ ವಿಲಾಸ ಮೋರೆ ಇದ್ದರು.