Advertisement

ಮಧ್ಯಪ್ರದೇಶದಲ್ಲಿ ಮಹಾತ್ಮ ಗಾಂಧಿ ಪ್ರತಿಮೆಗೆ ಹಾನಿ

08:16 PM Oct 30, 2022 | Team Udayavani |

ಖಂಡ್ವಾ: ಮಧ್ಯಪ್ರದೇಶದ ಖಂಡ್ವಾ ಜಿಲ್ಲೆಯ ರಂಗೂನ್‌ ಗ್ರಾಮದಲ್ಲಿ ಕಿಡಿಗೇಡಿಗಳು ಮಹಾತ್ಮ ಗಾಂಧಿ ಅವರ ಪ್ರತಿಮೆಗೆ ಹಾನಿ ಮಾಡಿದ್ದಾರೆ.

Advertisement

ಶುಕ್ರವಾರ ಮಧ್ಯರಾತ್ರಿ ಈ ಘಟನೆ ನಡೆದಿದ್ದು, ಈ ಸಂಬಂಧ ಜವರ್‌ ಗ್ರಾಪಂ ಕಾರ್ಯದರ್ಶಿ ದೇವರಾಜ್‌ ಸಿಂಗ್‌ ಎಂಬುವವರು ದೂರು ದಾಖಲಿಸಿದ್ದಾರೆ. ಕಿಡಿಗೇಡಿಗಳ ವಿರುದ್ಧ ಐಎಫ್ಆರ್‌ ದಾಖಲಿಸಲಾಗಿದ್ದು, ಅವರ ಬಂಧನಕ್ಕೆ ಬಲೆ ಬೀಸಲಾಗಿದೆ ಎಂದು ಜವಾರ್‌ ಪೊಲೀಸ್‌ ಠಾಣೆಯ ಠಾಣಾಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಕೃತ್ಯ ಎಸಗಿದ ಆರೋಪಿಗಳನ್ನು ಶೀಘ್ರ ಬಂಧಿಸಿ, ಅವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕೆಂದು ರಂಗೂನ್‌ ಗ್ರಾಮದ ಮುಖಂಡರು ಮತ್ತು ಗ್ರಾಮಸ್ಥರು ಒತ್ತಾಯಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next