Advertisement

ಪಂಜಾಬ್ ನಲ್ಲಿ ಮಹಾತ್ಮ ಗಾಂಧಿ ಪ್ರತಿಮೆ ಧ್ವಂಸ; ತೀವ್ರ ಆಕ್ರೋಶ

03:48 PM Jul 16, 2022 | Team Udayavani |

ಬಟಿಂಡಾ : ಇಲ್ಲಿನ ರಾಮನ್ ಮಂಡಿಯಲ್ಲಿರುವ ಸಾರ್ವಜನಿಕ ಉದ್ಯಾನವನದಲ್ಲಿ ಮಹಾತ್ಮ ಗಾಂಧಿಯವರ ಪ್ರತಿಮೆಯನ್ನು ಅಪರಿಚಿತ ವ್ಯಕ್ತಿಗಳು ಧ್ವಂಸಗೊಳಿಸಿದ್ದಾರೆ ಎಂದು ಪೊಲೀಸರು ಶನಿವಾರ ತಿಳಿಸಿದ್ದಾರೆ. ಗುರುವಾರ ಮತ್ತು ಶುಕ್ರವಾರದ ನಡುವಿನ ಮಧ್ಯರಾತ್ರಿ ಈ ಘಟನೆ ನಡೆದಿದೆ ಎಂದು ಅವರು ತಿಳಿಸಿದ್ದಾರೆ.

Advertisement

ಸ್ಟೇಷನ್ ಹೌಸ್ ಆಫೀಸರ್ (ಸದರ್) ಹರ್ಜೋತ್ ಸಿಂಗ್ ಮಾನ್ ಅವರು ಈ ಬಗ್ಗೆ ತನಿಖೆ ನಡೆಸುತ್ತಿದ್ದಾರೆ ಮತ್ತು ರಮ್ಮನ್ ಮಂಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣವನ್ನು ದಾಖಲಿಸಿದ್ದಾರೆ.

ವಿಧ್ವಂಸಕ ಕೃತ್ಯದ ಬಗ್ಗೆ ತಿಳಿದ ಸ್ಥಳೀಯರು ಘಟನೆಯನ್ನು ತೀವ್ರವಾಗಿ ಖಂಡಿಸಿದ್ದು, ಘಟನೆಯ ಹಿಂದಿರುವವರನ್ನು ಕೂಡಲೇ ಬಂಧಿಸಬೇಕು ಎಂದು ಸಾರ್ವಜನಿಕ ಆಗ್ರಹ ವ್ಯಕ್ತವಾಗಿದೆ. ಆರೋಪಿಗಳನ್ನು ಶೀಘ್ರವೇ ಬಂಧಿಸಲಾಗುವುದು ಎಂದು ಪೊಲೀಸರು ಭರವಸೆ ನೀಡಿದ್ದು, ಆರೋಪಿಗಳ ಪತ್ತೆಗೆ ಆ ಪ್ರದೇಶದ ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಲಾಗುತ್ತಿದೆ ಎಂದು ತಿಳಿಸಿದ್ದಾರೆ.

ಇದನ್ನೂ ಓದಿ : ಮಾಲ್ ನಲ್ಲಿ ನಮಾಜ್ ಗೆ ಪ್ರತಿಯಾಗಿ ಸುಂದರಕಾಂಡ : ಲಕ್ನೋದಲ್ಲಿ ಮೂವರ ಬಂಧನ

Advertisement

Udayavani is now on Telegram. Click here to join our channel and stay updated with the latest news.

Next