Advertisement
ಮಂಗಳಾದೇವಿ ಕ್ಷೇತ್ರದಲ್ಲಿ ಬೆಳಗ್ಗೆ ಉಷಾಃಕಾಲ ಪೂಜೆ ನಿತ್ಯ ಪೂಜೆ, ಪಂಚಾಮೃತ ಅಭಿಷೇಕ, ನವಕ ಕಲಶಾಭಿಷೇಕ, ಕಲೊ³àಕ್ತ ಪೂಜೆ, ಧಾನ್ಯಲಕ್ಷ್ಮೀ ಪೂಜೆ, ವಿದ್ಯಾರಂಭ, ತುಲಾಭಾರ ಸೇವೆ, ಮಧ್ಯಾಹ್ನ ಮಹಾಪೂಜೆ, ರಥಾರೋಹಣ, ಶ್ರೀದೇವಿಯ ವೈಭವದ ವಿಜಯದಶಮಿ ಮಹಾರಥೋತ್ಸವ, ರಥ ಸವಾರಿ, ಶಮೀಕಟ್ಟೆ ಪೂಜೆ, ಪಾಲಕಿ ಬಲಿ, ಚೆಂಡೆ ಸುತ್ತು, ವಿಜಯದಶಮಿ ಮಹಾಪೂಜೆ ನೆರವೇರಿತು.
ಶ್ರೀ ಶಾರದಾ ಮಹೋತ್ಸವ ಸಮಿತಿ ವತಿಯಿಂದ ರಥಬೀದಿಯ ಶ್ರೀ ವೆಂಕಟರಮಣ ದೇವಾಲಯದ ಆಚಾರ್ಯ ಮಠ ವಠಾರದಲ್ಲಿರುವ ವಸಂತ ಮಂಟಪದಲ್ಲಿ 102ನೇ ವರ್ಷದ ಶ್ರೀ ಶಾರದಾ ಮಹೋತ್ಸವದ ಬೃಹತ್ ಶೋಭಾಯಾತ್ರೆ ಅ.14ರಂದು ನಡೆಯಲಿದೆ. ಸಂಜೆ 5 ಗಂಟೆಗೆ ಶ್ರೀ ಶಾರದಾ ಮಾತೆಗೆ ಪೂರ್ಣಾಲಂಕಾರ ನಡೆಯಲಿದೆ. ಚಿತ್ರಾಪುರ ಮಠ ಸಂಸ್ಥಾನದ ಶ್ರೀಮದ್ ಸದ್ಯೋಜಾತ ಶಂಕರಾಶ್ರಮ ಸ್ವಾಮೀಜಿಗಳವರ ಉಪಸ್ಥಿತಿಯಲ್ಲಿ ಶ್ರೀ ಶಾರದಾ ಮಾತೆಯ ವಿಸರ್ಜನೆ ಮೆರವಣಿಗೆ ರಾತ್ರಿ 8 ಗಂಟೆಗೆ ನಡೆಯಲಿದೆ. ಉತ್ಸವ ಸ್ಥಾನದಿಂದ ಹೊರಡುವ ಮೆರವಣಿಗೆ ಶ್ರೀ ಮಹಾಮಾಯಿ ದೇವಾಲಯವಾಗಿ ಕೆನರಾ ಹೈಸ್ಕೂಲಿನ ಹಿಂಬದಿಯಿಂದ ಮಂಜೇಶ್ವರ ಗೋವಿಂದ ಪೈ ವೃತ್ತ ತಲುಪಿ ಅಲ್ಲಿಂದ ಡೊಂಗರಕೇರಿಯ ಮೂಲಕ ನ್ಯೂಚಿತ್ರಾ ಟಾಕೀಸ್, ಬಸವನಗುಡಿ, ಚಾಮರಗಲ್ಲಿ, ರಥ ಬೀದಿಯಾಗಿ ಶ್ರೀ ಮಹಾಮಾಯಿ ತೀರ್ಥದಲ್ಲಿ ಸಮಾಪನಗೊಳ್ಳಲಿದೆ.