ನಟನೆಯಲ್ಲಿ ಬಿಝಿಯಾಗಿರುವ ಸಾಧುಕೋಕಿಲ ಸದ್ದಿಲ್ಲದೇ ಸಿನಿಮಾವೊಂದನ್ನು ನಿರ್ದೇಶಿಸಿದ್ದಾರೆ. ಅದು “ಮಹಾಯೋಗಿ ಸಿದ್ದರೂಢ’. ಬಾಗಲಕೋಟೆಯ ಮುಧೋಳದ ಮಂಟೂರಿನ ಶ್ರೀ ಸದಾನಂದ ಮಹಾಸ್ವಾಮಿಗಳು ಈ ಚಿತ್ರ ನಿರ್ಮಾಣ ಮಾಡಿದ್ದಾರೆ.
ಇತ್ತೀಚೆಗೆ ಈ ಚಿತ್ರದ ಟ್ರೇಲರ್ ಬಿಡುಗಡೆಯಾಗಿದೆ. ನಟ ಪುನೀತ್ ರಾಜ್‌ಕುಮಾರ್ ಚಿತ್ರದ ಟ್ರೇಲರ್ ಬಿಡುಗಡೆ ಮಾಡಿ ಚಿತ್ರತಂಡಕ್ಕೆ ಶುಭಕೋರಿದರು. ಬಿಡುಗಡೆ ಬಳಿಕ ಮಾತನಾಡಿದ ಪುನೀತ್, “ನಮ್ಮ ಮನೆಗೂ, ಸಿದ್ದರೂಢ ಮಠಕ್ಕೂ ಅವಿನಾಭಾವ ಸಂಬಂಧವಿದೆ. ಅಪ್ಪಾಜಿ ಅವರಾಗಲಿ, ನಮ್ಮ ಕುಟುಂಬದ ಯಾರೇ ಆಗಲಿ, ಹುಬ್ಬಳ್ಳಿಗೆ ಹೋದಾಗ ಸಿದ್ದರೂಢರ ಮಠಕ್ಕೆ ಹೋಗಿ ಪೂಜೆ ಮಾಡಿಸಿಕೊಂಡು ಬರುತ್ತೇವೆ. ನಮ್ಮ ಅಜ್ಜಿ ಅವರು ಕೆಲವು ದಿನಗಳ ಕಾಲ ಈ ಮಠದÇÉೇ ಇದ್ದರು ಎಂದು ಅಪ್ಪಾಜಿ ಹೇಳುತ್ತಿದ್ದರು. ಈ ಚಿತ್ರದ ಟ್ರೇಲರ್ ಬಿಡುಗಡೆಗೆ ಬರಬೇಕೆಂದು ಸಾಧುಕೋಕಿಲ ಅವರು ಕರೆದಾಗ ಸಂತೋಷವಾಯಿತು’ ಎಂದರು.
ಇದನ್ನೂ ಓದಿ:ಧನ್ವೀರ್-ಶ್ರೀಲೀಲಾ ಮಸ್ತ್ ಸ್ಟೆಪ್ಸ್: ‘ಬೈ ಟು ಲವ್’ ಚಿತ್ರದ ಹಾಡು ಇಂದು ರಿಲೀಸ್
ಹೊಸ ಬಗೆಯ ಸಿನಿಮಾವನ್ನು ನಿರ್ದೇಶನ ಮಾಡಿದ ಖುಷಿಯಲ್ಲಿದ್ದ ಸಾಧುಕೋಕಿಲ, “ಶರಣ ಶ್ರೇಷ್ಠರಾದ ಸಿದ್ದರೂಢರ ಜೀವನಾಧಾರಿತ ಚಿತ್ರ ನಿರ್ದೇಶನ ಮಾಡಿದ್ದು ನನ್ನ ಪುಣ್ಯ. ಮಂಟೂರಿನ ಗುರುಗಳು ನನ್ನನ್ನ ಕರೆದು ಈ ರೀತಿಯ ಚಿತ್ರ ಮಾಡಿಕೊಬೇಕೆಂದು ಹೇಳಿದರು. ಈ ಸಲುವಾಗಿ ನನ್ನನ್ನು ದೆಹಲಿಗೆ ಕಳುಹಿಸಿ ಅಲ್ಲಿ ಸ್ವಾಮಿನಾರಾಯಣ ಆಶ್ರಮದಲ್ಲಿ ಗುರುಗಳ ಕುರಿತು ಚಿತ್ರ ಮಾಡಿದ್ದಾರೆ. ನೋಡಿ ಬನ್ನಿ ಎಂದರು. ನೋಡಿ ಬಂದೆ. ಎಲ್ಲರಿಗೂ ಸಾಧುಕೋಕಿಲ, ಇಂತಹ ಚಿತ್ರ ಮಾಡಿದ್ದಾರಾ? ಎಂಬ ಆಶ್ಚರ್ಯ. ನನಗೂ ಮೊದಲು ಹಾಗೆ ಅನಿಸಿತು. ಹೆಚ್ಚಿನ ಜನ ಹುಬ್ಬಳ್ಳಿಯ ಸಿದ್ದರೂಢ ಮಠ ನೋಡಿರುತ್ತೀರಾ. ಆದರೆ ಮಂಟೂರಿನ ಸಿದ್ದರೂಢ ಮಠಕ್ಕೆ ಹೋಗಿ ಬನ್ನಿ. ಒಂದು ರೀತಿ ಸ್ವಾಮಿನಾರಾಯಣ ಮಂದಿರ ಇದ್ದ ಹಾಗೆ ಇದೆ. ನಮ್ಮ ಚಿತ್ರದಲ್ಲಿ ಸಿದ್ದರೂಢರ ಎಂಟು ವರ್ಷದಿಂದ ನಲವತ್ತೆಂಟು ವರ್ಷಗಳ ನಡುವೆ ನಡೆಯುವ ಮಹಿಮೆಗಳನ್ನು ತೋರಿ ಸಲಾಗಿದೆ. ಮಂಟೂರು, ಹೈದರಾಬಾದ್, ಕಾಶ್ಮೀರ, ಸಕಲೇಶಪುರ ಹಾಗೂ ಕರ್ನಾಟಕದ ಸುಂದರವಾದ ಸ್ಥಳಗಳಲ್ಲಿ ಚಿತ್ರೀಕರಣ ನಡೆಸಲಾಗಿದೆ’ ಎಂದರು.
ಈ ಚಿತ್ರದಲ್ಲಿ ನಾಲ್ಕು ಹಾಡುಗಳಿವೆ. ನವೆಂಬರ್ 9ರಂದು ಮಂಟೂರಿನ ಚಿತ್ರಮಂದಿರದಲ್ಲಿ 55 ನಿಮಿಷಗಳ ಅವಧಿಯ ಈ ಚಿತ್ರ ಬಿಡುಗಡೆಯಾಗುತ್ತಿದೆ. ಅದೊಂದೆ ಕಡೆ ಮಾತ್ರ ಈ ಚಿತ್ರ ನಿರಂತರವಾಗಿ ಪ್ರದರ್ಶನವಾಗುತ್ತಿರುತ್ತದೆ ಎಂದರು
ಚಿತ್ರದ ಬಗ್ಗೆ ಮಾತನಾಡುವ ಶ್ರೀ ಸದಾನಂದ ಸ್ವಾಮಿಗಳು, “ಮಹಾಶರಣರಾದ ಸಿದ್ದರೂಢರ ಮಹಿಮೆ ಅಪಾರ. ಸುಮಾರು ಏಳುವರೆ ಸಾವಿರಕ್ಕೂ ಅಧಿಕ ಮಾರ್ಗವನ್ನು ಕಾಲ್ನಡಿಗೆಯಲ್ಲಿ ಕ್ರಮಿಸಿ ದವರು ಅವರು. ಅಂತಹ ಮಹಿಮಾ ಪುರುಷರ ಬಗ್ಗೆ ನಮಗೆ ಚಿತ್ರ ವೊಂ ದನ್ನು ನಿರ್ಮಿಸುವ ಬಯಕೆಯಾಗಿ ಸಾಧುಕೋಕಿಲ ಅವರನ್ನು ಸಂಪರ್ಕಿಸಿದೆವು. ಅವರು ಉತ್ತಮವಾಗಿ ತೆಗೆದು ಕೊಟ್ಟಿದ್ದಾರೆ’ ಎಂದರು. ಚಿತ್ರದಲ್ಲಿ ತೀರ್ಥೇಶ್ ಹಾಗೂ ಅರವಿಂದ್ ಕುಪ್ಲಿಕರ್ ನಟಿಸಿದ್ದಾರೆ.