ಭೋಪಾಲ್: ಸದ್ಯಕ್ಕೆ ಅಂತಾರಾಷ್ಟ್ರೀಯ ಕ್ರಿಕೆಟ್ ನಿಂದ ದೂರ ಉಳಿದಿರುವ ಟೀಂ ಇಂಡಿಯಾದ ಸಕ್ಸಸ್ ಫುಲ್ ನಾಯಕರಲ್ಲಿ ಒಬ್ಬರಾಗಿರುವ ಎರಡು ವಿಶ್ವಕಪ್ ವಿಜೇತ ತಂಡದ ನಾಯಕ ಮಹೇಂದ್ರ ಸಿಂಗ್ ಧೋನಿ ಅವರು ‘ವೈಲ್ಡ್ ಲೈಫ್ ಫೊಟೋಗ್ರಾಫರ್’ ಆಗಿ ಬದಲಾಗಿದ್ದಾರೆ.
ಕೂಲ್ ಕ್ಯಾಪ್ಟನ್ ಧೋನಿ ಅವರು ಇತ್ತೀಚೆಗೆ ತಮ್ಮ ಕುಟುಂಬದವರು ಹಾಗೂ ಸ್ನೇಹಿತರ ಜೊತೆ ಮಧ್ಯಪ್ರದೇಶದ ಕನ್ಹಾ ಹುಲಿ ರಕ್ಷಿತಾರಣ್ಯದಲ್ಲಿ ಸಫಾರಿ ಮಾಡಿದ ಸಂದರ್ಭದಲ್ಲಿ ತಮ್ಮ ಕೆಮರಾ ಕಣ್ಣಿಗೆ ಸೆರೆ ಸಿಕ್ಕಿದ ವ್ಯಾಘ್ರ ಒಂದರ ಫೊಟೋವನ್ನು ತಮ್ಮ ಇನ್ ಸ್ಟಾಗ್ರಾಂ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. ಹುಲಿ ರಕ್ಷಿತಾರಣ್ಯದಲ್ಲಿ ನನ್ನ ಕೆಮರಾಕ್ಕೆ ಸೆರೆಸಿಕ್ಕ ಹುಲಿ ಇದು. ಗಂಭೀರ ಭಂಗಿಯಲ್ಲಿ ನನಗೆ ಹಲವು ಕ್ಲಿಕ್ ಗಳನ್ನು ಮಾಡಲು ಅವಕಾಶ ಮಾಡಿಕೊಟ್ಟಿತು ಎಂದು ಧೋನಿ ಅವರು ಬರೆದಿದ್ದಾರೆ.
ಕಳೆದ ಜನವರಿಯಲ್ಲಿ ಧೋನಿ ಅವರು ಕನ್ಹಾ ಹುಲಿ ಸಂರಕ್ಷಣಾ ಪ್ರದೇಶಕ್ಕೆ ಭೇಟಿ ನೀಡಿದ್ದರು. ಆ ಸಂದರ್ಭದಲ್ಲಿ ತಾವು ಕ್ಲಿಕ್ಕಿಸಿದ ಈ ಅಪರೂಪದ ವ್ಯಾಘ್ರ ಚಿತ್ರವನ್ನು ಇಂದು ಧೋನಿ ಅವರು ತಮ್ಮ ಇನ್ ಸ್ಟಾಗ್ರಾಂ ಖಾತೆಯಲ್ಲಿ ಹಂಚಿಕೊಂಡಿದ್ದಾರೆ.