ಮುಂಬಯಿ : ಮಹೀಂದ್ರಾ ಕಂಪನಿಯು ದೇಶಿಯ ಮಾರುಕಟ್ಟೆಯಲ್ಲಿ ಹಲವು ಹೊಸ ಮಾದರಿಯ ಎಲೆಕ್ಟ್ರಿಕ್ ಕಾರುಗಳ ಮಾರಾಟಕ್ಕೆ ಸಿದ್ದವಾಗುತ್ತಿದ್ದು, ಕಂಪನಿಯು ಮುಂದಿನ ತಿಂಗಳು ಸೆಪ್ಟೆಂಬರ್ 8ರಂದು ಹೊಸ ಇವಿ ಕಾರು ಮಾದರಿಯನ್ನು ಬಿಡುಗಡೆ ಮಾಡುವುದಾಗಿ ಹೇಳಿಕೊಂಡಿದೆ.
ಕಂಪನಿಯು ತನ್ನ ಹೊಸ ತಲೆಮಾರಿನ ಎಕ್ಸ್‌ಯುವಿ400 ಮಾದರಿಯ ಕಾರನ್ನು ಬಿಡುಗಡೆ ಮಾಡಲು ಮುಂದಾಗಿದೆ.
ಬ್ಯಾಟರಿ :
ಹೊಸ ಎಕ್ಸ್‌ಯುವಿ400 ಮಾದರಿಯು ವಿವಿಧ ವೆರಿಯೆಂಟ್‌ಗಳೊಂದಿಗೆ ಎರಡು ರೀತಿಯ ಬ್ಯಾಟರಿ ಪ್ಯಾಕ್ ಆಯ್ಕೆ ಪಡೆದುಕೊಳ್ಳಲಿದ್ದು, ಇದು ಪ್ರತಿ ಚಾರ್ಜ್‌ಗೆ ಕನಿಷ್ಠ 350 ಕಿ.ಮೀ ನಿಂದ 400 ಕಿ.ಮೀ ಮೈಲೇಜ್ ಪ್ರೇರಿತ ಬ್ಯಾಟರಿ ಪ್ಯಾಕ್‌ಗಳನ್ನು ಹೊಂದಿರಲಿದೆ.
ವಿಶೇಷತೆಗಳು :
ಮಹೀಂದ್ರಾ ಎಕ್ಸ್‌ಯುವಿ400 ಎಲೆಕ್ಟ್ರಿಕ್ ವಾಹನ ಹಲವು ಆಧುನಿಕ ತಂತ್ರಜ್ಞಾನಗಳನ್ನು ಹೊಂದಿದ್ದು. ಅಡ್ವಾನ್ಸ್ ಡ್ರೈವರ್ ಅಸಿಸ್ಟೆನ್ಸ್ ಸಿಸ್ಟಮ್, ಡೇಟೈಮ್ ರನ್ನಿಂಗ್ ಲ್ಯಾಂಪ್ ಮತ್ತು ಹೊಸ ವಿನ್ಯಾಸದಲ್ಲಿ ಹೆಡ್‌ಲೈಟ್ ಹೊಂದಿದ್ದು, ಇದು ಕ್ಲೋಸ್-ಆಫ್ ಫ್ರಂಟ್ ಗ್ರಿಲ್ ಮತ್ತು ಹೊಸದಾಗಿ ವಿನ್ಯಾಸಗೊಳಿಸಲಾದ ಟೈಲ್ ಲ್ಯಾಂಪನ್ನು ಹೊಂದಿದೆ.
Related Articles
ಬೆಲೆ ಎಷ್ಟು :
ಎಕ್ಸ್‌ಶೋರೂಂ ಪ್ರಕಾರ ಹೊಸ ಕಾರು ಆರಂಭಿಕವಾಗಿ ರೂ. 12 ಲಕ್ಷದಿಂದ ಟಾಪ್ ಎಂಡ್ ಮಾದರಿಯು ರೂ. 19 ಲಕ್ಷದ ತನಕ ಬೆಲೆ ಹೊಂದಬಹುದಾಗಿದ್ದು, ಸ್ಟ್ಯಾಂಡರ್ಡ್ ಮತ್ತು ಎಕ್ಸ್ಸೆಂಡ್ ಮಾದರಿಗಳೊಂದಿಗೆ ನೆಕ್ಸಾನ್ ಇವಿ ಮತ್ತು ನೆಕ್ಸಾನ್ ಇವಿ ಮ್ಯಾಕ್ಸ್ ಮಾದರಿಗಳಿಗೆ ಪೈಪೋಟಿಯಾಗಿದೆ.