Advertisement

Chikkamagaluru: ಕಾಫಿನಾಡಿನಲ್ಲಿ ನಿಷೇಧಾಜ್ಞೆ ನಡುವೆಯೂ ಮಹಿಷ ದಸರಾ ಆಚರಣೆ… ಹಲವರ ಬಂಧನ

04:40 PM Oct 20, 2023 | Team Udayavani |

ಚಿಕ್ಕಮಗಳೂರು: ನಿಷೇಧಾಜ್ಞೆ ನಡುವೆಯೂ ಮಹಿಷ ದಸರಾ ಆಚರಣೆ ಮಾಡಲು ಬಂದಿದ್ದ ದಲಿತ ಸಂಘಟನೆ ಕಾರ್ಯಕರ್ತರನ್ನ ಪೊಲೀಸರು ಬಂದಿಸಿದ ಘಟನೆ ನಡೆದಿದೆ.

Advertisement

ನಗರದ ಹನುಮಂತಪ್ಪ ವೃತ್ತದಲ್ಲಿ ಅಂಗಡಿ ಚಂದ್ರು ನೇತೃತ್ವದಲ್ಲಿ ಪ್ರಗತಿಪರ ಸಂಘಟನೆ ಕಾರ್ಯಕರ್ತರು ಮಹಿಷಾಸುರನ ಭಾವಚಿತ್ರ ಪ್ರದರ್ಶನ ಮಾಡಿದ್ದಾರೆ ಈ ವೇಳೆ ಪೊಲೀಸರು ಕಾರ್ಯಕರ್ತರನ್ನು ತಡೆಯಲು ಮುಂದಾಗಿದ್ದಾರೆ, ಈ ವೇಳೆ ಕಾರ್ಯಕರ್ತರು ಪೋಲೀಸರ ವಿರುದ್ಧ ಕಿಡಿಕಾರಿದ್ದಾರೆ ಅಲ್ಲದೆ ಮಹಿಷಾಸುರನ ಆಚರಣೆಗೆ ಅವಕಾಶ ನೀಡದ ನಿಟ್ಟಿನಲ್ಲಿ ಆಕ್ರೋಶಗೊಂಡ ಕಾರ್ಯಕರ್ತರು ಸರಕಾರದ ವಿರುದ್ಧ ಕಿಡಿಕಾರಿದ್ದಾರೆ.

ಈ ವೇಳೆ ಪೊಲೀಸರು ಹಾಗೂ ದಲಿತ ಸಂಘಟನೆ ಕಾರ್ಯಕರ್ತರ ನಡುವೆ ಮಾತಿನ ಚಕಮಕಿ ನಡೆದಿದೆ. ಕಾರ್ಯಕರ್ತರು ಪ್ರತಿಭಟನೆಗೆ ಮುಂದಾಗಿದ್ದಾರೆ ಈ ವೇಳೆ ಪೊಲೀಸರು ಕಾರ್ಯಕರ್ತರನ್ನು ಬಂಧಿಸಿದ್ದಾರೆ.

ಇದನ್ನೂ ಓದಿ: Gangavathi;ಎಸಿ ಕೋರ್ಟ್ ನಾಳೆಯಿಂದ ಕಾರ್ಯಾರಂಭ: ವಕೀಲರ ಸಂಘದಿಂದ ಸ್ವಾಗತ

Advertisement

Udayavani is now on Telegram. Click here to join our channel and stay updated with the latest news.

Next