Advertisement

ಮೈನ್‌ಪುರಿ ಲೋಕಸಭಾ ಉಪಚುನಾವಣೆ : ಡಿಂಪಲ್ ಕಣಕ್ಕಿಳಿಸಿದ ಎಸ್ ಪಿ

02:20 PM Nov 13, 2022 | Team Udayavani |

ಲಕ್ನೋ : ಉತ್ತರ ಪ್ರದೇಶದ ಮೈನ್‌ಪುರಿ ಲೋಕಸಭಾ ಕ್ಷೇತ್ರದ ಉಪಚುನಾವಣೆಗೆ ಸಮಾಜವಾದಿ ಪಕ್ಷವು ಅಖಿಲೇಶ್ ಯಾದವ್ ಅವರ ಪತ್ನಿ ಡಿಂಪಲ್ ಯಾದವ್ ಅವರನ್ನು ಕಣಕ್ಕಿಳಿಸಿದೆ.

Advertisement

ಸಮಾಜವಾದಿ ಪಕ್ಷದ ಸಂಸ್ಥಾಪಕ ಮತ್ತು ಮುಲಾಯಂ ಸಿಂಗ್ ಯಾದವ್ ಅವರ ನಿಧನದಿಂದ ತೆರವಾದ ಮೈನ್‌ಪುರಿ ಕ್ಷೇತ್ರದಲ್ಲಿ ಡಿಸೆಂಬರ್  5 ರಂದು ಉಪಚುನಾವಣೆ ನಿಗದಿಯಾಗಿದ್ದು ಸಮಾಜವಾದಿ ಪಕ್ಷವು ಕುಟುಂಬದ ಭದ್ರಕೋಟೆಯನ್ನು ಹೊಂದಿದ್ದು, ಬಿಜೆಪಿಯ ಸವಾಲನ್ನು ಹಿಮ್ಮೆಟ್ಟಿಸಲು ಹೊಸ ತಂತ್ರ ಹಣೆದಿದೆ.

ಕ್ಷೇತ್ರದ ಅಡಿಯಲ್ಲಿ ಬರುವ ಐದು ವಿಧಾನಸಭಾ ಕ್ಷೇತ್ರಗಳಲ್ಲಿ ಎರಡು ಸ್ಥಾನಗಳನ್ನು ಪ್ರಸ್ತುತ ಅಖಿಲೇಶ್ ಯಾದವ್ ಮತ್ತು ಶಿವಪಾಲ್ ಯಾದವ್ ಅವರು ಶಾಸಕರಾಗಿ ಪ್ರತಿನಿಧಿಸುತ್ತಿದ್ದಾರೆ.

”ಮೈನ್‌ಪುರಿಯಲ್ಲಿ ಒಂದು ಕಾಲದಲ್ಲಿ ಎಸ್‌ಪಿ ಬೂತ್‌ ವಶಪಡಿಸಿಕೊಳ್ಳುವುದು, ಮತ ದೋಚುವುದು, ಜನರನ್ನು ಬೆದರಿಸುವುದು ಸಾಮಾನ್ಯವಾಗಿತ್ತು, ಆದರೆ ಈಗ ಚುನಾವಣೆಗಳು ಪಾರದರ್ಶಕವಾಗಿದ್ದು, ಬಿಜೆಪಿ ಕೂಡ ಪ್ರಬಲ ಅಭ್ಯರ್ಥಿಯೊಂದಿಗೆ ಸ್ಪರ್ಧಿಸಲಿದೆ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಪ್ರದೀಪ್ ಚೌಹಾಣ್ ಹೇಳಿಕೆ ನೀಡಿದ್ದಾರೆ.ಹಲವರ ಹೆಸರು ಕೇಳಿ ಬರುತ್ತಿದ್ದು ಬಿಜೆಪಿ ಅಭ್ಯರ್ಥಿ ಇನ್ನಷ್ಟೇ ಅಂತಿಮವಾಗಬೇಕಿದೆ.

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next