Advertisement

ಬರ ಪರಿಸ್ಥಿತಿ ಸಮರ್ಪಕವಾಗಿ ನಿರ್ವಹಿಸಿ’

12:52 AM Feb 27, 2019 | Team Udayavani |

ಬೆಂಗಳೂರು:ರಾಜ್ಯದ ಬರಪೀಡಿತಪ್ರದೇಶಗಳಲ್ಲಿ ಕುಡಿಯುವ ನೀರು, ಮೇವು ಪೂರೈಕೆ ಬಗ್ಗೆ ಗಮನಹರಿಸಿಚೆಕ್‌ ಡ್ಯಾಂ,ದನದ ಕೊಟ್ಟಿಗೆ,ಶಾಲಾ ಕಾಂಪೌಂಡ್‌ ನಿರ್ಮಾಣಕ್ಕೆ ಹೆಚ್ಚಿನ ಆದ್ಯತೆ ನೀಡಬೇಕೆಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ಸಚಿವ ಕೃಷ್ಣಬೈರೇಗೌಡ ನಿರ್ದೇಶಿಸಿದ್ದಾರೆ.

Advertisement

ರಾಜ್ಯದ ಎಲ್ಲ ಜಿಲ್ಲೆಗಳ ಜಿಪಂ ಸಿಇಒ ಗಳೊಂದಿಗೆ ಮಂಗಳವಾರ ವಿಡಿಯೋ ಕಾನ್ಫರೆನ್ಸ್‌ ನಡೆಸಿದ ಸಚಿವರು, ಬರ ನಿರ್ವಹಣೆಯಲ್ಲಿ ನಿರ್ಲಕ್ಷ್ಯ ತೋರುವ ಅಧಿಕಾರಿಗಳ ವಿರುದ್ಧ  ಕಠಿಣ ಕ್ರಮ ಕೈಗೊಳ್ಳಲಾಗುವುದೆಂದು ಎಚ್ಚರಿಕೆ ನೀಡಿದರು. ಗ್ರಾಮೀಣಾಭಿವೃದಿಟಛಿ ಮತ್ತು ಪಂಚಾಯತ್‌ ರಾಜ್‌ ಇಲಾಖೆ ಅಧಿಕಾರಿಗಳು ಪ್ರಸಕ್ತ ಆರ್ಥಿಕ ವರ್ಷದಲ್ಲಿ ನಿಗದಿಪಡಿಸಿದ ಗುರಿ ಮುಟ್ಟಬೇಕು. ಇದರಲ್ಲಿ ಹಿನ್ನೆಡೆಯಾದರೂ ಸಂಬಂಧಪಟ್ಟವರ ವಿರುದ್ಧ  ಕ್ರಮ ಕೈಗೊಳ್ಳಲಾಗುವುದು ಎಂದರು.

ಅಸಮಾಧಾನ: ಗ್ರಾಮೀಣ ರಸ್ತೆಗಳ ನಿರ್ಮಾಣದ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ ಸಚಿವರು, ಈ ಉದ್ದೇಶಕ್ಕಾಗಿ ಈಗಾಗಲೇ 860 ಕೋಟಿ ರೂ. ಬಿಡುಗಡೆ ಮಾಡಲಾಗಿದೆ.

ಇದು ಸರಿಯಾದ ರೀತಿಯಲ್ಲಿ ಬಳಕೆಯಾಗುತ್ತಿಲ್ಲ ಎಂದು ಹೇಳಿದರು. ರಾಜ್ಯದ 6022 ಗ್ರಾಪಂಗಳ ಪೈಕಿ 1200 ಗ್ರಾಪಂಗಳಲ್ಲಿ ಘನತ್ಯಾಜ್ಯ ವಿಲೇವಾರಿ ಯೋಜನೆ ಪ್ರಾಯೋಗಿಕವಾಗಿ ಜಾರಿಗೊಳಿಸಲಾಗಿದೆ ಎಂದರು.

Advertisement

Udayavani is now on Telegram. Click here to join our channel and stay updated with the latest news.

Next