Advertisement

Karnataka: ದೇಗಲುಗಳ ಪ್ರಸಾದದಲ್ಲಿ ಗುಣಮಟ್ಟ ಕಾಯ್ದುಕೊಳ್ಳಿ: ಸಚಿವರ ಸೂಚನೆ

08:31 PM Sep 22, 2024 | Team Udayavani |

ಬೆಂಗಳೂರು: ತಿರುಪತಿ ಲಡ್ಡುವಿನಲ್ಲಿ ಪ್ರಾಣಿ ಕೊಬ್ಬಿನ ಅಂಶ ಪತ್ತೆಯಾಗಿರುವ ಆರೋಪದ ಹಿನ್ನೆಲೆಯಲ್ಲಿ ರಾಜ್ಯದ ಧಾರ್ಮಿಕ ದತ್ತಿ ಇಲಾಖೆಯಡಿ ಬರುವ ಎಲ್ಲ ಅಧಿಸೂಚಿತ ದೇವಾಲಯಗಳಲ್ಲಿ ಪ್ರಸಾದಗಳಲ್ಲಿ ಗುಣಮಟ್ಟ ಕಾಯ್ದುಕೊಳ್ಳುವಂತೆ ಸೂಚಿಸಲಾಗಿದೆ ಎಂದು ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ ಹೇಳಿದ್ದಾರೆ.

Advertisement

ಕರ್ನಾಟಕ ರಾಜ್ಯದ ಧಾರ್ಮಿಕ ದತ್ತಿ ಇಲಾಖೆಯಡಿ ಬರುವ ಎಲ್ಲ ಅಧಿಸೂಚಿತ ದೇವಾಲಯಗಳಲ್ಲಿ ಸೇವೆಗಳಿಗೆ ದೀಪಗಳಿಗೆ ಮತ್ತು ಎಲ್ಲ ವಿಧದ ಪ್ರಸಾದ ತಯಾರಿಕೆಗೆ ಹಾಗೂ ದಾಸೋಹ ಭವನದಲ್ಲಿ ಕಡ್ಡಾಯವಾಗಿ ನಂದಿನಿ ತುಪ್ಪವನ್ನು ಮಾತ್ರ ಬಳಸುವಂತೆ ಸೂಚಿಸಿದೆ. ಜತೆಗೆ ದೇವಾಲಯಗಳಲ್ಲಿ ತಯಾರಿಸಲಾಗುವ ಪ್ರಸಾದಗಳಲ್ಲಿ ಗುಣಮಟ್ಟವನ್ನು ಕಾಯ್ದುಕೊಳ್ಳುವಂತೆ ಸೂಚಿಸಲಾಗಿದೆ ಎಂದರು.

ರಾಜ್ಯದ ಮುಜರಾಯಿ ದೇವಾಲಯಗಳ ಪ್ರಸಾದಗಳಿಗೆ ನಂದಿನಿ ತುಪ್ಪ ಬಳಸಲಾಗುತ್ತಿದೆ. ಅದರ ಗುಣಮಟ್ಟ ಹಾಗೆ ಕಾಯ್ದುಕೊಳ್ಳುವಂತೆ ದೇವಸ್ಥಾನ ಕಾರ್ಯ ನಿರ್ವಾಹಕರಿಗೆ ಸೇರಿದಂತೆ ಹಿರಿಯ ಅಧಿಕಾರಿಗಳಿಗೆ ತಿಳಿಸಲಾಗಿದೆ.

ಧಾರ್ಮಿಕ ದತ್ತಿ ಇಲಾಖೆಯಡಿ ಬರುವ ಎಲ್ಲ ಅಧಿಸೂಚಿತ ದೇವಾಲಯಗಳಲ್ಲಿ ಸೇವೆಗಳಿಗೆ ದೀಪಗಳಿಗೆ ಮತ್ತು ಎಲ್ಲಾ ವಿಧದ ಪ್ರಸಾದ ತಯಾರಿಕೆಗೆ ಹಾಗೂ ದಾಸೋಹ ಭವನದಲ್ಲಿ ಕಡ್ಡಾಯವಾಗಿ ನಂದಿನಿ ತುಪ್ಪವನ್ನು ಮಾತ್ರ ಬಳಸುವಂತೆ ಸೂಚಿಸಲಾಗಿದೆ ಎಂದು ಸ್ಪಷ್ಟಪಡಿಸಿದ್ದಾರೆ.

ತಿರುಪತಿಗೆ ತೆರಳುವ ನಂದಿನಿ
ವಾಹನಗಳಿಗೆ ಜಿಪಿಎಸ್‌
ಈ ಮಧ್ಯ ಪ್ರತಿಕ್ರಿಯೆ ನೀಡಿರುವ ಕೆಎಂಎಫ್ ವ್ಯವಸ್ಥಾಪಕ ನಿರ್ದೇಶಕ ಜಗದೀಶ್‌, ಟಿಟಿಡಿಗೆ ತೆರಳುವ ನಂದಿನಿ ತುಪ್ಪದ ವಾಹನಗಳಿಗೆ ಸುರಕ್ಷತಾ ಭದ್ರತೆ ಕಲ್ಪಿಸಲಾಗಿದೆ. ತಿರುಪತಿಗೆ ನಂದಿನಿ ತುಪ್ಪ ಸಾಗಿಸುವ ವಾಹನಗಳಿಗೆ ಜಿಪಿಎಸ್‌ ಟ್ರ್ಯಾಕ್‌ ಮತ್ತು ಎಲೆಕ್ಟ್ರಿಕ್‌ ಡೋರ್‌ ಅಳವಡಿಲಾಗಿದೆ. ಲ್ಯಾಬ್‌ ಟೆಸ್ಟ್‌ ಮಾಡಿದ ಬಳಿಕ ನಂದಿನ ತುಪ್ಪ ಪೂರೈಸಲಾಗುತ್ತೆ. ಈ ಹಿಂದೆ ಇದ್ದ ಸರ್ಕಾರದಲ್ಲಿ ಟಿಟಿಡಿಗೆ ತುಪ್ಪ ಪೂರೈಕೆ ಮಾಡಿರಲಿಲ್ಲ. ಇದೀಗ ಟಿಟಿಡಿ ಬೇಡಿಕೆ ಮೇರೆಗೆ ನಂದಿನಿ ತುಪ್ಪ ಪೂರೈಕೆ ಮಾಡುತ್ತಿದ್ದೇವೆ ಎಂದು ಮಾಹಿತಿ ನೀಡಿದ್ದಾರೆ.

Advertisement

ಬೇರೆ ರಾಜ್ಯಗಳಿಂದಲೂ ನಂದಿನ ತುಪ್ಪಕ್ಕೆ ಬೇಡಿಕೆ ಹೆಚ್ಚಿದೆ. ರಾಜ್ಯದ ಧಾರ್ಮಿಕ ದತ್ತಿ ಇಲಾಖೆಯ ದೇವಾಲಯಗಳಿಂದಲೂ ನಂದಿ ತುಪ್ಪದ ಬಗ್ಗೆ ಬೇಡಿಕೆ ಬಂದಿದೆ ಎಂದು ಹೇಳಿದ್ದಾರೆ.

 

Advertisement

Udayavani is now on Telegram. Click here to join our channel and stay updated with the latest news.

Next