ಬೆಂಗಳೂರು: ಶಿವಮೊಗ್ಗ ನಗರದ ಸೋಗಾನೆ ಗ್ರಾಮದಲ್ಲಿ ವಿಮಾನ ನಿಲ್ದಾಣ ನಿರ್ಮಾಣ ಕಾಮಗಾರಿಯನ್ನು ವರ್ಷ ದೊಳಗೆ ಪೂರ್ಣಗೊಳಿಸಬೇಕು. ಹಾಗೆಯೇ, ಕಾಮಗಾರಿಯಲ್ಲಿ ಗುಣಮಟ್ಟ ಕಾಯ್ದುಕೊಳ್ಳಬೇಕು. ವಿಜಯಪುರ ವಿಮಾನ ನಿಲ್ದಾಣ ನಿರ್ಮಾಣಕ್ಕೆ ಈಗಾಗಲೇ ಭೂಮಿ ಗುರುತಿಸಲಾಗಿದ್ದು, ಇದಕ್ಕೆ ಸಂಬಂಧಿಸಿದಂತೆ ಪುನರ್ ಪರಿಶೀಲನೆ ನಡೆಸಿ ಕ್ರಮ ಕೈಗೊಳ್ಳಬೇಕು ಎಂದು ಮುಖ್ಯ ಮಂತ್ರಿ ಬಿ.ಎಸ್ ಯಡಿಯೂರಪ್ಪ ಸೂಚನೆ ನೀಡಿದರು.
ಗೃಹ ಕಚೇರಿ “ಕೃಷ್ಣಾ’ದಲ್ಲಿ ಬುಧವಾರ ಲೋಕೋಪಯೋಗಿ ಇಲಾಖೆ ಪ್ರಗತಿ ಪರಿಶೀಲನಾ ಸಭೆ ನಡೆಸಿ, ರಸ್ತೆ ಕಾಮಗಾರಿಗಳನ್ನು ತ್ವರಿತವಾಗಿ ಕೈಗೊಳ್ಳುವ ಜತೆಗೆ ಕೆರೆ, ಹಳ್ಳ ಹಾಗೂ ನದಿಪಾತ್ರದ ಮರಳನ್ನು ಕಾಮಗಾರಿಗಳಿಗೆ ಬಳಸಬೇಕು. ಕಳೆದ ಬಾರಿ ನೆರೆಯಿಂದಾಗಿ ಹಾಳಾದ ರಸ್ತೆ, ಸೇತುವೆಗಳ ಪುನರ್ ನಿರ್ಮಾಣ ಕಾಮಗಾರಿಗಳನ್ನು ಆದ್ಯತೆ ಮೇರೆಗೆ ಪೂರ್ಣಗೊಳಿಸಬೇಕು ಎಂದು ಅಧಿಕಾರಿಗಳಿಗೆ ತಾಕೀತು ಮಾಡಿದರು.
ಲೋಕೋಪಯೋಗಿ ಸಚಿವ ಹಾಗೂ ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ ಮಾತನಾಡಿ, ನಾನಾ ಎಂಜಿನಿಯರಿಂಗ್ ಇಲಾಖೆಗಳ ದರ ಪಟ್ಟಿ ಪರಿಶೀಲಿಸಿ ರಾಜ್ಯಾದ್ಯಂತ ಏಕರೂಪ ದರ ಪಟ್ಟಿ ಪ್ರಕಟಿಸಲು ಇಲಾಖೆಯ ನಿವೃತ್ತ ಅಧಿಕಾರಿಗಳ ತಾಂತ್ರಿಕ ಸಮಿತಿ ಅಧ್ಯಯನ ನಡೆಸುತ್ತಿದೆ. ಸಮಿತಿ ಶೀಘ್ರದಲ್ಲೇ ವರದಿ ಸಲ್ಲಿಸಲಿದೆ. ಏಕರೂಪ ದರ ಪಟ್ಟಿ ಸಿದಟಛಿವಾದರೆ ಸರ್ಕಾರಕ್ಕೆ ನೂರಾರು ಕೋಟಿ ರೂ. ಉಳಿತಾಯ ಮಾಡಬಹುದಾಗಿದೆ ಎಂದು ಹೇಳಿದರು.
ಸಭೆಯಲ್ಲಿದ್ದ ಅಧಿಕಾರಿಗಳು, ಪ್ರವಾಹ ಪೀಡಿತ ಪ್ರದೇಶಗಲ್ಲಿ 500 ಕೋಟಿ ರೂ. ವೆಚ್ಚದ ಕಾಮಗಾರಿಗಳನ್ನು ಕೈಗೊಳ್ಳಲಾಗಿದೆ. ಪ್ರವಾಹದಿಂದ ಹಾಳಾಗಿರುವ 1800 ರಸ್ತೆಗಳ ಪೈಕಿ ಈಗಾಗಲೇ 1700 ರಸ್ತೆ ಕಾಮಗಾರಿ ಪೂರ್ಣಗೊಂಡಿವೆ. ಸೇತುವೆ ನಿರ್ಮಾಣ, ದುರಸ್ತಿ ಕಾಮಗಾರಿಗಳು ಪ್ರಗತಿಯಲ್ಲಿವೆ ಎಂದು ಮಾಹಿತಿ ನೀಡಿದರು. ಮುಖ್ಯ ಕಾರ್ಯದರ್ಶಿ ಟಿ.ಎಂ. ವಿಜಯ ಭಾಸ್ಕರ್, ಲೋಕೋಪಯೋಗಿ ಇಲಾಖೆ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ರಜನೀಶ್ ಗೋಯೆಲ್ ಇತರರು ಉಸಪಿ§ತರಿದ್ದರು.
ಅನುದಾನ ಆಧರಿಸಿ ಹೊಸ ಕಾಮಗಾರಿ ಹೊಸ ಕಾಮಗಾರಿ: ಕೈಗೊಳ್ಳಬಾರದು ಎಂದು ಆರ್ಥಿಕ ಇಲಾಖೆ ಹೇಳಿಲ್ಲ. ಸದ್ಯಕ್ಕೆ ಮುಂದುವರಿದ ಕಾಮಗಾರಿಗಳನ್ನು ಕೈಗೊಳ್ಳಲಾಗುತ್ತಿದೆ. ಅನುದಾನದ ಲಭ್ಯತೆ ಆಧರಿಸಿ ಹೊಸ ಕಾಮಗಾರಿ ಕೈಗೊಳ್ಳಲಾಗು ವುದು ಎಂದು ಲೋಕೋಪ ಯೋಗಿ ಸಚಿವ ಗೋವಿಂದ ಕಾರಜೋಳ ಹೇಳಿದರು. ಕೋವಿಡ್- 19 ವೈರಸ್ ಹರಡುವಿಕೆಯಿಂ ದಾಗಿ ರಾಜ್ಯಕ್ಕೆಸಂಪನ್ಮೂಲದ ಕೊರತೆಯಾಗಿದೆ. ಕೇವಲ ಲೋಕೋಪಯೋಗಿ ಇಲಾಖೆಗೆ ಅನುದಾನ ಕೊರತೆ ಎಂದೇನೂ ಇಲ್ಲ. ಇಲಾಖೆಯ ಬಜೆಟ್ ಪರಿಷ್ಕರಿಸುವ ಪ್ರಸಂಗ ಎದುರಾಗಿಲ್ಲ. ಖರ್ಚು- ವೆಚ್ಚ ಹೆಚ್ಚಾಗಿದ್ದು, ಮುಖ್ಯ ಮಂತ್ರಿಗಳು ಇದನ್ನು ನಿರ್ವಹಣೆ ಮಾಡುತ್ತಿದ್ದಾರೆ. ಇಲಾಖೆಯ ಹೊರಗುತ್ತಿಗೆ ನೌಕರರನ್ನು ಕೈಬಿಟ್ಟಿಲ್ಲ ಎಂದು ತಿಳಿಸಿದರು.
ಜಿಲ್ಲಾ ಮುಖ್ಯರಸ್ತೆಗಳ ಮೇಲ್ದರ್ಜೆಗೆ ತೀರ್ಮಾನ: ರಾಜ್ಯದಲ್ಲಿ ಒಟ್ಟು 4813 ರಾಷ್ಟ್ರೀಯ ಹೆದ್ದಾರಿಗಳ ಕಾಮಗಾರಿಗಳನ್ನು 30,675 ಕೋಟಿ ರೂ. ವೆಚ್ಚದಲ್ಲಿ ಕೈಗೆತ್ತಿಕೊಳ್ಳಲಾಗಿದೆ. ಕೇಂದ್ರ ಸರ್ಕಾರದ ಮಾರ್ಗಸೂಚಿಯಂತೆ ಅಂತರ್ಜಲ ವೃದಿ ಹಾಗೂ ಜಾನುವಾರುಗಳಿಗೆ ಕುಡಿಯುವ ನೀರು ಪೂರೈಕೆಗಾಗಿ ಸೇತುವೆಗಳ ತಳ ಭಾಗದಲ್ಲಿ ಒಂದು ಮೀಟರ್‌ನ ತಡೆಗೋಡೆ ನಿರ್ಮಿಸಿ, ನೀರು ಸಂಗ್ರಹಕ್ಕೆ ಕ್ರಮ ವಹಿಸಬೇಕು ಎಂದು ಸಿಎಂ ಯಡಿಯೂರಪ್ಪ ಸಲಹೆ ನೀಡಿದರು. ಸಭೆಯಲ್ಲಿ ರಾಜ್ಯದ 1650 ಕಿ.ಮೀ. ಉದ್ದದ ಗ್ರಾಮೀಣ ರಸ್ತೆಯನ್ನು ಜಿಲ್ಲಾ ಮುಖ್ಯ ರಸ್ತೆಯನ್ನಾಗಿ ಹಾಗೂ 10,110 ಕಿ.ಮೀ .ಉದ್ದದ ಜಿಲ್ಲಾ ಮುಖ್ಯರಸ್ತೆಯನ್ನು ರಾಜ್ಯ ಹೆದ್ದಾರಿಯನ್ನಾಗಿ ಮೇಲ್ದರ್ಜೆಗೇರಿಸಲು ತೀರ್ಮಾನಿಸಲಾಯಿತು.