Advertisement

“ಮೈತ್ರಿ ಧರ್ಮ’ಪಾಲನೆಗೆ ಮುಂದಾದ್ರೆ ಸಿಎಂ?

06:00 AM Jun 20, 2018 | Team Udayavani |

ಬೆಂಗಳೂರು: ಹಿಂದಿನ ಕಾಂಗ್ರೆಸ್‌ ಸರ್ಕಾರದ ಅವಧಿಯಲ್ಲಿ ಸಿದ್ದರಾಮಯ್ಯ ವಿರುದ್ಧ ಹ್ಯೂಬ್ಲೋಟ್‌ ವಾಚ್‌ ಪ್ರಕರಣ, ಮೈಸೂರು
ಮಿನರಲ್ಸ್‌ ಪ್ರಕರಣ ಸೇರಿ ದಂತೆ ಹಲವು ಆರೋಪಗಳನ್ನು ಮಾಡಿದ್ದ ಸಿಎಂ ಎಚ್‌.ಡಿ. ಕುಮಾರಸ್ವಾಮಿ, ಇದೀಗ ಆ ಪ್ರಕರಣಗಳಿಗೆ
ಸಂಬಂಧಿಸಿದಂತೆ “ಮೈತ್ರಿ ಧರ್ಮ’ ಪಾಲಿಸಲು ಮುಂದಾಗಿದ್ದಾರೆ.

Advertisement

ಪ್ರಸ್‌ಕ್ಲಬ್‌ ಮತ್ತು ಬೆಂಗಳೂರು ವರದಿಗಾರರ ಕೂಟ ಮಂಗಳವಾರ ಆಯೋಜಿಸಿದ್ದ ಮಾಧ್ಯಮ ಸಂವಾದದಲ್ಲಿ ಸುದ್ದಿಗಾರರ ಪ್ರಶ್ನೆಗಳಿಗೆ ಉತ್ತರಿಸಿದ ಮುಖ್ಯಮಂತ್ರಿಗಳು, ದುಬಾರಿ ಮೌಲ್ಯದ ಹ್ಯೂಬ್ಲೋಟ್‌ ವಾಚ್‌ ಸೇರಿದಂತೆ ಸಿದ್ದರಾಮಯ್ಯ ಹಾಗೂ ಕಾಂಗ್ರೆಸ್‌ ಸರ್ಕಾ ರದ ವಿರುದಟಛಿ ಈ ಹಿಂದೆ ವಿಧಾನಸಭೆಯಲ್ಲಿ ಜೆಡಿಎಸ್‌ ನಾಯಕರಾಗಿದ್ದಾಗ ಮಾಡಿದ್ದ ಆರೋಪಗಳ ಕುರಿತಂತೆ ತನಿಖೆ ಮುಂದುವರಿಸುವ ವಿಚಾರದಲ್ಲಿ ಸ್ಪಷ್ಟ ನಿಲುವು ತಿಳಿಸಲಿಲ್ಲ. ಅಗತ್ಯವಿದ್ದರೆ ಕ್ರಮ ಕೈಗೊಳ್ಳುತ್ತೇವೆ ಎಂದು ಅಡ್ಡಗೋಡೆ ಮೇಲೆ ದೀಪ ಇಟ್ಟಿದ್ದಾರೆ. ಅಲ್ಲದೆ, ಲೋಕಾಯುಕ್ತ ಮತ್ತು ಭ್ರಷ್ಟಾಚಾರ ನಿಗ್ರಹ ದಳಕ್ಕೆ ಸಂಬಂಧಿಸಿ ದಂತೆಯೂ ಸ್ಪಷ್ಟ ಉತ್ತರ ನೀಡದ ಅವರು, ತನಿಖಾ ಸಂಸ್ಥೆಗಳ ವಿಚಾರದಲ್ಲಿ ಸರ್ಕಾರ ಮಧ್ಯ ಪ್ರವೇಶಿಸುವುದಿಲ್ಲ. ಅಧಿಕಾರಿಗಳು ತನಿಖೆ ನಡೆಸಲು ಮುಕ್ತ ಅವಕಾಶ
ಕಲ್ಪಿಸಲಾಗುವುದು ಎಂದಷ್ಟೇ ಹೇಳಿದರು.

ಈ ಹಿಂದೆ ಪ್ರತಿಪಕ್ಷದಲ್ಲಿದ್ದಾಗ, ಸಿದ್ದರಾಮಯ್ಯ ಅವರ ಹ್ಯೂಬ್ಲೋಟ್‌ ವಾಚ್‌ ಪ್ರಕರಣ ಬಹಿರಂಗಗೊಳಿಸಿದಿರಿ. ಮೈಸೂರು ಮಿನರಲ್ಸ್‌
ಅಕ್ರಮ ಸೇರಿದಂತೆ ಅನೇಕ ಹಗರಣಗಳನ್ನು ಬೆಳಕಿಗೆ ತಂದಿರಿ. ಆದರೆ, ಈವರೆಗೆ ಯಾವುದೇ ಕ್ರಮ ಆಗಿಲ್ಲ. ನಿಮ್ಮ ಸರ್ಕಾರದ ಅವಧಿಯಲ್ಲಿ ತನಿಖೆ ಮುಂದುವರಿಸುತ್ತೀರಾ ಎಂಬ ಸುದ್ದಿ ಗಾರರ ಪ್ರಶ್ನೆಗೆ, ಅಗತ್ಯ ಇದ್ದರೆ ತೀರ್ಮಾನ ಕೈಗೊಳ್ಳುತ್ತೇವೆ ಎಂದಷ್ಟೇ ಹೇಳಿದರು. ಭ್ರಷ್ಟಾಚಾರ ನಿಗ್ರಹಕ್ಕೆ ಲೋಕಾ ಯುಕ್ತ ಸಂಸ್ಥೆಯನ್ನು ಮೊದಲಿನಂತೇ ಬಲವರ್ಧನೆಗೊಳಿಸಲಾಗುವುದು ಮತ್ತು
ಎಸಿಬಿ ರದ್ದುಗೊಳಿಸಲಾಗುವುದು ಎಂದು ಜೆಡಿಎಸ್‌ ಪ್ರಣಾಳಿಕೆಯಲ್ಲಿ ಘೋಷಿಸಿದ್ದ ಬಗ್ಗೆ ಪ್ರಶ್ನಿಸಿದಾಗಲೂ ಸ್ಪಷ್ಟ ಉತ್ತರ ನೀಡಲಿಲ್ಲ.

ಭೀಮಾ ತೀರದ ಪ್ರಕರಣಗಳ ಕುರಿತಂತೆ ಪ್ರತಿಕ್ರಿಯಿಸಿದ ಅವರು, ಈ ಕುರಿತು ತನಿಖೆ ನಡೆದಿದೆ. ರಾಜಕೀಯ ಒತ್ತಡಗಳಿಗೆ ಮಣಿಯದೆ ನಿಷ್ಪಕ್ಷಪಾತವಾಗಿ ತನಿಖೆ ನಡೆಸಿ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸ ಲಾಗಿದೆ ಎಂದು ತಿಳಿಸಿದರು. ಪ್ರಸ್‌ಕ್ಲಬ್‌ ಅಧ್ಯಕ್ಷ ಸದಾಶಿವ ಶೆಣೈ, ಪ್ರಧಾನ ಕಾರ್ಯದರ್ಶಿ ಕಿರಣ್‌, ವರದಿಗಾರರ ಕೂಟದ ಪ್ರಧಾನ ಕಾರ್ಯದರ್ಶಿ
ಎಂ.ಚಂದ್ರಶೇಖರ್‌ ಉಪಸ್ಥಿತರಿದ್ದರು.
 

Advertisement

Udayavani is now on Telegram. Click here to join our channel and stay updated with the latest news.

Next