Advertisement

ಬ್ರಿಮ್ಸ್‌ ಆಸ್ಪತ್ರೆಗೆ ಮೇಜರ್‌ ಸರ್ಜರಿ

10:53 AM Aug 14, 2018 | Team Udayavani |

ಬೀದರ: ನಗರದ ಬ್ರಿಮ್ಸ್‌ ಬೋಧನಾ ಆಸ್ಪತ್ರೆಗೆ ಮೇಜರ್‌ ಸರ್ಜರಿ ಮಾಡಬೇಕಾಗಿದೆ ಎಂದು ವೈದ್ಯಕೀಯ ಶಿಕ್ಷಣ ಖಾತೆ ಸಚಿವ ಡಿ.ಕೆ. ಶಿವಕುಮಾರ ತಿಳಿಸಿದರು.

Advertisement

ಬ್ರಿಮ್ಸ್‌ ಆಸ್ಪತ್ರೆಗೆ ಸೋಮವಾರ ಭೇಟಿ ನೀಡಿ ಪರಿಶೀಲಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಆಸ್ಪತ್ರೆಯಲ್ಲಿ ಬೇಕಾದಷ್ಟು ಬದಲಾವಣೆ ಮಾಡಬೇಕಾಗಿದೆ. ಇಲ್ಲಿ ಎಲ್ಲವೂ ಸರಿ ಇಲ್ಲ ಎಂಬುದು ಗೊತ್ತಾಗಿದೆ. ಅಲ್ಲದೇ ಈಗಾಗಲೇ ಇಲಾಖೆ ಕಾರ್ಯದರ್ಶಿಗಳಿಂದ ವರದಿ ನೀಡುವಂತೆ ಕೂಡ ತಿಳಿಸಿದ್ದೇನೆ. ಇಲ್ಲಿನ ವೈದ್ಯಕೀಯ ಕಾಲೇಜು ಉತ್ತಮವಾಗಿ ನಡೆಯಬೇಕಾಗಿದೆ. ಈ ನಿಟ್ಟಿನಲ್ಲಿ ಸರ್ಕಾರ ದಿಟ್ಟ ನಿರ್ಧಾರ ತೆಗೆದುಕೊಳ್ಳಲಿದೆ ಎಂದು ತಿಳಿಸಿದರು.

ಬ್ರಿಮ್ಸ್‌ ವಿರುದ್ಧ ಅವ್ಯವಹಾರದ ಆರೋಪ ಹಾಗೂ ಎಸಿಬಿ ಪ್ರಕರಣ ಕುರಿತು ಕೇಳಿದ ಪ್ರಶ್ನೆಗೆ ಉತ್ತರಿಸಿದ ಸಚಿವರು, ಪ್ರಕರಣ ದಾಖಲಾಗಿರುವ ಕುರಿತು ಮಾಹಿತಿ ಇಲ್ಲ. ಭ್ರಷ್ಟಾಚಾರ ನಡೆದಿದ್ದರೆ ಅಧಿಕಾರಿಗಳು ನೋಡಿಕೊಳ್ಳುತ್ತಾರೆ.
ನಾನು ಇಲ್ಲಿನ ಭ್ರಷ್ಟಾಚಾರದ ವಿಷಯ ಪರಿಶೀಲಿಸಲು ಬಂದಿಲ್ಲ. ಬದಲಾಗಿ ಇಲ್ಲಿನ ವ್ಯವಸ್ಥೆ ಸರಿಪಡಿಸುವ ನಿಟ್ಟಿನಲ್ಲಿ ಪರಿಶೀಲನೆಗೆ ಬಂದಿದ್ದೇನೆ ಎಂದರು.

Advertisement

Udayavani is now on Telegram. Click here to join our channel and stay updated with the latest news.

Next