Advertisement

ಪೊಲೀಸ್ ಇಲಾಖೆಯಲ್ಲಿ ಮೇಜರ್ ಸರ್ಜರಿ;ಲಕ್ಷ್ಮಣ ನಿಂಬರಗಿ, ಹರಿರಾಂ ಶಂಕರ್ ಸೇರಿ ಹಲವರ ವರ್ಗಾವಣೆ

02:42 PM Jun 27, 2022 | Team Udayavani |

ಬೆಂಗಳೂರು: ಬೆಂಗಳೂರು, ಬೆಳಗಾವಿ, ಮಂಗಳೂರು ಸೇರಿದಂತೆ ಆಯಕಟ್ಟಿನ ಪ್ರದೇಶಗಳ ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ ಮಾಡಿದೆ.

Advertisement

ಬೆಂಗಳೂರು ಆಗ್ನೇಯ ವಿಭಾಗದ ಡಿಸಿಪಿ ಜೋಶಿ ಶ್ರೀನಾಥ್ ಮಹದೇವ್ ಅವರನ್ನು ಕರ್ನಾಟಕ ಲೋಕಾಯುಕ್ತದ ಪೊಲೀಸ್ ವರಿಷ್ಠಾಧಿಕಾರಿಯಾಗಿ (ಎಸ್.ಪಿ) ವರ್ಗಾವಣೆ ಮಾಡಲಾಗಿದೆ.

ಬೆಂಗಳೂರು ಪೂರ್ವ ವಲಯ ಟ್ರಾಫಿಕ್ ಡಿಸಿಪಿ ಕೆ.ಎಂ.ಶಾಂತರಾಜು ಅವರನ್ನು ಬೆಸ್ಕಾಂ ಪೊಲೀಸ್ ವರಿಷ್ಠಾಧಿಕಾರಿಯಾಗಿ ವರ್ಗಾವಣೆ ಮಾಡಲಾಗಿದೆ.

ಐಪಿಎಸ್ ಅಧಿಕಾರಿ ಸಿ.ಕೆ.ಬಾಬಾ ಅವರನ್ನು ಬೆಂಗಳೂರು ಆಗ್ನೇಯ ವಿಭಾಗದ ಡಿಸಿಪಿಯಾಗಿ ವರ್ಗಾವಣೆ ಮಾಡಲಾಗಿದೆ.

ಬೆಂಗಳೂರು ಪಶ್ಚಿಮ ವಿಭಾಗದ ಡಿಸಿಪಿ ಸಂಜೀವ ಎಂ.ಪಾಟೀಲ್ ಅವರನ್ನು ಬೆಳಗಾವಿ ಪೊಲೀಸ್ ವರಿಷ್ಠಾಧಿಕಾರಿಯಾಗಿ ವರ್ಗಾವಣೆ ಮಾಡಲಾಗಿದೆ.

Advertisement

ಬೆಂಗಳೂರು ಕೇಂದ್ರ ಎಸಿಬಿ ವಿಭಾಗದ ಎಸ್ ಪಿ ಕಲಾ ಕೃಷ್ಣಮೂರ್ತಿ ಅವರನ್ನು ಬೆಂಗಳೂರು ಪೂರ್ವ ಟ್ರಾಫಿಕ್ ಡಿಸಿಪಿಯಾಗಿ ವರ್ಗಾಯಿಸಲಾಗಿದೆ.

ಬೆಂಗಳೂರು ದಕ್ಷಿಣ ಡಿಸಿಪಿ ಹರೀಶ್ ಪಾಂಡೆ ಅವರನ್ನು ಬೆಂಗಳೂರು ಎಸಿಬಿ ಪೊಲೀಸ್ ವರಿಷ್ಠಾಧಿಕಾರಿಯಾಗಿ ನೇಮಿಸಲಾಗಿದೆ.

ಬೆಳಗಾವಿ ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮಣ್ ನಿಂಬರಗಿ ಅವರನ್ನು ಬೆಂಗಳೂರು ನಗರ ಪಶ್ಚಿಮ ವಿಭಾಗದ ಡಿಸಿಪಿಯಾಗಿ ನೇಮಿಸಲಾಗಿದೆ.

ಕ್ರಿಮಿನಲ್ ಇನ್ವೆಸ್ಟಿಗೇಶನ್ ಡಿಪಾರ್ಟ್ ಮೆಂಟ್ ಬೆಂಗಳೂರು ಎಸ್ ಪಿ ನಾಗೇಶ್ ಡಿ.ಎಲ್ ಅವರನ್ನು ಚಿಕ್ಕಬಳ್ಳಾಪುರ ಎಸ್ ಪಿಯಾಗಿ ವರ್ಗಾಯಿಸಲಾಗಿದೆ.

ಬಾಗಲಕೋಟೆ ಎಸ್ ಪಿ ಲೋಕೆಶ್ ಭರಮಪ್ಪ ಜಗಲಸರ್ ಅವರನ್ನು ಧಾರವಾಡ ಎಸ್ ಪಿಯಾಗಿ ವರ್ಗಾಯಿಸಿ ಆದೇಶಿಸಲಾಗಿದೆ.

ಹಾಸನ ಎಸ್ ಪಿ ಆರ್.ಶ್ರೀನಿವಾಸ ಗೌಡ ಅವರನ್ನು ಬೆಂಗಳೂರು ನಗರ ಕೇಂದ್ರ ವಿಭಾಗದ ಡಿಸಿಪಿಯಾಗಿ ನೇಮಿಸಲಾಗಿದೆ.

ಚಿಕ್ಕಬಳ್ಳಾಪುರ ಎಸ್ ಪಿ ಮಿಥುನ್ ಕುಮಾರ್ ಅವರನ್ನು ಬೆಂಗಳೂರು ಕ್ರಿಮಿನಲ್ ಇನ್ವೆಸ್ಟಿಗೇಶನ್ ಡಿಪಾರ್ಟ್ ಮೆಂಟ್ ಎಸ್ ಪಿಯಾಗಿ ನೇಮಿಸಲಾಗಿದೆ.

ಇದನ್ನೂ ಓದಿ:ರಾಷ್ಟ್ರಪತಿ ಚುನಾವಣೆ: ವಿಪಕ್ಷಗಳ ಅಭ್ಯರ್ಥಿ ಯಶವಂತ್ ಸಿನ್ಹಾ ನಾಮಪತ್ರ ಸಲ್ಲಿಕೆ

ಧಾರವಾಡ ಎಸ್ ಪಿ ಕೃಷ್ಣಕಾಂತ ಅವರನ್ನು ಬೆಂಗಳೂರು ನಗರ ದಕ್ಷಿಣ ವಿಭಾಗದ ಡಿಸಿಪಿಯಾಗಿ ವರ್ಗಾಯಿಸಲಾಗಿದೆ.

ಮಂಗಳೂರು ನಗರ ಕಾನೂನು ಸುವ್ಯವಸ್ಥೆ ಡಿಸಿಪಿ ಹರಿರಾಂ ಶಂಕರ್ ಅವರನ್ನು ಹಾಸನ ಎಸ್ ಪಿಯಾಗಿ ವರ್ಗಾವಣೆ ಮಾಡಲಾಗಿದೆ.

ದಾವಣಗೆರೆ ಎಸಿಬಿಯ ಎಸ್ ಪಿ ಜಯಪ್ರಕಾಶ್ ಅವರನ್ನು ಬಾಗಲಕೋಟೆ ಎಸ್ ಪಿಯಾಗಿ ನೇಮಿಸಲಾಗಿದೆ.

ಬೆಸ್ಕಾಂ ಎಸ್ ಪಿ ಶೋಭಾ ರಾಣಿ ಅವರನ್ನು ಬೆಂಗಳೂರು ಎಸಿಬಿ ಎಸ್ ಪಿಯಾಗಿ ವರ್ಗಾವಣೆ ಮಾಡಲಾಗಿದೆ.

ಬಂಟ್ವಾಳ ಉಪ ವಿಭಾಗ ಎಎಸ್ ಪಿ ಶ್ರೀನಿವಾಸು ರಾಜಪುತ್ ಅವರನ್ನು ಹುಮ್ನಾಬಾದ್ ಉಪ ವಿಭಾಗ ಎಎಸ್ ಪಿಯಾಗಿ ವರ್ಗಾವಣೆ ಮಾಡಿ ಸರ್ಕಾರ ಆದೇಶಿಸಿದೆ.

Advertisement

Udayavani is now on Telegram. Click here to join our channel and stay updated with the latest news.

Next