Advertisement

ಉಡುಪಿ ಮಕರ ಸಂಕ್ರಾಂತಿ ಮೂರು ತೇರು ಉತ್ಸವ

12:59 AM Jan 15, 2022 | Team Udayavani |

ಉಡುಪಿ: ಶ್ರೀಕೃಷ್ಣ ಮಠದಲ್ಲಿ ಪರ್ಯಾಯ ಅದಮಾರು ಮಠದ ಶ್ರೀ ಈಶಪ್ರಿಯತೀರ್ಥ ಶ್ರೀಪಾದರ ನೇತೃತ್ವದಲ್ಲಿ ಶುಕ್ರವಾರ ಮಕರ ಸಂಕ್ರಾಂತಿಯಂದು ಬ್ರಹ್ಮರಥ ಸಹಿತ ಮೂರು ತೇರುಗಳ ಉತ್ಸವ ಸರಳವಾಗಿ ಜರಗಿತು.

Advertisement

ಅದಮಾರು, ಪೇಜಾವರ, ಕಾಣಿಯೂರು, ಸೋದೆ, ಪಲಿಮಾರು ಹಿರಿಯ, ಕಿರಿಯ, ಶೀರೂರು ಸ್ವಾಮೀಜಿಯವರು ಪಾಲ್ಗೊಂಡಿದ್ದರು. ಮೂರು ರಥಗಳಲ್ಲಿ ಶ್ರೀಕೃಷ್ಣ, ಮುಖ್ಯಪ್ರಾಣ, ಅನಂತೇಶ್ವರ, ಚಂದ್ರಮೌಳೀಶ್ವರ ದೇವರ ಉತ್ಸವ ಮೂರ್ತಿಗಳನ್ನು ಇರಿಸಿ ಉತ್ಸವ ನಡೆಸಲಾಯಿತು.

ಮಧ್ವಸರೋವರದಲ್ಲಿ ತೆಪ್ಪೋತ್ಸವ ನಡೆದ ಬಳಿಕ ರಥೋತ್ಸವ ನಡೆಯಿತು. ವಿದ್ಯುದ್ದೀಪಗಳು ಮತ್ತು ಆಕರ್ಷಕ ಸುಡು ಮದ್ದುಗಳ ಪ್ರದರ್ಶನ ನಡೆಯಿತು.

ಇದನ್ನೂ ಓದಿ:ಧರ್ಮಸ್ಥಳಕ್ಕೆ 10 ಟನ್‌ ತರಕಾರಿ ರವಾನೆ

ಇಂದು ಚೂರ್ಣೋತ್ಸವ
ಶನಿವಾರ ಬೆಳಗ್ಗೆ 8.30 ಗಂಟೆಗೆ ಚೂರ್ಣೋತ್ಸವ, ಅವಭೃಥ ಸ್ನಾನ ನಡೆಯಲಿದೆ. ಮಂಗಳವಾರ ಪರ್ಯಾಯೋತ್ಸವ ಜರಗಲಿದೆ.

Advertisement

 

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next