Advertisement

Hosapete: ಮಕರ ಸಂಕ್ರಾತಿ: ದಕ್ಷಿಣಕಾಶಿ ಹಂಪಿಗೆ ಪ್ರವಾಸಿಗರ ದಂಡು!

01:44 PM Jan 15, 2024 | Team Udayavani |

ಹೊಸಪೇಟೆ: ಮಕರ ಸಂಕ್ರಾತಿ ಪ್ರಯುಕ್ತ ದಕ್ಷಿಣಕಾಶಿ ಖ್ಯಾತಿ ಹಂಪಿಗೆ ರಾಜ್ಯ, ನೆರೆ ರಾಜ್ಯದಿಂದ ಅಪಾರ ಪ್ರಮಾಣದ ಭಕ್ತರು, ಸೋಮವಾರ ಆಗಮಿಸಿ, ವಿರೂಪಾಕ್ಷ ಹಾಗೂ ಪಂಪಾದೇವಿ ದರ್ಶನ ಪಡೆದರು.

Advertisement

ಸಂಕ್ರಾತಿ ಸಂಭ್ರಮದ ನಿಮಿತ್ತ ಭಾನುವಾರವೇ ಹಂಪಿಯ ಕಡೆ ಮುಖ ಮಾಡಿದ್ದ ಪ್ರವಾಸಿಗರು, ನಸುಕಿನಲ್ಲಿ ತುಂಗನದಿಯಲ್ಲಿ ಸ್ನಾನ-ಸಂಧ್ಯವಂದನೆ ಪೂರ್ಣಗೊಳಿಸಿ, ಸರದಿ ಸಾಲಿನಲ್ಲಿ ವಿರೂಪಾಕೇಶ್ವರ ದೇವರ ದರ್ಶನ ಪಡೆದರು. ಹೂ-ಹಣ್ಣು ಕಾಣಿಕೆ ಸಲ್ಲಿಸಿ ಭಕ್ತಿ ಮೆರೆದರು. ಹಬ್ಬದ ಹಿನ್ನೆಲೆಯಲ್ಲಿ ಶ್ರೀ ವಿರೂಪಾಕ್ಷೇಶ್ವರ ಸ್ವಾಮಿಗೆ ವಿಶೇಷ ಪೂಜೆ ನೆರವೇರಿಸಲಾಯಿತು. ಅಭಿಷೇಕ, ವಿಶೇಷ ಅಲಂಕಾರ ಮಾಡಲಾಗಿತ್ತು.

ತುಂಗನದಿ ತೀರದಲ್ಲಿ ಪರಿವಾರ ಸಮೇತ ಸಹ ಭೋಜನ ಸವಿದರು. ರೊಟ್ಟಿ, ಕಾಳು, ಚಟ್ನಿ ಸೇರಿದಂತೆ ಬಗೆಬಗೆಯ ರುಚಿಯನ್ನು ಆಹಾರದ ಬುತ್ತಿ ತಂದಿದ್ದರು.

ವಿರೂಪಾಕ್ಷೇಶ್ವರ ದೇವಸ್ಥಾನದ ಹತ್ತಿರದ ಸ್ನಾನಘಟ್ಟ, ಕೋದಂಡರಾಮ ದೇವಾಲಯ ಹಾಗೂ ಪುರಂದರ ಮಂಟಪದ ಬಳಿ ಯಾತ್ರಾರ್ಥಿಗಳು ಸಹ ಭೋಜನ ಮಾಡುವುದು ಕಂಡು ಬಂದಿತು. ಪೊಲೀಸ್ ಹಾಗೂ ಹೋಮ್‌ಗಾರ್ಡ್ ಸಿಬ್ಬಂದಿಗಳು ಪ್ರವಾಸಿಗರು ನದಿ ನೀರಿನಲ್ಲಿ ಇಳಿಯದಂತೆ ಸೂಚನೆ ನೀಡುತ್ತಿದ್ದರು.

ಸ್ಮಾರಕ ವೀಕ್ಷಣೆ:ಮೊದಲು ವಿರೂಪಾಕ್ಷೇಶ್ವರ ಸ್ವಾಮಿ ದರ್ಶನದ ನಂತರ, ಸಾಸುವೆಕಾಳು ಗಣಪತಿ, ಕಡಲೆಕಾಳು ಗಣಪತಿ, ಕೃಷ್ಣ ದೇವಾಲಯ, ಬಡವಿಲಿಂಗ, ಲಕ್ಷ್ಮೀ ನರಸಿಂಹ, ಉದ್ದಾನ ವೀರಭದ್ರೇಶ್ವರ, ಭೂಮಿಮಟ್ಟದ ಶಿವಾಲಯ, ಹಜಾರರಾಮ ದೇವಾಲಯ, ಕಮಲ ಮಹಲ್, ಗಜಶಾಲೆ, ರಾಣಿ ಸ್ನಾನಗೃಹ, ಮಾಲ್ಯವಂತ ರಘುನಾಥ ದೇವಾಲಯ ಹಾಗೂ ವಿಜಯವಿಠಲ ದೇವಾಲಯದ ಆವರಣದಲ್ಲಿ ಪ್ರವಾಸಿಗರು ಹೆಚ್ಚಾಗಿ ಕಂಡು ಬಂದರು. ಸ್ಮಾರಕಗಳ ಬಳಿ ಮೊಬೈಲ್ ಕ್ಯಾಮೆರಾಗಳ ಮೂಲಕ ಸೆಲ್ಪಿ ಕ್ಲಿಕ್ಕಿಸಿಕೊಂಡು ಸಂಭ್ರಮಿಸಿದರು.

Advertisement

ವ್ಯಾಪಾರ ಜೋರು:

ಮಕರ ಸಂಕ್ರಾತಿ ಅಂಗವಾಗಿ ಹಂಪಿಗೆ ಹೆಚ್ಚಿನ ಸಂಖ್ಯೆಯಲ್ಲಿ ಪ್ರವಾಸಿಗರು ಭೇಟಿ ನೀಡಿರುವ ಹಿನ್ನೆಲೆಯಲ್ಲಿ ಎಂದಿಗಿAತಲೂ ಇಂದು ಹೂ-ಹಣ್ಣು, ಕಾಯಿ ವ್ಯಾಪಾರ ಜೋರಾಗಿ ನಡೆದಿತ್ತು.

ಕಾಲ್ನಡಿಗೆ:

ವಿಜಯವಿಠಲ ದೇವಾಲಯಕ್ಕೆ ತೆರಳುವ ಬ್ಯಾಟರಿ ಚಾಲಿತ ವಾಹನಗಳ ಕೊರತೆ ಹಿನ್ನೆಲೆಯಲ್ಲಿ ಕೆಲ ಪ್ರವಾಸಿಗರು, ಕಾಲ್ನಡಿಗೆಯಲ್ಲಿ ವಿಠಲ ದೇಗುಲಕ್ಕೆ ತೆರಳಿದರು.

ಲಾಡ್ಜ್ ಪುಲ್:

ಸರಣಿ ರಜೆ ಹಿನ್ನೆಲೆಯಲ್ಲಿ ಸಹಸ್ರಾರು ಸಂಖ್ಯೆಯಲ್ಲಿ ಪ್ರವಾಸಿಗರು ಹಂಪಿಗೆ ಆಗಮಿಸಿದ್ದು, ಹೊಸಪೇಟೆ, ಕಮಲಾಪುರ ಸುತ್ತಮುತ್ತಲಿನ ಲಾಡ್ಜ್-ಹೋಟೆಲ್‌ಗಳು ಪುಲ್ ಆಗಿದ್ದವು. ಬಸ್, ಆಟೋ, ಕಾರು ಹಾಗೂ ಇತರೆ ವಾಹನಗಳಲ್ಲಿ ಪ್ರವಾಸಿಗರು ಆಗಮಿಸಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next