Advertisement

ತಂತ್ರಜ್ಞಾನದ ಬಗ್ಗೆ ರೈತರಿಗೆ ತಿಳಿಸಿ

06:25 PM Oct 23, 2021 | Team Udayavani |

ಕೋಲಾರ: ಕೇಂದ್ರ ಮತ್ತು ರಾಜ್ಯ ಸರ್ಕಾರದ ಎಲ್ಲಾ ಯೋಜನೆಗಳು, ನೂತನ ತಂತ್ರಜ್ಞಾದ ಬಗ್ಗೆ ರೈತರಿಗೆ ಅರಿವು ಮೂಡಿಸಿ. ಗ್ರಾಪಂ, ಗ್ರಾಮಸಭೆ ಹಾಗೂ ರೈತ ಸಂಪರ್ಕ ಕೇಂದ್ರಗಳಲ್ಲಿ ರೈತರಿಗೆ ಸಿಗುವ ಸೌಲಭ್ಯಗಳ ಕುರಿತು ಮಾಹಿತಿ ನೀಡಬೇಕು ಎಂದು ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ತಿಳಿಸಿದರು.

Advertisement

ಜಿಲ್ಲಾ ಧಿಕಾರಿಗಳ ನ್ಯಾಯಾಂಗ ಸಭಾಂಗ ಣ ದಲ್ಲಿ ಕೃಷಿ ಇಲಾಖೆ ಹಾಗೂ ಅದಕ್ಕೆ ಸಂಬಂ ಧಿಸಿದ ಇಲಾಖೆಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತ ನಾಡಿ, ಜಿಲ್ಲೆಯಲ್ಲಿ ನಕಲಿ ಬಿತ್ತನೆ ಬೀಜ, ಕೀಟನಾಶಕ, ರಸಗೊಬ್ಬರಗಳ ಮಾರಾಟ ಮಾಡುವವರ ವಿರುದ್ಧ ಕ್ರಮ ಕೈಗೊಳ್ಳಿ ಎಂದು ಅ ಧಿಕಾರಿಗಳಿಗೆ ಸೂಚಿಸಿದರು.

ಇದನ್ನೂ ಓದಿ:- 11 ಮಂದಿ ಚಾರಣಿಗರು ಸಾವು, 17,000 ಅಡಿ ಎತ್ತರದಲ್ಲಿ ವಾಯುಪಡೆ ಕಾರ್ಯಾಚರಣೆ

ಬೇವಿನಸೊಪ್ಪಿನ ಅರಿವು ಮೂಡಿಸಿ: ಸಾವಯವದ ಮೂಲಕ ಬೆಳೆದ ಬೆಳೆಗಳಿಗೆ ವಿಶ್ವ ಮಟ್ಟದಲ್ಲಿ ಹೆಚ್ಚಿನ ಬೇಡಿಕೆಯಿದೆ. ಬೇವಿನಸೊಪ್ಪಿನ ಬೆಳೆಯ ಬಗ್ಗೆ ರೈತರಿಗೆ ಅರಿವು ಮೂಡಿಸಿ ಎಂದು ಅವರು ತಿಳಿಸಿದರು. ಕೃಷಿ ಇಲಾಖೆಯ ಜಂಟಿ ನಿರ್ದೇಶಕಿ ರೂಪದೇವಿ, ಜಿಲ್ಲೆಯಲ್ಲಿ ಬಿತ್ತನೆ ಪ್ರದೇಶ 2,09,566 ಹೆಕ್ಟರ್‌ ಪ್ರದೇಶ, ಕೃಷಿ ಬೆಳೆಗಳ ವಿಸ್ತಿರ್ಣ 97,900 ಹೆಕ್ಟೇರ್‌, ತೋಟಗಾರಿಕೆ ಬೆಳೆಗಳ ವಿಸ್ತೀರ್ಣ 1 ಲಕ್ಷ ಹೆಕ್ಟೇರ್‌ ಹಾಗೂ ರೇಷ್ಮೆ ಬೆಳೆ ವಿಸ್ತೀರ್ಣ 19,329 ಹೆಕ್ಟೇರ್‌ ಪ್ರದೇಶವಿದೆ. ಜಿಲ್ಲೆಯಲ್ಲಿ ಒಟ್ಟು 8,19,509 ಜಾನುವಾರುಗಳಿವೆ. ಕಳೆದ 2 ವರ್ಷಗಳಿಂದ ಜಿಲ್ಲೆಯಲ್ಲಿ ಉತ್ತಮ ಮಳೆಯಾಗುತ್ತಿದೆ.

ಫ್ರೂಟ್ಸ್ ಯೋಜನೆಯಲ್ಲಿ ಜಿಲ್ಲೆಯ 1,94,343 ರೈತರು ನೊಂದಾಯಿಸಿ ಕೊಂಡಿ ದ್ದಾರೆ ಎಂದು ತಿಳಿಸಿದರು. ಇದಕ್ಕೆ ಪ್ರತಿಕ್ರಿಯಿಸಿದ ಸಚಿವರು, ಫ್ರೂಟ್ಸ್ ನಲ್ಲಿ ಶೇ.100 ರೈತರನ್ನು ನೋಂದಾ ಯಿಸಿ ಎಂದು ಅ ಧಿಕಾರಿಗಳಿಗೆ ಸೂಚಿಸಿದರು.‌

Advertisement

ಸಂಸದ ಎಸ್‌.ಮುನಿಸ್ವಾಮಿ ಕೃಷಿ ಯಂತ್ರೋಪಕರಣಗಳ ಸಹಾಯಧನ ಯೋಜನೆಯಲ್ಲಿ ಹೆಚ್ಚಿನ ಫಲಾನುಭವಿಗಳಿಗೆ ನೀಡಿ. ಹೋಬಳಿಯ ಮಟ್ಟದಲ್ಲಿ ಕೋಲ್ಡ್‌ ಸ್ಟೋರೇಜ್‌ ಸ್ಥಾಪಿಸಬೇಕು. ದೇಶದಲ್ಲಿ ಯಾವ ರಾಜ್ಯದಲ್ಲಿ ಯಾವ ರೀತಿಯ ಬೆಳೆ ಬೆಳೆಯುತ್ತಿದ್ದಾರೆ, ಯಾವ ಬೆಳೆಗೆ ಬೇಡಿಕೆ ಹೆಚ್ಚಿದೆ ಎಂಬುವುದರ ಮಾಹಿತಿಯನ್ನು ರೈತರಿಗೆ ನೀಡಬೇಕು ಎಂದು ತಿಳಿಸಿದರು.

ಜಿಲ್ಲಾ ಧಿಕಾರಿ ಡಾ.ಆರ್‌.ಸೆಲ್ವಮಣಿ ಜಿಲ್ಲೆಯಲ್ಲಿ ಕೆ.ಸಿ.ವ್ಯಾಲಿ ನೀರಿನಿಂದ ತುಂಬಾ ಕೆರೆಗಳು ತುಂಬಿವೆ. ಜಿಲ್ಲೆಯಲ್ಲಿ ಇದುವರೆಗೂ 200 ಎಕರೆ ಬೆಳೆ ಹೆಚ್ಚಿನ ಮಳೆಯಿಂದ ನಾಶವಾಗಿದೆ. ಎಪಿಎಂಸಿ ಮಾರುಕಟ್ಟೆಗೆ ಜಾಗವನ್ನು ಗುರುತಿಸಲಾಗಿದೆ ಎಂದು ತಿಳಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next