ದೇವನಹಳ್ಳಿ: ಗ್ರಾಮೀಣ ಪ್ರದೇಶದಲ್ಲಿ ಕ್ಷಯ ರೋಗದ ಬಗ್ಗೆ ಹೆಚ್ಚಿನ ಜಾಗೃತಿ ಮೂಡಿಸಬೇಕು ಎಂದು ಗ್ರಾಪಂ ಅಧ್ಯಕ್ಷ ಕೆ.ಶ್ರೀನಿವಾಸ್‌ಗೌಡ ಸಲಹೆ ನೀಡಿದರು.
ತಾಲೂಕಿನ ಚನ್ನರಾಯಪಟ್ಟಣ ಹೋಬಳಿ ಬೂದಿಗೆರೆ ಗ್ರಾಮದಲ್ಲಿ ಗ್ರಾಪಂ ಮತ್ತು ಪ್ರಾಥಮಿಕ ಆರೋಗ್ಯ ಕೇಂದ್ರ, ಸರ್ಕಾರಿ ಪ್ರಾಥಮಿಕ ಶಾಲೆ ವತಿಯಿಂದ ಹಮ್ಮಿಕೊಂಡಿದ್ದ ಕ್ಷಯರೋಗ ಪತ್ತೆ ಮತ್ತು ಚಿಕಿತ್ಸಾ ಆಂದೋಲನ ಜಾಥಾಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.
ಪ್ರಾಥಮಿಕ ಕೇಂದ್ರಕ್ಕೆ ಹೋಗಿ ಪರೀಕ್ಷೆ ಮಾಡಿಸಿ ಕೊಳ್ಳಿ: ಯಾರಿಗಾದರೂ ಮೂರು ವಾರಕ್ಕಿಂತ ಹೆಚ್ಚು ಸಮಯ ಕೆಮ್ಮು ಇದ್ದರೆ ಕೂಡಪ್ರಾಥಮಿಕ ಕೇಂದ್ರಕ್ಕೆ ಹೋಗಿ ಪರೀಕ್ಷೆ ಮಾಡಿಸಿಕೊಲೇ ಸ್ಥಳೀಯ ಪ್ರಾಥಮಿಕ ಕೇಂದ್ರಕ್ಕೆ ಹೋಗಿ ಪರೀಕ್ಷೆ ಮಾಡಿಸಿಕೊಳ್ಳಬೇಕು. ಯಾವುದೇ ಕಾರಣಕ್ಕೂ ಕೆಮ್ಮು ನಿರ್ಲಕ್ಷ್ಯ ವಹಿಸದೆ ತಕ್ಷಣ ವೈದ್ಯರಿಂದ ಚಿಕಿತ್ಸೆ ಪಡೆದು ಗುಣಮುಖರಾಗ ಬೇಕು. ಕ್ಷಯ ರೋಗದ ಬಗ್ಗೆ ವೈದ್ಯರು ಹೆಚ್ಚು ತಿಳಿವಳಿಕೆ ಜನರಿಗೆ ನೀಡುವಂತಾಗಬೇಕು. ಶಾಲಾ ಮಕ್ಕಳು ತಮ್ಮ ಮನೆ ಅಕ್ಕಪಕ್ಕದ ಜನರಿಗೆ ಕ್ಷಯ ರೋಗದ ಬಗ್ಗೆ ತಿಳಿಸಿಕೊಡಬೇಕು ಎಂದು ಹೇಳಿದರು.
ನೀರು, ಗಾಳಿ, ಪರಿಸರ ಮಲಿನ: ಎಲ್ಲರೂ ದುಡ್ಡಿನಿಂದ ಶ್ರೀಮಂತರಾಗಲು ಹೊರಟಿದ್ದಾರೆ. ದುಡ್ಡಿನಿಂದ ಆರೋಗ್ಯ ಖರೀದಿಸಲು ಸಾಧ್ಯವೇ ಎಂದು ಪ್ರಶ್ನಿಸಿ ಇತ್ತಿಚಿನ ದಿನಗಳಲ್ಲಿ ಕ್ಯಾನ್ಸರ್, ಮಧುಮೇಹ, ಹೃದಯ ಸಂಬಂಧಿ ಕಾಯಿಲೆ,
ಕ್ಷಯರೋಗ ಇತರೆ ರೋಗಗಳಿಗೆ ಮನುಷ್ಯ ತುತ್ತಾಗುತ್ತಿದ್ದಾನೆ. ಆಧುನಿಕ ಯುಗದಲ್ಲಿ ಹೆಚ್ಚಾಗುತ್ತಿರುವ ತಂತ್ರಜ್ಞಾನ ಬಲಕ್ಕೆ ಮಹತ್ವವಾದ ನೀರು, ಗಾಳಿ, ಪರಿಸರ ಮಲಿನಗೊಳಿಸುತ್ತಿದೆ ಎಂದು ಆತಂಕ ವ್ಯಕ್ತ ಪಡಿಸಿದರು.
ಕ್ಷಯ ರೋಗ ಪತ್ತೆಹಚ್ಚುವ ಕಾರ್ಯಕ್ರಮ: ಶಾಲಾ ಮುಖ್ಯ ಶಿಕ್ಷಕ ಲಕ್ಷ್ಮಣ್‌ಮೂರ್ತಿ ಮಾತನಾಡಿ, ಕ್ಷಯ ರೋಗಿಗಳ ಸಂಖ್ಯೆ ಇಳಿಮುಖವಾಗಿದ್ದರೂ ವಿಶ್ವದಲ್ಲಿ ಭಾರತವು ಅತೀ ಹೆಚ್ಚು ಕ್ಷಯ ರೋಗಿಗಳನ್ನು ಹೊಂದಿದೆ. ವಿಶ್ವದ ಶೇ.27 ರಷ್ಟು ಜನರು ದೇಶದಲ್ಲಿದ್ದಾರೆ. ಸರ್ಕಾರವು ಸಕ್ರಿಯ ಕ್ಷಯ ರೋಗ ಪತ್ತೆಹಚ್ಚುವ ಕಾರ್ಯಕ್ರಮ ಹಮ್ಮಿಕೊಂಡಿದೆ. ಶಾಲಾ ಮಕ್ಕಳಿಂದ ಜಾಗೃತಿ ಜಾಥಾ ಹಮ್ಮಿಕೊಳ್ಳುವುದರ ಮೂಲಕ ಜನರಲ್ಲಿ ಜಾಗೃತಿ ಮೂಡಿಸಲಾಗುತ್ತಿದೆ. ದೇಶದಲ್ಲಿ ಕ್ಷಯ
ರೋಗ ಮುಕ್ತ ಮಾಡುವುದೇ ನಮ್ಮ ಗುರಿಯಾಗಿದೆ ಎಂದು ಹೇಳಿದರು.
ಈ ಸಂದರ್ಭದಲ್ಲಿ ಪ್ರಾಥಮಿಕ ಆರೋಗ್ಯ ಕೇಂದ್ರದ ಆಶಾ ಕಾರ್ಯಕರ್ತರು, ತಾಲೂಕು ಆರೋಗ್ಯ ಅಧಿಕಾರಿಗಳ ಕ್ಷಯ ರೋಗ ಪತ್ತೆ ಹಚ್ಚುವ ವಿಚಾರಕರು, ಮತ್ತಿತರರು ಇದ್ದರು.