Advertisement
ನಗದ ಪದವಿ ಮಹಾವಿದ್ಯಾಲಯದಲ್ಲಿ ಜಿಲ್ಲಾಡಳಿತ, ಜಿಪಂ ಹಾಗೂ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಇಲಾಖೆ (ಮಾನಸಿಕ ವಿಭಾಗ) ಆಶ್ರಯದಲ್ಲಿ ಶುಕ್ರವಾರ ನಡೆದ ವಿಶ್ವ ಆತ್ಮಹತ್ಯೆ ತಡೆಗಟ್ಟುವ ದಿನಾಚರಣೆ ಉದ್ಘಾಟಿಸಿ ಅವರು ಮಾತನಾಡಿದರು.
ಆತ್ಮಹತ್ಯೆ ತಡೆಯಲು ಅನೇಕ ರೀತಿಯ ತಿಳಿವಳಿಕೆ ನೀಡಲು ಸರ್ಕಾರ ಯೋಜನೆ ರೂಪಿಸಿದೆ. ಇದನ್ನು ತಡೆಗಟ್ಟಲು ಎಲ್ಲರೂ ಶ್ರಮಿಸಬೇಕು ಎಂದರು. ಮುಖ್ಯ ಅತಿಥಿಗಳಾಗಿ ಜಿಲ್ಲಾಧಿಕಾರಿ ಮಂಜುನಾಥ ಜೆ. ಮಾತನಾಡಿ, ವಿಶ್ವ ಆರೋಗ್ಯ ಸಂಸ್ಥೆ ಪ್ರತಿ ವರ್ಷ ಒಂದೊಂದು
ಘೋಷಣೆ ಮಾಡುತ್ತಿದೆ. ಈ ವರ್ಷದ ಘೋಷಣೆ ಟೇಕ್ ಎ ಮಿನಿಟ್ ಚೇಂಜ್ ಎ ಲೈಫ್ ಎಂದು ಹೇಳಿದರು. ಪ್ರತಿ ವರ್ಷ ಸೆ. 10ರಂದು ವಿಶ್ವ ಆತ್ಮಹತ್ಯೆ ತಡೆಗಟ್ಟುವ ದಿನ ಆಚರಿಸಬೇಕಾಗಿತ್ತು. ಅನಿವಾರ್ಯ ಕಾರಣದಿಂದ ಇದನ್ನು
ಈ ದಿನ ಅಚರಿಸಲಾಗುತ್ತಿದೆ. ಆತ್ಮಹತ್ಯೆ ಬಗ್ಗೆ ಜನರಲ್ಲಿ ಅರಿವು ಮೂಡಿಸಬೇಕು ಎಂದು ಹೇಳಿದರು.
Related Articles
ಮೂಡಿಸಬೇಕೆಂದು ಅವರು ಹೇಳಿದರು. ಜಿಲ್ಲಾ ಮಾನಸಿಕ ಆರೋಗ್ಯ ಅಧಿಕಾರಿ ಡಾ| ಭಗವಂತ ಅನವಾರ ಮಾತನಾಡಿ, ಮಾನಸಿಕ ರೋಗಿಗಳಿಗೆ ಎಲ್ಲಾ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಔಷಧ ಲಭ್ಯವಿದೆ. ಮಾನಸಿಕ ಆರೋಗ್ಯದ ಬಗ್ಗೆ ವೈದ್ಯಾಧಿಕಾರಿಗಳು, ಸಿಬ್ಬಂದಿ ಹಾಗೂ ಮಾನಸಿಕ ಆರೋಗ್ಯ ಕಾರ್ಯಕರ್ತರಿಗೆ ತರಬೇತಿ ನೀಡಲಾಗುತ್ತಿದೆ. ಹೀಗಾಗಿ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲೂ ಚಿಕ್ಸಿತೆ ಪಡೆಯಬಹುದು ಎಂದು ಅವರು ಹೇಳಿದರು.
Advertisement
ವೇದಿಕೆ ಮೇಲೆ ನಗರ ಯೋಜನಾ ಪ್ರಾಧಿಕಾರ ಅಧ್ಯಕ್ಷ ರಾಮರಡ್ಡಿ ತಂಗಡಗಿ, ಆರೋಗ್ಯ ಮತ್ತು ಶಿಕ್ಷಣ ಸ್ಥಾಯಿಸಮಿತಿ ಸರಸ್ವತಿ ಸುಭಾಶಚಂದ್ರ ಹೊನಗೇರಾ, ಪದವಿ ಕಾಲೇಜಿನ ಪ್ರಾಂಶುಪಾಲ ಸುಭಾಶ್ಚಂದ್ರ ಕೌಲಗಿ ಉಪಸ್ಥಿತರಿದ್ದರು. ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಬಿರಾದರ ಶಂಕರ ಅವರು ನಿರೂಪಿಸಿ, ವಂದಿಸಿದರು. ಜಾಗೃತಿ ಜಾಥಾ: ಇದಕ್ಕೂ ಮುನ್ನ ನಗರದ ಪ್ರವಾಸಿ ಮಂದಿರದಲ್ಲಿ ವಿಶ್ವ ಆತ್ಮಹತ್ಯೆ ತಡಗಟ್ಟುವ ದಿನಾಚರಣೆ ಜಾಥಾಕ್ಕೆ ಜಿಲ್ಲಾಧಿಕಾರಿ ಮಂಜುನಾಥ ಜೆ. ಅವರು ಚಾಲನೆ ನೀಡಿದರು.