Advertisement

ಮಕ್ಕಳ ಸುರಕ್ಷತೆಗೆ ಮೊದಲ ಆದ್ಯತೆ ನೀಡಿ: ವರ್ಗೀಸ್‌

05:23 PM Nov 10, 2021 | Team Udayavani |

ಮಾನ್ವಿ: ಅಂಗನವಾಡಿಗಳ ಪ್ರಾರಂಭಕ್ಕೆ ಸರಕಾರವು ಅನುಮತಿ ನೀಡಿದರೂ ಕೋವಿಡ್‌-19 ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸುವ ಮೂಲಕ ಮಕ್ಕಳ ಸುರಕ್ಷತೆಗೆ ಆದ್ಯತೆ ನೀಡುವಂತೆ ತಾಪಂ ಕಾರ್ಯನಿರ್ವಾಹಕ ಅಧಿಕಾರಿ ಸ್ಟೆಲ್ಲಾ ವರ್ಗೀಸ್‌ ತಿಳಿಸಿದರು.

Advertisement

ಪಟ್ಟಣದ ರಾಜೀವಗಾಂಧಿ ನಗರದಲ್ಲಿನ ಅಂಗನವಾಡಿ ಕೇಂದ್ರದಲ್ಲಿ ನಡೆದ ಪುನರ್‌ ಪ್ರಾರಂಭೋತ್ಸವ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ರಾಜ್ಯ ಸರಕಾರವು ಕೋವಿಡ್‌ -19 ಸೋಂಕು ಹರಡುವುದನ್ನು ತಡೆಯುವ ಉದ್ದೇಶದಿಂದ ಅಂಗನವಾಡಿಗಳಲ್ಲಿ ಮಕ್ಕಳ ಪ್ರವೇಶಕ್ಕೆ ನಿರ್ಬಂಧ ವಿಧಿಸಿತ್ತು. ಸೋಂಕಿನ ಪ್ರಮಾಣ ಕಡಿಮೆಯಾಗಿರುವುದರಿಂದ ಪುನರ್‌ ಪ್ರಾರಂಭಕ್ಕೆ ಅವಕಾಶ ನೀಡಿದೆ ಎಂದರು.

ತಹಶೀಲ್ದಾರ್‌ ಅಬ್ದುಲ್‌ ವಾಹಿದ್‌ ಮತ್ತು ತಾಲೂಕು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಅಧಿಕಾರಿ ಸುಭದ್ರಾದೇವಿ ಮಾತನಾಡಿದರು. ಪುರಸಭೆ ಸದಸ್ಯ ಶರಣೆಗೌಡ, ಉಪ ತಹಶೀಲ್ದಾರ್‌ ವಿರುಪಣ್ಣ, ಸಹಾಯಕ ಶಿಶು ಅಭಿವೃದ್ಧಿ ಅಧಿಕಾರಿ ಮಹೇಶ ನಾಯಕ್‌, ವೃತ್ತದ ಮೇಲ್ವಿಚಾರಕರಾದ ಶಾಹೀನಾ ಬಾನು, ಮೇಲ್ವಿಚಾರಕಿ ನಾಗಮ್ಮ ಹಾಗೂ ಅಂಗನವಾಡಿ ಕಾರ್ಯಕರ್ತೆಯರು, ಸಹಾಯಕರು, ಪಾಲಕರು ಇದ್ದರು.

Advertisement

Udayavani is now on Telegram. Click here to join our channel and stay updated with the latest news.

Next