Advertisement

ಸಾಮಾಜಿಕ ನ್ಯಾಯದಡಿ ದಲಿತರಿಗೆ ಸಿಎಂ ಸ್ಥಾನ ನೀಡಿ

04:41 PM Aug 15, 2021 | Team Udayavani |

ಚಾಮರಾಜನಗರ: ಕಾಂಗ್ರೆಸ್‌ನಲ್ಲಿ ಒಂದು ಬಾರಿ ಮುಖ್ಯಮಂತ್ರಿಯಾಗಿ ಅಧಿಕಾರ ಅನುಭವಿಸಿರುವ ಸಿದ್ದರಾಮಯ್ಯ ಅವರು ಮತ್ತೆ ಆ ಪದವಿ ಕೇಳುವುದು ಸರಿಯಲ್ಲ. ಅದೇ ರೀತಿ ಕೆಪಿಸಿಸಿ ಡಿ.ಕೆ.ಶಿವಕುಮಾರ್‌ ಕೂಡ ಸಿಎಂ ಕನಸು ಕಾಣುತ್ತಿದ್ದಾರೆ. 75 ವರ್ಷಗಳಿಂದ ಕಾಂಗ್ರೆಸ್‌ ಬೆಂಬಲಿಸಿಕೊಂಡು ಬಂದಿರುವ ದಲಿತರು ಯಾವಾಗ ಮುಖ್ಯಮಂತ್ರಿ ಆಗೋದು ಎಂದು ನಿವೃತ್ತ ಐಎಎಸ್‌ ಅಧಿಕಾರಿ ಹಾಗೂ ಬಿಜೆಪಿ ಮುಖಂಡ ಕೆ. ಶಿವರಾಂ ಎಂದು ಪ್ರಶ್ನಿಸಿದರು.

Advertisement

ನಗರಕ್ಕೆ ಖಾಸಗಿ ಕಾರ್ಯಕ್ರಮದ ನಿಮಿತ್ತ ಆಗಮಿಸಿದ್ದ ಅವರು, ಸುದ್ದಿಗಾರರೊಂದಿಗೆ ಮಾತನಾಡಿ, ಈಗ ಬಿಜೆಪಿ ದಲಿತರಿಗೆ ಸಿಎಂ ಪದವಿ ನೀಡಬೇಕಾಗಿತ್ತು ಎಂದು ಪ್ರಶ್ನೆ ಮಾಡುವ ಕಾಂಗ್ರೆಸ್ಸಿಗರು ಸಿಎಂ ಪದವಿಗೆ ಎಲ್ಲ ಆರ್ಹತೆ ಹೊಂದಿದ್ದ ಮಲ್ಲಿಕಾರ್ಜನ ಖರ್ಗೆ ಹಾಗೂ ಡಾ| ಜಿ.ಪರಮೇಶ್ವರ್‌ ಅವರಿಗೆ ಏಕೆ ಅಧಿಕಾರ ನೀಡಲಿಲ್ಲ.ಸಿದ್ದರಾಮಯ್ಯ ದುರುದ್ದೇಶದಿಂದಲೇ ಪರಮೇಶ್ವರ್‌ ಅವರನ್ನು ಸೋಲಿಸಿದರು. ಈಗ ಸಿದ್ದರಾಮಯ್ಯ ಅವರಿಗೆ ದಲಿತರ ಬಗ್ಗೆ ಕಾಳಜಿ ಇದ್ದರೆ ದಲಿತ ಸಿಎಂ ಅಭ್ಯರ್ಥಿ ಘೊಷಣೆ ಮಾಡಲಿ ಎಂದು ಒತ್ತಾಯಿಸಿದರು.

ಇದನ್ನೂ ಓದಿ:ಐತಿಹಾಸಿಕ ಕ್ಷಣಕ್ಕೆ ಸಾಕ್ಷಿಯಾದ ಜಮ್ಮು|ಕಣಿವೆ ನಾಡಿನಲ್ಲಿ ಬಾನೆತ್ತರಕ್ಕೆ ಹಾರಿದ ತಿರಂಗಾ  

ಆನೇಕಲ್‌ ಟಿಕೆಟ್‌ ಆಕಾಂಕ್ಷಿ: ಕಳೆದ ಬಾರಿ ಚಾಮರಾಜನಗರ ಲೋಕಸಭೆ ಕ್ಷೇತ್ರದ ಟಿಕೆಟ್‌ ಆಕಾಂಕ್ಷಿಯಾಗಿದ್ದೆ. ಮಾಜಿ ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಅವರು ಕೂಡ ಕ್ಷೇತ್ರದಲ್ಲಿ ಕೆಲಸ ಮಾಡುವಂತೆ ಸೂಚನೆ ನೀಡಿ ಕಳುಹಿಸಿದ್ದರು. ಬಳಿಕ ನಮ್ಮ ಹಿರಿಯ ನಾಯಕರಾದ ಶ್ರೀನಿವಾಸ ಪ್ರಸಾದ್‌ ಅವರಿಗೆ ನೀಡಲಾಯಿತು. ಅವರ ಗೆಲುವಿಗೆ ಶ್ರಮಿಸಿದ್ದೆವು. ಈಗ ಮುಂಬರುವ ವಿಧಾನ ಸಭಾ ಚುನಾವಣೆಯಲ್ಲಿ ರಾಜ್ಯ ರಾಜಕಾರಣ ದಲ್ಲಿ ತೊಡಗಿಸಿಕೊಳ್ಳಬೇಕೆಂಬ ಅಭಿಲಾಷೆ ಹೊಂದಿದ್ದು, ಆನೇಕಲ್‌ ವಿಧಾನಸಭಾ ಕ್ಷೇತ್ರದ ಟಿಕೆಟ್‌ ಆಕಾಂಕ್ಷಿಯಾಗಿದ್ದೇನೆ. ಅಲ್ಲಿ ಈಗಾಗಲೇ ವರಿಷ್ಠ ಸೂಚನೆಯಂತೆ ಕ್ಷೇತ್ರದಲ್ಲಿ ಕೆಲಸ ಮಾಡುತ್ತಿದ್ದೇನೆ ಎಂದು ಶಿವರಾಂ ತಿಳಿಸಿದರು. ಈ ಸಂದರ್ಭದಲ್ಲಿ ಕಾಂಚಿವರದಯ್ಯ, ಕೆಂಪರಾಜು ಉಪಸ್ಥಿತರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next