Advertisement

ಗೋವನ್ನು ರಾಷ್ಟ್ರೀಯ ಪ್ರಾಣಿಯನ್ನಾಗಿ ಘೋಷಿಸಿ; ಕೇಂದ್ರಕ್ಕೆ ಕೋರ್ಟ್

01:51 PM May 31, 2017 | Team Udayavani |

ಜೈಪುರ್: ಜಾನುವಾರುಗಳನ್ನು ವಧೆಗಾಗಿ ಖರೀದಿಸುವ ಮತ್ತು ಮಾರಾಟ ಮಾಡುವುದಕ್ಕೆ ನಿರ್ಬಂಧ ಹೇರಿ ಕೇಂದ್ರ ಸರ್ಕಾರ ಹೊರಡಿಸಿದ್ದ ಅಧಿಸೂಚನೆ ವಿರುದ್ಧ ಹಲವು ರಾಜ್ಯಗಳು ವಿರೋಧ ವ್ಯಕ್ತಪಡಿಸುತ್ತಿರುವ ನಡುವೆಯೇ ಗೋವನ್ನು ರಾಷ್ಟ್ರೀಯ ಪ್ರಾಣಿ ಎಂದು ಘೋಷಿಸಬೇಕು. ಅದೇ ರೀತಿಯಲ್ಲಿ ಗೋ ಹತ್ಯೆ ಮಾಡುವವರಿಗೆ ಜೀವಾವಧಿ ಶಿಕ್ಷೆ ವಿಧಿಸಬೇಕೆಂದು ರಾಜಸ್ಥಾನ್ ಹೈಕೋರ್ಟ್ ಬುಧವಾರ ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡಿದೆ.

Advertisement

ಗೋ ಹತ್ಯೆ ಮಾಡಿದವರಿಗೆ ಈಗಿರುವ 3 ವರ್ಷದ ಜೈಲುಶಿಕ್ಷೆಯನ್ನು ಜೀವಾವಧಿ ಶಿಕ್ಷೆಗೆ ಏರಿಕೆ ಮಾಡಬೇಕು ಎಂದು ಕೋರ್ಟ್ ಸಲಹೆ ನೀಡಿದೆ. ಜಾನುವಾರುಗಳನ್ನು ವಧೆಗಾಗಿ ಖರೀದಿಸುವ ಮತ್ತು ಮಾರಾಟ ಮಾಡುವುದಕ್ಕೆ ನಿರ್ಬಂಧ ಹೇರಿ ಕೇಂದ್ರ ಸರ್ಕಾರ ಹೊರಡಿಸಿದ್ದ ಅಧಿಸೂಚನೆ ವಿರುದ್ಧ ಹಲವು ರಾಜ್ಯಗಳು ವಿರೋಧ ವ್ಯಕ್ತಪಡಿಸುತ್ತಿರುವುದಾಗಿ ದೂರಿ ಸಲ್ಲಿಕೆಯಾಗಿದ್ದ ಅರ್ಜಿಯ ವಿಚಾರಣೆ ವೇಳೆ ಕೋರ್ಟ್ ಈ ಶಿಫಾರಸು ಮಾಡಿದೆ. 

Advertisement

Udayavani is now on Telegram. Click here to join our channel and stay updated with the latest news.

Next