Advertisement
ಪಟ್ಟಣದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆಯ ಮೌಲ್ಯಮಾಪನ ಕಾರ್ಯ ಆರಂಭಿಸಲು ರಾಜ್ಯದ ಶಿಕ್ಷಣ ತಜ್ಞರು, ವೈದ್ಯರು ಹಾಗೂ ಪಿಯು ಇಲಾಖೆಯಲ್ಲಿ ಸೇವೆ ಸಲ್ಲಿಸಿದ ನಿವೃತ್ತ ಹಿರಿಯ ಅಧಿಕಾರಿಗಳೊಂದಿಗೆ ಜರುಗಿದ ಆನ್‌ಲೈನ್ ಸಭೆಯಲ್ಲಿ ವ್ಯಕ್ತಪಡಿಸಿದ ಸಲಹೆ ಕ್ರೋಢಿಕರಿಸಿ ಕರ್ನಾಟಕ ರಾಜ್ಯ ಮಾಧ್ಯಮಿಕ ಶಿಕ್ಷಕ ಸಂಘ ಶಿಕ್ಷಣ ಸಚಿವರಿಗೆ ವರದಿ ಸಲ್ಲಿಸಿತ್ತು. ಮಾಧ್ಯಮಿಕ ಶಿಕ್ಷಕ ಸಂಘದ ಬಹುತೇಕ ಸಲಹೆ ಪರಿಗಣಿಸಿ ಮೌಲ್ಯಮಾಪನ ಕಾರ್ಯ ಆರಂಭಿಸಿರುವುದು ಸಂತಸದ ವಿಷಯ ಎಂದರು. ವಿಜ್ಞಾನ ವಿಭಾಗದ ವಿಷಯಗಳ ಮೌಲ್ಯಮಾಪನ ಕೇಂದ್ರಗಳನ್ನು ರಾಜ್ಯದ ವಿವಿಧ ಭಾಗಗಳಲ್ಲಿ ವೀಕೇಂದ್ರಿಕರಣ ಮಾಡಲು ಸೂಕ್ತ ನಿರ್ಧಾರ ಕೈಗೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ. Advertisement
ಜಿಲ್ಲಾವಾರು ಮೌಲ್ಯಮಾಪನ ವ್ಯವಸ್ಥೆ ಮಾಡಿ: ಸನ್ನಿ
01:40 PM May 27, 2020 | Suhan S |
Advertisement
Udayavani is now on Telegram. Click here to join our channel and stay updated with the latest news.