Advertisement
ನಗರದ ಜಿಲ್ಲಾಡಳಿತ ಭವನದ ಆಡಿಟೋರಿಯಂನಲ್ಲಿ ಭಾನುವಾರ ಜಿಲ್ಲಾಡಳಿತ, ಕಾರ್ಮಿಕ ಇಲಾಖೆ, ರಾಜ್ಯ ಅಸಂಘಟಿತ ಕಾರ್ಮಿಕರ ಸಾಮಾಜಿಕ ಭದ್ರತಾ ಮಂಡಳಿ ಹಾಗೂ ರಾಜ್ಯ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯ ಸಂಯುಕ್ತಾಶ್ರಯದಲ್ಲಿ ಆಯೋಜಿಸಿದ್ದ ಕಾರ್ಮಿಕ ಶ್ರಮ ಸಮ್ಮಾನ ದಿನಾಚರಣೆ ಮತ್ತು ಅಸಂಘಟಿತ ಹಾಗೂ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರಿಗೆ ವಿವಿಧ ಸವಲತ್ತುಗಳ ವಿತರಣಾ ಸಮಾರಂಭ ಉದ್ಘಾಟಿಸಿ ಅವರು ಮಾತನಾಡಿದರು.
Related Articles
Advertisement
ಕಾರ್ಯಕ್ರಮದಲ್ಲಿ ಜಿಲ್ಲಾ ಕಾರ್ಮಿಕ ಅಧಿಕಾರಿ ವರಲಕ್ಷಿ, ಬೆಂಗಳೂರಿನ ಹಿರಿಯ ಕಾರ್ಮಿಕ ನೀರಿಕ್ಷಕ ಸೋಮಶೇಖರ್, ಜಿಪಂ ಯೋಜನಾ ನಿರ್ದೇಶಕ ಗಿರಿಜಾ ಶಂಕರ್, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಹಿರಿಯ ಸಹಾಯಕ ನಿರ್ದೇಶಕ ಜುಂಜಣ್ಣ ಎಂ., ಚಿಂತಾಮಣಿ ತಾಲೂಕಿನ ಕಾರ್ಮಿಕ ನೀರಿಕ್ಷಕರಾದ ಕಲಾವಾಣಿ ಸೇರಿದಂತೆ ಜಿಲ್ಲೆಯ ವಿವಿಧ ತಾಲೂಕುಗಳಿಂದ ಆಗಮಿಸಿದ್ದ ಕಾರ್ಮಿಕರು ಉಪಸ್ಥಿತರಿದ್ದರು.
ಜನಪ್ರತಿನಿಧಿಗಳಿಗೆ ಬೇಡವಾದ ಕಾರ್ಮಿಕ ಶ್ರಮ ದಿನಾಚರಣೆ: ಜಿಲ್ಲಾ ಮಟ್ಟದಲ್ಲಿ ನಡೆದ ಕಾರ್ಮಿಕ ಶ್ರಮ ಸಮ್ಮಾನ್ ಕಾರ್ಯಕ್ರಮದಲ್ಲಿ ಜಿಲ್ಲೆಯ ವಿವಿಧ ರಂಗಗಳ ಕಾರ್ಮಿಕರನ್ನು ಗುರುತಿಸಿ ಸನ್ಮಾನಿಸಿ ಪ್ರೋತ್ಸಾಹಿಸಬೇಕಿದ್ದ ಜಿಲ್ಲೆಯ ಚುನಾಯಿತ ಜನಪ್ರತಿನಿಧಿಗಳು ಸಭೆಯಿಂದ ದೂರ ಉಳಿದಿದ್ದರು. ಭಾನುವಾರ ರಜೆ ಇದ್ದ ಕಾರಣವೋ ಏವೋ ಉಸ್ತುವಾರಿ ಸಚಿವರಿಂದ ಹಿಡಿದು ಸ್ಥಳೀಯ ಶಾಸಕರು ಹಾಗೂ ಸಚಿವರಾದ ಡಾ.ಕೆ.ಸುಧಾಕರ್, ಜಿಪಂ ಅಧ್ಯಕ್ಷರು, ಉಪಾಧ್ಯಕ್ಷರು, ಸ್ಥಳೀಯ ತಾಪಂ ಅಧ್ಯಕ್ಷರು, ಸದಸ್ಯರು ಯಾರು ಕೂಡ ಸಭೆಯತ್ತ ಸುಳಿಯಲಿಲ್ಲ. ಇನ್ನೂ ಜಿಲ್ಲಾ ಮಟ್ಟದಲ್ಲಿ ಉಪ ವಿಭಾಗಾಧಿಕಾರಿ ಎ.ಎನ್.ರಘುನಂದನ್ ಹೊರತುಪಡಿಸಿ ಜಿಲ್ಲಾಧಿಕಾರಿ, ಜಿಪಂ ಸಿಇಒ ಮತ್ತಿತರ ಹಿರಿಯ ಅಧಿಕಾರಿಗಳು ಗೈರು ಹಾಜರಿ ಎದ್ದು ಕಾಣುತ್ತಿತ್ತು.
ವಿವಿಧ ಕಾರ್ಮಿಕರಿಗೆ ಸಮ್ಮಾನ್ ಪ್ರಶಸ್ತಿ: ಕಾರ್ಯಕ್ರಮದಲ್ಲಿ ಜಿಲ್ಲೆಯ ವಿವಿಧ ತಾಲೂಕುಗಳಲ್ಲಿ ವಿವಿಧ ಅಸಂಘಟಿತ ವಲಯಗಳಲ್ಲಿ ಸಾಧನೆ ಮಾಡಿದ ಕಾರ್ಮಿಕರನ್ನು ಗುರುತಿಸಿ ಜಿಲ್ಲಾಡಳಿತದ ಪರವಾಗಿ ಕಾರ್ಮಿಕ ಇಲಾಖೆ ವಿತರಿಸಿದ ಸಮ್ಮಾನ ಪ್ರಶಸ್ತಿಯನ್ನು ಚಿಕ್ಕಬಳ್ಳಾಪುರದ ಉಪ ವಿಭಾಗಾಧಿಕಾರಿ ಎ.ಎನ್.ರಘುನಂದನ್ ಮತ್ತಿತರ ಗಣ್ಯರು ಪ್ರದಾನ ಮಾಡಿ ಗೌರವಿಸಿದರು. ಇದೇ ವೇಳೆ ಕಾರ್ಮಿಕ ಇಲಾಖೆ ವತಿಯಿಂದ ಅಸಂಘಟಿತ ಕಾರ್ಮಿಕರಿಗೆ ಗುರುತಿನ ಚೀಟಿ ಹಾಗೂ ವಿವಿಧ ಸಾದನ ಸಲಕರಣೆಗಳನ್ನು ವಿತರಿಸಲಾಯಿತು.